ಮನೆಯಂಗಳದಲ್ಲಿ ಮಾತುಕತೆ ತಿಂಗಳ ಅತಿಥಿಯಾಗಿ ಸಾಹಿತಿ ಡಿ.ಜಿ. ಬಳೂರಗಿ

ಶಹಾಪುರ : ಸಗರದ ಕಲಾನಿಕೇತನ ಟ್ರಸ್ಟ್ ವತಿಯಿಂದ ಪ್ರತಿ ತಿಂಗಳು ಹಮ್ಮಿಕೊಳ್ಳುವ ಮನೆಯಂಗಳದಲ್ಲಿ ಮಾತುಕತೆ ಕಾರ್ಯಕ್ರಮದ ಈ ತಿಂಗಳ ಅತಿಥಿಯಾಗಿ ಹಿರಿಯ ಸಾಹಿತಿ ಹಾಗೂ ನಿವೃತ್ತ ಪ್ರಾಂಶುಪಾಲರಾದ ಡಿ.ಜಿ.ಬಳೂರಗಿಯವರು ಆಯ್ಕೆಯಾಗಿದ್ದಾರೆ ಎಂದು ಟ್ರಸ್ಟ್ ಅಧ್ಯಕ್ಷರಾದ ಬಸವರಾಜ ಸಿನ್ನೂರ ಪ್ರಕಟಣೆಗೆ ತಿಳಿಸಿದ್ದಾರೆ.

ಇದೇ ತಿಂಗಳು ೪ ನೇ ತಾರೀಕು ರವಿವಾರ ಸಾಯಂಕಾಲ 5 ಗಂಟೆಗೆ ಕೋರ್ಟ್ ರಸ್ತೆಯ ಗದ್ದೆ ರಾಯನಗುಡಿ ಹತ್ತಿರವಿರುವ ದೊಡ್ಡಬಸಪ್ಪ ಬಳೂರಗಿಯವರ ಪ್ರೇಮಕುಂಜ ನಿಲಯದ ಮನೆಯಂಗಳದಲ್ಲಿ ಮಾತುಕತೆ ಕಾರ್ಯಕ್ರಮ ನೆರವೇರುವುದು ಈ ಕಾರ್ಯಕ್ರಮವನ್ನು ಕಲಬುರಗಿಯ ಪತ್ರಕರ್ತ – ಲೇಖಕ ಡಾ. ಶಿವರಂಜನ್ ಸತ್ಯಂಪೇಟೆ ಉದ್ಘಾಟಿಸಲಿದ್ದು,ಖ್ಯಾತ ಸಂಶೋಧಕರು ಹಾಗೂ ಸುರಪುರದ ಸಹಾಯಕ ಖಜಾನೆ ಅಧಿಕಾರಿ ಗಳಾದ ಡಾ.ಎಂ.ಎಸ್ ಸಿರವಾಳ ಅವರು ಈ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಸಾಹಿತಿಗಳೊಂದಿಗೆ ಸಂವಾದ ನಡೆಸಿಕೊಡಲಿದ್ದಾರೆ.

ಈ ಕಾರ್ಯಕ್ರಮದಲ್ಲಿ ವಿಶೇಷವಾಗಿ ಹಿರಿಯ ಸಾಹಿತಿ ದೊಡ್ಡಬಸಪ್ಪ ಬಳೂರಗಿ ಅವರ ಬದುಕು ಮತ್ತು ಬರಹದ ಕುರಿತು ಸಂವಾದ ಹಮ್ಮಿಕೊಳ್ಳಲಾಗಿದ್ದು ಸಾಹಿತ್ಯಾಸಕ್ತರು, ಪ್ರಗತಿಪರರು,ಚಿಂತಕರು, ಬರಹಗಾರರು,ಈ ಕಾರ್ಯಕ್ರಮದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳಬೇಕೆಂದು ಕೋರಲಾಗಿದೆ.

emedialine

Recent Posts

ಬೆಂಗಳೂರು: ಸೇವಾದಳ ಯಂಗ್ ಬ್ರಿಗೇಡ್‌ನಿಂದ ಸದಸ್ಯತ್ವ ಅಭಿಯಾನಕ್ಕೆ ಚಾಲನೆ

ಕಲಬುರಗಿ: ಕಾಂಗ್ರೆಸ್ ಪಕ್ಷದ ಅಂಗ ಸಂಖ್ಯೆ ಸೇವಾದಳ ಯಂಗ್ ಬ್ರಿಗೇಡ್ ಸದಸ್ಯತ್ವ ಅಭಿಯಾನ ನ.20ರಿಂದ ರಾಜ್ಯವ್ಯಾಪಿ ಆರಂಭ ಮಾಡಲಾಗಿದ್ದು, ಆಸಕ್ತರು…

