ಕಲಬುರಗಿ: ಸ್ನಾತಕೋತ್ತರ ಶಿಕ್ಷಣ ಕಾರ್ಯಕ್ರಮಗಳ ಅಡಿಯಲ್ಲಿ ಕೌಶಲ್ಯ ಮತ್ತು ಅಪ್ರೆಂಟಿಸ್‌ಶಿಪ್ ಆಧಾರಿತ ಪದವಿಪೂರ್ವ ಮತ್ತು ಡಿಪ್ಲೊಮಾ ಕೋರ್ಸ್‌ಗಳಿಂದ ಶಿಕ್ಷಣ ಕ್ಷೇತ್ರದಲ್ಲಿ ಬದಲಾವಣೆ ಸಾಧ್ಯ. ಪದವಿ ಶಿಕ್ಷಣ ಮತ್ತು ಸ್ನಾತಕೋತ್ತರ ಶಿಕ್ಷಣ ಹಂತದಲ್ಲಿ ವಿದ್ಯಾರ್ಥಿಗಳಿಗೆ ಜ್ಞಾನದ ಜೊತೆಗೆ ವೃತ್ತಿ ಕೌಶಲ್ಯಗಳನ್ನು ಒದಗಿಸುತ್ತವೆ ಎಂದು ಕೌಶಲ್ಯ ಅಭಿವೃದ್ಧಿ ನಿಗಮದ ಸಚಿವಾಲಯದ ಅಧೀನದ ಲಾಜಿಸ್ಟಿಕ್ಸ್ ಸೆಕ್ಟರ್ ಸ್ಕಿಲ್ ಕೌನ್ಸಿಲ್‌ದ ಪ್ರೊ. ಎಸ್ ಗಣೇಶ ಅಭಿಪ್ರಾಯಪಟ್ಟರು.
ನಗರದ ಶರಣಬಸವ ವಿಶ್ವವಿದ್ಯಾಲಯದಲ್ಲಿ ಬುಧವಾರ ಬಿಬಿಎ ಲಾಜಿಸ್ಟಿಕ್ಸ್, ಬಿಎಂಎಸ್ ಏವಿಯೇ?ನ್ ??ಸರ್ವೀಸಸ್ ಮತ್ತು ಏರ್ ಕಾರ್ಗೋ ಮತ್ತು ಪಿಜಿ ಡಿಪ್ಲೊಮಾ ಇನ್ ಡಾಟಾ ಸೈನ್ಸ್ ಫಾರ್ ಲಾಜಿಸ್ಟಿಕ್ಸ್ ಕುರಿತು ಆಯೋಜಿಸಿದ್ದ ಸಂವೇದನಾ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ವಿದ್ಯಾರ್ಥಿಗಳ ಕೌಶಲ್ಯ ಪರಿಚಯಿಸಲು ಶಿಕ್ಷಣ ನೀತಿ ಮತ್ತು ಎಂಎಚ್‌ಆರ್‌ಡಿ ಹೊಸ ಪ್ರಯತ್ನ ನಡೆಸಿದೆ. ಪದವಿಪೂರ್ವ ಮತ್ತು ಸ್ನಾತಕೋತ್ತರ ಶಿಕ್ಷಣ ಹಂತದಲ್ಲಿ ಅಪ್ರೆಂಟಿಸ್‌ಶಿಪ್ ಆಧಾರಿತ ಕೋರ್ಸ್‌ಗಳು ವಿದ್ಯಾರ್ಥಿಗಳಿಗೆ ಕೌಶಲ್ಯ ಮತ್ತು ವೃತ್ತಿ ಮನೋಭಾವವನ್ನು ಒದಗಿಸುತ್ತದೆ. ಶಿಕ್ಷಣ ಕ್ಷೇತ್ರದಲ್ಲಿ ಹೊಸ ಆಸಕ್ತಿಯನ್ನು ಸೃಷ್ಟಿಸುತ್ತದೆ. ವಿದ್ಯಾರ್ಥಿಗಳಲ್ಲಿ ಜ್ಞಾನ ಹೆಚ್ಚಿಸಿ, ಉದ್ಯಮದಲ್ಲಿ ಉತ್ತಮ ಕೆಲಸ ಮಾಡುವ ಮನೋಭಾವವನ್ನು ಬಲಗೊಳಿಸುತ್ತದೆ ಎಂದರು.
