ಆಳಂದ: ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ತಾಲೂಕು ಘಟಕದ ಅಧ್ಯಕ್ಷರಾಗಿ ಬಂಗರಗಾ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಸಹ ಶಿಕ್ಷಕ ಸಿದ್ಧರಾಮ ಪಾಟೀಲ ವಿಭೂತೆ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಅಧ್ಯಕ್ಷ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಪಾಟೀಲರೊಬ್ಬರೆ ನಾಮಪತ್ರ ಸಲ್ಲಿಸಿದ್ದರು. ಅವರ ವಿರುದ್ಧ ಯಾರೊಬ್ಬರ ನಾಮಪತ್ರ ಸಲ್ಲಿಕೆಯಾಗದ ಹಿನ್ನೆಲೆಯಲ್ಲಿ ಚುನಾವಣಾಧಿಕಾರಿ ಅಮೃತರಾವ್ ಹಿರೋಳಿಕರ್ ಅವರು ಅಧ್ಯಕ್ಷರ ಆಯ್ಕೆಯನ್ನು ಪ್ರಕಟಿಸಿದರು.
ನಂತರ ನೂತನ ಅಧ್ಯಕ್ಷರಿಗೆ ನೌಕರರು ಸಲ್ಲಿಸಿದ ಅಭಿನಂದನೆಯಲ್ಲಿ ಮಾತನಾಡಿದ ಅವರು, ತಾಲೂಕಿನ ವಿವಿಧ ಇಲಾಖೆಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ ಎಲ್ಲ ರಾಜ್ಯ ಸರ್ಕಾರಿ ನೌಕರರ ಸಮಸ್ಯೆಗಳಿಗೆ ಪ್ರಾಮಾಣಿಕವಾಗಿ ಸ್ಪಂದಿಸಿ ಪರಿಹರಿಸಲು ಶ್ರಮಿಸಲಾಗುತ್ತದೆ. ಅಲ್ಲದೆ, ಬೇಡಿಕೆ ಈಡೇರಿಕೆಯನ್ನು ಈಡೇರಿಕೆಗೆ ಎಲ್ಲರ ವಿಶ್ವಾಸ ತೆಗೆದುಕೊಂಡು ಕ್ರಿಯಾಶೀಲ ಕೆಲಸಗಳನ್ನು ಮಾಡಲಾಗುವುದು ಎಂದು ಭರವಸೆ ನೀಡಿದರು.
ಚುನಾವಣೆಯಲ್ಲಿ ವಿರೋಧವಾಗಿ ನೂತನ ಅಧ್ಯಕ್ಷರನ್ನಾಗಿ ಆಯ್ಕೆಗೆ ಸಹಕರಿಸಿದ ಎಲ್ಲರ ಎಲ್ಲರಿಗೂ ಕೃತಜ್ಞೆ ಸಲ್ಲಿಸಲಾಗುವುದು ಎಂದು ಹೇಳಿದರು.
ಇದೇ ವೇಳೆ ಪ್ರಾಥಮಿಕಕ ಶಾಲಾ ಶಿಕ್ಷಕರ ಸಂಘದ ಜಿಲ್ಲಾ ಅಧ್ಯಕ್ಷ ಮಲ್ಲಯ್ಯ ಗುತ್ತೇದಾರ, ಸಂಘದ ಮುಖಂಡರಾದ ನರಸಪ್ಪ ಬಿರಾದಾರ, ಕಲ್ಯಾಣಪ್ಪ ಬಿಜ್ಜರಗಿ, ವಸಂತ ಫುಲಾರ, ಪ್ರೌಢಶಾಲೆ ವಿಭಾಗದ ಅಣ್ಣಪ್ಪ ಹಾದಿಮನಿ ಸೇರಿದಂತೆ ಶಿಕ್ಷಕರು, ನೌಕರ ಸಂಘದ ಪ್ರತಿನಿಧಿಗಳು ಪಾಲ್ಗೊಂಡಿದ್ದರು. ಬಳಿಕ ಅಧ್ಯಕ್ಷರ ಮೆರವಣಿಗೆ ನಡೆಸಲಾಯಿತು. ಈ ಹಿಂದೆ ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ರಮೇಶ ಮಾಡಿಯಾಳಕರ್ ಅವರ ಅವಧಿ ಮುಗಿದ ಬಳಿಕ ನೂತನ ಅಧ್ಯಕ್ಷರ ಆಯ್ಕೆ ಪ್ರಕ್ರಿಯೆ ನಡೆದಿದೆ.
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…