49 mins ago

ಆತ್ಮವಿಶ್ವಾಸವಿದ್ದರೆ ಜೀವನದಲ್ಲಿ ಏನನ್ನಾದರೂ ಸಾಧಿಸಬಹುದು : ಶಂಕರಗೌಡ

ಕಲಬುರಗಿ: ಜೀವನದಲ್ಲಿ ಹತ್ತನೇ ಮತ್ತು ಪಿಯುಸಿ ಬಹಳ ಮಹತ್ವದ ಘಟ್ಟಗಳು. ಇವೆರಡು ನಮ್ಮ ಭವಿಷ್ಯವನ್ನು ನಿರ್ಧರಿಸುತ್ತವೆ. ವಿದ್ಯಾರ್ಥಿಗಳು ಅಚಲವಾದ ಆತ್ಮವಿಶ್ವಾಸದಿಂದ…

12 hours ago

ಬೌದ್ಧಿಕ ವಿಕಾಸದಿಂದ ತನ್ನತನದ ಶೋಧ

ಸೇಡಂ : ತಮ್ಮ ಬೌದ್ಧಿಕ ವಿಕಾಸದಲ್ಲಿಯೇ ಮಹಿಳೆಯರ ಅಸ್ತಿತ್ವವಿದೆ ಎಂದು ಕೇಂದ್ರ ಸಾಹಿತ್ಯ ಅಕಾಡೆಮಿ ಸದಸ್ಯ ಡಾ.ಬಸವರಾಜ ಸಾದರ ಹೇಳಿದರು.…

12 hours ago

ನಿಧನ ವಾರ್ತೆ; ಆನಂದಪ್ಪ ಉಮ್ಮನಗೋಳ್

ಕಲಬುರಗಿ: ಅಫಜಲಪುರ ತಾಲೂಕಿನ ಸೊನ್ನ ಗ್ರಾಮದ ನಿವಾಸಿ ಆನಂದಪ್ಪ ಶರಣಪ್ಪ ಉಮ್ಮನಗೋಳ್(೮೦) ಅವರು ಸೋಮವಾರ ಬೆಳಗ್ಗೆ ವಯೋಸಹಜವಾಗಿ ನಿಧನರಾದರು. ಮೃತರು…

14 hours ago

ಸಂಘಸಂಸ್ಥೆಗಳು ಸಮಾಜಕ್ಕೆ ನೀಡಿದ ಕೋಡುಗೆ ಅಪಾರ ಪಾಳಾಶ್ರೀ

ಕಲಬುರಗಿ: ಸಂಘಸಂಸ್ಥೆಗಳು ಸಾದಕರನ್ನು ಗುರುತಿಸಿ ಪ್ರಶಸ್ತಿ ಪುರಸ್ಕಾರಗಳನ್ನು ನೀಡುವ ಮುಖಾಂತರಾ ಅವರ ಜವಾಬ್ದಾರಿ ಹೆಚ್ಚಿಸುವುದರಜೋತೆಯಲ್ಲಿ ಸಾಮಾಜಿಕ ಕೆಲಸಗಳನ್ನು ಮಾಡುತ್ತಿರುವುದು ಸಮಾಜಕ್ಕೆ…

14 hours ago

ಹೊಸ ಹೊಸ ಉದ್ಯೋಗ ಸೃಷ್ಟಿಸಲು HKE ಸಂಸ್ಥೆ ಕಾರ್ಯ ಶ್ಲಾಘನೀಯ

ಕಲಬುರಗಿ; ಹೈದ್ರಾಬಾದ್- ಕರ್ನಾಟಕ ಶಿಕ್ಷಣ ಸಂಸ್ಥೆಯ PDACE ಸಭಾಂಗಣದಲ್ಲಿ ನಡೆದ ಕಲ್ಯಾಣ ಕರ್ನಾಟಕ startup conclave ಇಂದು ದಕ್ಷಣ ಶಾಸಕ…

14 hours ago