ಆಳಂದ: ಜನಸಂಖ್ಯೆ ಆಧಾರದ ಮೇಲೆ ತಾಲೂಕಿನ ಜಿಲ್ಲಾ ಪಂಚಾಯಿತಿ ಹಾಗೂ ತಾಲೂಕು ಪಂಚಾಯಿತಿ ಕ್ಷೇತ್ರಗಳನ್ನು ಮರು ವಿಂಗಡಣೆ ಮಾಡುತ್ತಿರುವುದು ಸಂಪೂರ್ಣ ಅವೈಜ್ಞಾನಿಕವಾಗಿದೆ, ಇದನ್ನು ನಾನು ವಿರೋಧಿಸುತ್ತೆನೆ ಎಂದು ನಿಂಬರ್ಗಾ ವಲಯ ಕರ್ನಾಟಕ ರಕ್ಷಣಾ ವೇದಿಕೆ ಅಧ್ಯಕ್ಷರಾದ ಹಾಗೂ ಸಾಮಾಜಿಕ ಹೋರಾಟಗಾರರಾದ ಬಸವರಾಜ ಯಳಸಂಗಿ ತಿಳಿಸಿದ್ದಾರೆ.
ಜನಸಂಖ್ಯೆ ಮಾನದಂಡವಾಗಿಟ್ಟುಕೊಂಡು ಜಾತಿ ಪ್ರಾಬಲ್ಯಕ್ಕೆ ಮಣೆ ಹಾಕುತ್ತಿರುವ ಕ್ರಮ ಶೋಭೆಯಲ್ಲ. ಇದು ಸಂವಿಧಾನ ವಿರೋಧಿ ಕೃತ್ಯವಾಗಿದೆ. ಆಳಂದ ತಾಲೂಕಿನ ನಿಂಬರ್ಗಾ ಜಿಲ್ಲಾ ಪಂಚಾಯಿತಿ ಕ್ಷೇತ್ರವನ್ನು ಕೈ ಬಿಡುತ್ತಿರುವುದು ಅವೈಜ್ಞಾನಿಕವಾಗಿದೆ. ಇದರಿಂದ ಜನರ ಭಾವನೆಗಳ ಜತೆ ಚೆಲ್ಲಾಟವಾಡಿದಂತಾಗುತ್ತದೆ. ಅಲ್ಲದೆ ಕ್ಷೇತ್ರದ ಅಭಿವೃದ್ದಿಗೂ ಮಾರಕವಾಗಲಿದೆ. ಹೀಗಾಗಿ ಸರ್ಕಾರ ಮತ್ತು ಚುನಾವಣಾ ಆಯೋಗ ಕ್ಷೇತ್ರಗಳ ವಿಂಗಡಣೆ ಕೈಬಿಟ್ಟು, ಈ ಹಿಂದೆ ಇದ್ದ ನಿಂಬರ್ಗಾ ಜಿಲ್ಲಾ ಪಂಚಾಯಿತಿ ಕ್ಷೇತ್ರವನ್ನೇ ಮುಂದುವರೆಸಬೇಕು ಎಂದು ಅವರು ಒತ್ತಾಯಿಸಿದ್ದಾರೆ.
ಜಿಪಂ, ತಾಪಂ ಮರು ವಿಂಗಡಣೆ ಅವೈಜ್ಞಾನಿಕ
ನಿಂಬರ್ಗಾ ಬದಲು ಕಡಗಂಚಿಯನ್ನು ಜಿಲ್ಲಾ ಪಂಚಾಯತಿ ಕ್ಷೇತ್ರವಾಗಿ ಮಾಡಲಾಗುತ್ತಿದೆ ಎಂಬ ಮಾತುಗಳು ಕೇಳಿ ಬರುತ್ತಿವೆ. ಇದು ಸರಿಯಾದುದ್ದಲ್ಲ. ಕ್ಷೇತ್ರದ ವ್ಯಾಪ್ತಿಯ ಸಾರ್ವಜನಿಕರ ಅಭಿಪ್ರಾಯ ಹಾಗೂ ಭಾವನೆಗಳಿಗೆ ವಿರುದ್ಧವಾಗಿ ಕ್ಷೇತ್ರಗಳ ವಿಂಗಡಣೆ ಮಾಡಿದ್ದರೆ ಹೋರಾಟ ಮಾಡಬೇಕಾಗುತ್ತದೆ ಎಂದು ಅವರು ಎಚ್ಚರಿಸಿದ್ದಾರೆ.