ಕೋವಿಡ್ – ೧೯: ಸರಳತೆಯಿಂದ ಕೂಡಿದ ಶ್ರೀ ಶರಣಬಸವೇಶ್ವರ ಜಾತ್ರೆ
ಉನ್ನತ ಶಿಕ್ಷಣ ಮತ್ತು ಕಾಲೇಜುಗಳು ಜ್ಞಾನದ ಉತ್ಪನ್ನಗಳನ್ನು ಉತ್ಪಾದಿಸುತ್ತಿವೆ. ವಿದ್ಯಾರ್ಥಿಗಳಲ್ಲಿ ಕೌಶಲ್ಯಾಧರಿತವಾಗಿ ಕೆಲಸ ಮಾಡುವ ಮನೋಭಾವದ ಕೊರತೆಯಿದೆ. ಕೌಶಲ್ಯ ಆಧಾರಿತ ಶಿಕ್ಷಣದ ಕೊರತೆಯಿಂದಾಗಿ, ವಿದ್ಯಾರ್ಥಿಗಳಿಗೆ ಉದ್ಯಮಕ್ಕೆ ಸಿದ್ಧರಾಗಿಸುವ ಮನೋಭಾವದ ಕೊರತೆ ಕಂಡುಬರುತ್ತಿದೆ ಎಂದರು. ಸ್ನಾತಕೋತ್ತರ ಪದವಿ ಮುಗಿದ ನಂತರ ಲಾಭದಾಯಕ ಉದ್ಯೋಗವನ್ನು ಪಡೆಯುವಲ್ಲಿ ವಿದ್ಯಾರ್ಥಿಗಳಲ್ಲಿ ಕೆಲವೊಂದು ಪ್ರಮುಖ ನ್ಯೂನತೆಗಳಿವೆ. ಪ್ರಸ್ತುತ ಸರ್ಕಾರ ಪದವಿ ಮತ್ತು ಸ್ನಾತಕೋತ್ತರ ಶಿಕ್ಷಣ ಮಟ್ಟದಲ್ಲಿ ಕೌಶಲ್ಯ ಮತ್ತು ಅಪ್ರೆಂಟಿಸ್‌ಶಿಪ್ ಆಧಾರಿತ ಕೋರ್ಸ್‌ಗಳನ್ನು ಪರಿಚಯಿಸಲು ನಿರ್ಧರಿಸಿದೆ. ವಿಶ್ವವಿದ್ಯಾನಿಲಯ ಮತ್ತು ಕಾಲೇಜುಗಳಿಂದ ಹೊರಬರುವ ಪದವೀಧರ ವಿದ್ಯಾರ್ಥಿಗಳಿಗೆ ಶಿಕ್ಷಣ ಸಂಸ್ಥೆಗಳು ಉದ್ಯೋಗಕ್ಕೆ ಸಿದ್ಧರನ್ನಾಗಿಸಬೇಕು ಎಂದರು.
ಮಹಿಳೆಯರಿಗಾಗಿ ಪ್ರತ್ಯೇಕವಾಗಿ ಬಿಎಂಎಸ್ ಏವಿಯೇ?ನ್ ??ಸರ್ವೀಸಸ್ ಮತ್ತು ಏರ್ ಕಾರ್ಗೋ ಕೋರ್ಸ್‌ಗಳನ್ನು ಪ್ರಪ್ರಥಮ ಬಾರಿಗೆ ಪರಿಚಯಿಸಿದ್ದು, ಈ ಸಂಸ್ಥೆಯಾಗಿದೆ. ಮಹಿಳೆಯರಿಗಾಗಿ ಪದವಿಪೂರ್ವ ಮಟ್ಟದಲ್ಲಿ ಪ್ರತ್ಯೇಕ ಕೋರ್ಸ್ ಪರಿಚಯಿಸಿದ್ದ ಶ್ರೇಯಸ್ಸು ಶರಣಬಸವ ವಿಶ್ವವಿದ್ಯಾಲಯಕ್ಕೆ ಸಲ್ಲುತ್ತದೆ ಎಂದರು. ಶರಣಬಸವ ವಿಶ್ವವಿದ್ಯಾಲಯವನ್ನು ದೇಶದ ಅನೇಕ ಶಿಕ್ಷಣ ಸಂಸ್ಥೆಗಳು ಅನುಕರಿಸಬೇಕು. ವಿಶ್ವವಿದ್ಯಾಲಯವು ಲಾಜಿಸ್ಟಿಕ್ಸ್ ಸೆಕ್ಟರ್ ಸ್ಕಿಲ್ ಕೌನ್ಸಿಲ್ ಮೂರು ಕೋರ್ಸ್‌ಗಳನ್ನು ಮಂಜೂರು ಮಾಡಿದೆ ಎಂದು ಹೇಳಿದರು.
ಕಸಾಪ ಚುನಾವಣೆ: ಇಂದು ತೇಗಲತಿಪ್ಪಿ ನಾಮಪತ್ರ
ಪ್ರೊ. ಗಣೇಶ ಮಾತನಾಡಿ, ಈ ವ? ಪ್ರಾರಂಭಿಸಿದ ಕೌಶಲ್ಯ ಮತ್ತು ಅಪ್ರೆಂಟಿಸ್‌ಶಿಪ್ ಆಧಾರಿತ ಕೋರ್ಸ್‌ಗಳಿಗೆ ಪ್ರತಿಕ್ರಿಯೆ ಅದ್ಭುತವಾಗಿದೆ. ಪ್ರಸ್ತುತ ಸುಮಾರು ೫೦ ವಿಶ್ವವಿದ್ಯಾಲಯಗಳು ಮತ್ತು ಉನ್ನತ ಶಿಕ್ಷಣ ಕೇಂದ್ರಗಳು ದೇಶಾದ್ಯಂತ ಈ ಕೋರ್ಸ್ ಅನ್ನು ಪರಿಚಯಿಸಿವೆ. ಹೆಚ್ಚಿನ ಸಂಖ್ಯೆಯ ಕಾಲೇಜುಗಳನ್ನು ಈ ಯೋಜನೆಯಲ್ಲಿ ಸೇರಿಸಲಾಗುವುದು ಎಂದು ಹೇಳಿದರು.
