ಕಲಬುರಗಿ: ನಡೆದಾಡುವ ದೇವರು ಎಂದೇ ಹೆಸರಾದ ಕರ್ನಾಟಕ ರತ್ನ ಲಿಂ.ಶ್ರೀ ಶ್ರೀ ಶ್ರೀ ಪರಮಪೂಜ್ಯ ಡಾ.ಶಿವಕುಮಾರ ಸ್ವಾಮಿಜೀ ಅವರ 114 ನೇ ಜನ್ಮದಿನಾಚರಣೆ ಅಂಗವಾಗಿ ಇಂದು ಅವರ ಭಾವ ಚಿತ್ರಕ್ಕೆ ಕಲ್ಯಾಣ ಕರ್ನಾಟಕ ಜನಪರ ಸಂಘರ್ಷ ಸಮಿತಿ ಅಧ್ಯಕ್ಷ ಲಕ್ಷ್ಮಣ ದಸ್ತಿ ಅವರು ಮಾಲಾರ್ಪಣೆ ಮಾಡಿದರು.
ನಂತರ ಮಾತನಾಡಿದ ಅವರು ಲಿಂ.ಶಿವಕುಮಾರ ಸ್ವಾಮಿಜಿಗಳು ಶಿಕ್ಷಣ ದಾಸೋಹ, ಅನ್ನ ದಾಸೋಹ ನಿರಂತರವಾಗಿ ನಡೆಸುವ ಮೂಲಕ ಬಡವರ ಏಳಿಗೆಗಾಗಿ ಶ್ರಮಿಸಿದ್ದಾರೆ.ನಿತ್ಯ ನಿರಂತರ ಕಾಯಕದಲ್ಲಿ ತೊಡಗಿಸಿಕೊಂಡು ಭಕ್ತರ ಪಾಲಿಗೆ ದೇವಸ್ವರೂಪ ವಾಗಿದ್ದರು.ಕಷ್ಟ ಕಾರ್ಪಣ್ಯಗಳಿಗೆ ಸ್ಪಂದಿಸುವ ಕರುಣಾಮಯಿ ಆಗಿದ್ದರು.ಇಂಥ ಪೂಜ್ಯರಿಗೆ ಕೇಂದ್ರ ಸರಕಾರ ಇವರ ಅಮೋಘ ಸೇವೆ ಗುರುತಿಸಿ ಮರಣೋತ್ತರ ಭಾರತ ರತ್ನ ಪ್ರಶಸ್ತಿ ನೀಡಬೇಕೆಂದು ಅವರು ಮನವಿ ಮಾಡಿದರು.
ಮುಖಂಡರಾದ ಲಿಂಗರಾಜ ಸಿರಗಾಪೂರ, ಪ್ರಶಾಂತ ತಂಬೂರಿ, ಆನಂದ ತೆಗನೂರ, ರಮೇಶ್ ಪಾಟೀಲ್,ಶಿವರಾಯ ಕಟ್ಟಿಮನಿ ಇತರರು ಇದ್ದರು.
ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…
ಕಲಬುರಗಿ; ಕನಾ೯ಟಕ ರಾಜ್ಯ ತಳವಾರ ಮಹಾಸಭಾ ಕಲಬುರಗಿ ಜಿಲ್ಲಾಧ್ಯಕ್ಷರಾದ ಚಂದ್ರಕಾಂತ ದಶರಥ ತಳವಾರ ಅವರ ಅಧ್ಯಕ್ಷತೆಯಲ್ಲಿ ಇಂದು ಆನಂದ ನಿಲಯ…
ಕಲಬುರಗಿ; ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಶನಿವಾರ ಶಹಾಬಾದ ರಸ್ತೆಯಲ್ಲಿರುವ ನಂದೂರ-ಕೆಸರಟಗಿ ಮತ್ತು ಹುಮನಾಬಾದ ರಸ್ತೆಯಲ್ಲಿರುವ ಕಪನೂರ ಕೈಗಾರಿಕಾ…
ಶಹಾಬಾದ: ಕರ್ನಾಟಕದ ಬಹುಮತ ಸರಕಾರವನ್ನು ಬೀಳಿಸಲು ಇಲ್ಲಸಲ್ಲದ ಆರೋಪ ಮಾಡುವ ಮೂಲಕ ಸಿಎಂ ರಾಜೀನಾಮೆಗೆ ಒತ್ತಾಯ ಮಡುತ್ತಿರುವ ಬಿಜೆಪಿ ಹಾಗೂ…
ಶಹಾಬಾದ:ಪ್ರತಿ ಮನೆಗೂ ನೀರು ದೊರಿಸಿಕೊಡುವ ಉದ್ದೇಶದಿಂದ ನಡೆಯುವ ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಬೇಕೆಂದು ಕಾಂಗ್ರೆಸ್ ಮುಖಂಡ ಮೃತ್ಯುಂಜಯ್ ಹಿರೇಮಠ ಹೇಳಿದರು.…
ಶಹಾಬಾದ :ನಗರದ ಬೌದ್ಧ ವಿಹಾರದಲ್ಲಿ ರವಿವಾರ ಹಮ್ಮಿಕೊಂಡ 68ನೇ ಧಮ್ಮಚಕ್ರ ಪ್ರವರ್ತನಾ ದಿನದ ಅಂಗವಾಗಿ ಕಲಬುರ್ಗಿಯಲ್ಲಿ ಅ.13 ಮತ್ತು 14…