ಸಂಘಟಾನಾತ್ಮಕ ಶಕ್ತಿಯೇ ಪಕ್ಷದ ಅಡಿಪಾಯ: ಶಾಸಕ ಸುಭಾಷ್ ಆರ್ ಗುತ್ತೇದಾರ

0
20

ಆಳಂದ: ಭಾರತೀಯ ಜನತಾ ಪಕ್ಷವು ವಿವಿಧ ಮೋರ್ಚಾಗಳ ಮೂಲಕ ಕೆಲಸ ನಿರ್ವಹಿಸುತ್ತಿದ್ದು ಅದರ ಮೂಲಕವೇ ತನ್ನ ಸಂಘಟನಾತ್ಮಕ ಶಕ್ತಿಯನ್ನು ವೃದ್ಧಿಸಿಕೊಂಡಿದೆ ಎಂದು ಆಳಂದ ಶಾಸಕ ಸುಭಾಷ್ ಆರ್ ಗುತ್ತೇದಾರ ಹೇಳಿದರು.

ರವಿವಾರ ಆಳಂದ ಪಟ್ಟಣದಲ್ಲಿ ಆಳಂದ ಮಂಡಲ ಬಿಜೆಪಿ ವತಿಯಿಂದ ಹಮ್ಮಿಕೊಂಡಿದ್ದ ಮಂಡಲ ಕಾರ್ಯಕಾರಿಣಿ ಸಭೆಯಲ್ಲಿ ಭಾಗವಹಿಸಿ ಮಾತನಾಡಿದರು.

Contact Your\'s Advertisement; 9902492681

ತಳಮಟ್ಟದಲ್ಲಿ ಕಾರ್ಯಕರ್ತರು ಸಶಕ್ತರಾಗಿರುವುದರಿಂದ ಪಕ್ಷವು ಯಾವುದೇ ಕ್ಷಣದಲ್ಲಿ ಚುನಾವಣೆ ಬಂದರೂ ಎದುರಿಸುವುದಕ್ಕೆ ಸಿದ್ಧವಾಗಿದೆ. ಭಾರತೀಯ ಜನತಾ ಪಕ್ಷವು ದೇಶ ಮೊದಲು, ಪಕ್ಷ ನಂತರ, ವ್ಯಕ್ತಿ ಕೊನೆಗೆ ಎಂಬ ತತ್ವ ಸಿದ್ಧಾಂತದಲ್ಲಿ ಮುನ್ನಡೆಯುತ್ತಿದೆ ಅದರ ಆಶಯದಂತೆ ನಾವೇಲ್ಲ ಕೆಲಸ ಮಾಡಬೇಕಿದೆ ಎಂದು ನುಡಿದರು.

ವ್ಯಕ್ತಿತ್ವ ವಿಕಸನಕ್ಕೆ ರಂಗಭೂಮಿ ಸಹಾಯಕ: ಠಾಕೂರ್

ಮುಂಬರುವ ತಾ.ಪಂ ಮತ್ತು ಜಿ.ಪಂ ಚುನಾವಣೆಗಳಲ್ಲಿ ಒಗ್ಗಟ್ಟಿನಿಂದ ಕಾರ್ಯ ಮಾಡಿ ಭಾರತೀಯ ಜನತಾ ಪಕ್ಷದ ಅಭ್ಯರ್ಥಿಗಳನ್ನು ಹೆಚ್ಚಿನ ಸಂಖ್ಯೆಯಲ್ಲಿ ಗೆಲ್ಲಿಸಿಕೊಂಡು ಬರಲು ಪ್ರಯತ್ನಿಸಲಾಗುವುದು ಅದಕ್ಕಾಗಿ ಕಾರ್ಯಕರ್ತರು ಸರ್ವಸನ್ನಧ್ಧರಾಗಿರಬೇಕು ಎಂದು ಕರೆ ನೀಡಿದರು.

ಜಿಲ್ಲಾ ಬಿಜೆಪಿ ಗ್ರಾಮಾಂತರ ಅಧ್ಯಕ್ಷ ಶಿವರಾಜ ಪಾಟೀಲ ರದ್ದೇವಾಡಗಿ ಮಾತನಾಡಿ, ಕಾರ್ಯಕರ್ತರ ಶ್ರಮ ಮತ್ತು ತ್ಯಾಗಗಳ ಫಲವಾಗಿಯೇ ಇಂದು ಭಾರತೀಯ ಜನತಾ ಪಕ್ಷ ಕೇಂದ್ರ ಮತ್ತು ರಾಜ್ಯದಲ್ಲಿ ಅಧಿಕಾರದಲ್ಲಿದೆ ಅದಕ್ಕಾಗಿ ನಾವು ಕಾರ್ಯಕರ್ತರಿಗೆ ಋಣಿಯಾಗಿದ್ದೇವೆ ಎಂದರು.

ಜಿ.ಪಂ ಸದಸ್ಯ ಹರ್ಷಾನಂದ ಗುತ್ತೇದಾರ ಮಾತನಾಡಿ, ಭಾರತೀಯ ಜನತಾ ಪಕ್ಷದಲ್ಲಿ ಮಾತ್ರ ಕಾರ್ಯಕರ್ತರಿಗೆ ಅವಕಾಶ ನೀಡಲಾಗುತ್ತದೆ. ಪಕ್ಷಕ್ಕೆ ಸಲ್ಲಿಸಿದ ಸೇವೆ ಎಂದೂ ವ್ಯರ್ಥವಾಗುವುದಿಲ್ಲ ಎಂದು ಅಭಿಪ್ರಾಯಪಟ್ಟರು.

ಉಪಚುನಾವಣೆ: ರವಿ ಗಾಯಕ್ವಾಡ ಹೇಳಿಕೆಗೆ ಕಿಶೋರ್ ಗಾಯಕವಾಡ್ ಆಕ್ರೋಶ

ಜಿಲ್ಲಾ ಪ್ರಧಾನ ಕಾರ್ಯದರ್ಶಿ ಅಶೋಕ ಬಗಲಿ, ಆಳಂದ ಮಂಡಲ ಅಧ್ಯಕ್ಷ ಆನಂದರಾವ ಪಾಟೀಲ ಕೊರಳ್ಳಿ ಮಾತನಾಡಿದರು. ಪ್ರ. ಕಾರ್ಯದರ್ಶಿ ಶರಣು ಕುಮಸಿ ಸ್ವಾಗತಿಸಿದರೇ, ಸುಜ್ಞಾನಿ ಪೊದ್ದಾರ ವಂದಿಸಿದರು. ಪ್ರ. ಕಾರ್ಯದರ್ಶಿ ಪ್ರಕಾಶ ಮಾನೆ ನಿರೂಪಿಸಿದರು.

ಈ ಸಂದರ್ಭದಲ್ಲಿ ತಾಲೂಕಿನ ವಿವಿಧ ಮೋರ್ಚಾಗಳ ಅಧ್ಯಕ್ಷರು ಸೇರಿದಂತೆ ನೂರಾರು ಪದಾಧಿಕಾರಿಗಳು ಭಾಗವಹಿಸಿದ್ದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here