ಶರಣಬಸವ ವಿಶ್ವವಿದ್ಯಾಲಯದ ಕುಲಪತಿ ಡಾ. ನಿರಂಜನ್ ವಿ ನಿಷ್ಠಿ, ತಮ್ಮ ಅಧ್ಯಕ್ಷೀಯ ಭಾಷಣದಲ್ಲಿ, ಶರಣಬಸವ ವಿಶ್ವವಿದ್ಯಾಲಯವು ಹಿಂದುಳಿದ ಪ್ರದೇಶದಲ್ಲಿ ಮೂರು ಕೌಶಲ್ಯ ಮತ್ತು ಅಪ್ರೆಂಟಿಸ್‌ಶಿಪ್ ಆಧಾರಿತ ಕೋರ್ಸ್‌ಗಳನ್ನು ಪ್ರಾರಂಭಿಸುವುದು ಈ ಭಾಗದ ಜನರ ಸೌಭಾಗ್ಯವಾಗಿದೆ ಎಂದರು. ಈ ಕೋರ್ಸ್‌ಗಳು ವಿದ್ಯಾರ್ಥಿಗಳಿಗೆ ಲಾಭದಾಯಕ ಉದ್ಯೋಗವನ್ನು ಪಡೆಯುವಲ್ಲಿ ಸಹಕಾರಿಯಾಗಿವೆ. ಸರ್ಕಾರದ ಯೋಜನೆಯನ್ನು ಶ್ಲಾಘಿಸಿದ ಅವರು, ವಿದ್ಯಾರ್ಥಿಗಳಲ್ಲಿ ಸಮಯದ ಅಗತ್ಯತೆ ಹಾಗೂ ಉತ್ತಮ ವೃತ್ತಿ ಕೌಶಲ್ಯವನ್ನು ನೀಡುತ್ತದೆ ಎಂದರು.
Prof Gayathri Harish, Head-Skilling in Schools and Academia Linkages, Logistics Sector Skill Council ಕೌಶಲ್ಯ ಮತ್ತು ಅಕಾಡೆಮಿ ಲಿಂಕೇಜ್, ಲಾಜಿಸ್ಟಿಕ್ಸ್ ಸೆಕ್ಟರ್ ಸ್ಕಿಲ್ ಕೌನ್ಸಿಲ್ ಮುಖ್ಯಸ್ಥೆ ಪ್ರೊ. ಗಾಯತ್ರಿ ಹರೀಶ್ ಮಾತನಾಡಿದರು. ವಿಶ್ವವಿದ್ಯಾನಿಲಯದ ಕುಲಸಚಿವ ಡಾ.ಅನೀಲಕುಮಾರ ಬಿಡವೆ ಸ್ವಾಗತಿಸಿ, ವಿಶ್ವವಿದ್ಯಾಲಯದಲ್ಲಿ ಈ ಕೋರ್ಸ್‌ಗಳನ್ನು ಪ್ರಾರಂಭಿಸಲು ವಿವಿ ಕುಲಾಧಿಪತಿ ಪೂಜ್ಯ ಡಾ. ಶರಣಬಸವಪ್ಪ ಅಪ್ಪಾಜಿ ಮತ್ತು ವಿವಿ ಕುಲಪತಿ ಡಾ.ನಿರಂಜನ್ ವಿ. ನಿಷ್ಠಿ ಅವರು ನೀಡಿದ ಬೆಂಬಲವನ್ನು ನೆನಪಿಸಿಕೊಂಡರು. ವಿವಿ ಸಮಕುಲಪತಿ ಡಾ. ವಿ ಡಿ ಮೈತ್ರಿ, ಮೌಲ್ಯಮಾಪನ ಕುಲಸಚಿವ ಡಾ. ಲಿಂಗರಾಜ್ ಶಾಸ್ತ್ರಿ, ಡೀನ್, ಡಾ. ಲಕ್ಷ್ಮಿ ಪಾಟೀಲ್ ಮಾಕಾ, ಬಿಸಿನೆಸ್ ಸ್ಟಡೀಸ್ ಡೀನ್, ಡಾ.ಎಸ್. ಎಚ್ ಹೊನ್ನಳ್ಳಿ ಇತರರು ಉಪಸ್ಥಿತರಿದ್ದರು.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…