ಕಲಬುರಗಿ: ಜೀವನದಲ್ಲಿ ಹತ್ತನೇ ಮತ್ತು ಪಿಯುಸಿ ಬಹಳ ಮಹತ್ವದ ಘಟ್ಟಗಳು. ಇವೆರಡು ನಮ್ಮ ಭವಿಷ್ಯವನ್ನು ನಿರ್ಧರಿಸುತ್ತವೆ. ವಿದ್ಯಾರ್ಥಿಗಳು ಅಚಲವಾದ ಆತ್ಮವಿಶ್ವಾಸದಿಂದ…
ಸೇಡಂ : ತಮ್ಮ ಬೌದ್ಧಿಕ ವಿಕಾಸದಲ್ಲಿಯೇ ಮಹಿಳೆಯರ ಅಸ್ತಿತ್ವವಿದೆ ಎಂದು ಕೇಂದ್ರ ಸಾಹಿತ್ಯ ಅಕಾಡೆಮಿ ಸದಸ್ಯ ಡಾ.ಬಸವರಾಜ ಸಾದರ ಹೇಳಿದರು.…
ಕಲಬುರಗಿ: ಅಫಜಲಪುರ ತಾಲೂಕಿನ ಸೊನ್ನ ಗ್ರಾಮದ ನಿವಾಸಿ ಆನಂದಪ್ಪ ಶರಣಪ್ಪ ಉಮ್ಮನಗೋಳ್(೮೦) ಅವರು ಸೋಮವಾರ ಬೆಳಗ್ಗೆ ವಯೋಸಹಜವಾಗಿ ನಿಧನರಾದರು. ಮೃತರು…
ಕಲಬುರಗಿ: ಸಂಘಸಂಸ್ಥೆಗಳು ಸಾದಕರನ್ನು ಗುರುತಿಸಿ ಪ್ರಶಸ್ತಿ ಪುರಸ್ಕಾರಗಳನ್ನು ನೀಡುವ ಮುಖಾಂತರಾ ಅವರ ಜವಾಬ್ದಾರಿ ಹೆಚ್ಚಿಸುವುದರಜೋತೆಯಲ್ಲಿ ಸಾಮಾಜಿಕ ಕೆಲಸಗಳನ್ನು ಮಾಡುತ್ತಿರುವುದು ಸಮಾಜಕ್ಕೆ…
ಕಲಬುರಗಿ; ಹೈದ್ರಾಬಾದ್- ಕರ್ನಾಟಕ ಶಿಕ್ಷಣ ಸಂಸ್ಥೆಯ PDACE ಸಭಾಂಗಣದಲ್ಲಿ ನಡೆದ ಕಲ್ಯಾಣ ಕರ್ನಾಟಕ startup conclave ಇಂದು ದಕ್ಷಣ ಶಾಸಕ…
ಕಲಬುರಗಿ : ಒತ್ತಡದ ಬದುಕಿನಲ್ಲಿ ಸಂಗೀತ ಆಲಿಸುವುದರಿಂದ ಮಾನಸಿಕ ನೆಮ್ಮದಿ, ಶಾಂತಿ ದೊರೆಯಲು ಸಾಧ್ಯವಿದೆ. ಅನೇಕ ಜನ ಸಂಗೀತ ಕಲಾವಿದರಿಂದು…