ಶಹಾಪುರ: ನಗರದಲ್ಲಿ ಒಳಚರಂಡಿ ಮತ್ತು ಭೀಮಾ ನದಿಯಿಂದ ಸನ್ನಿತಿ ಬ್ಯಾರೇಜ್ ಮೂಲಕ ಪೈಪ್‌ಲೈನ್ ಮೂಲಕ ನಗರಕ್ಕೆ ಶಾಶ್ವತ ಕುಡಿಯುವ ನೀರಿನ ಸುಮಾರು 184.55 ಲಕ್ಷ ಯೋಜನೆಗೆ ಸಿಎಂ ಎಚ್.ಡಿ.ಕುಮಾರಸ್ವಾಮಿ ಯವರು ಯಾದಗಿರಿ ಜಿಲ್ಲೆ ಚಂಡರಕಿ ಗ್ರಾಮ ವಾಸ್ತವ್ಯಕ್ಕಾಗಿ ಆಗಮಿಸಿದ ಸಂದರ್ಭದಲ್ಲಿ ಒಪ್ಪಿಗೆ ಸೂಚಿಸಿದ್ದಾರೆ ಎಂದು ಶಾಸಕ ಶರಣಬಸಪ್ಪಗೌಡ ದರ್ಶನಾಪುರ ತಿಳಿಸಿದ್ದಾರೆ.
ಈ ಕುರಿತು ಪತ್ರಿಕೆಯೊಂದಿಗೆ ಮಾತನಾಡಿದ ಅವರು ನಗರದಜನತೆಯ ಬಹುದಿನದ ಬೇಡಿಕೆಯಾದ ಒಳಚರಂಡಿ ಮತ್ತು ಶಾಶ್ವತ ಕುಡಿಯುವ ನೀರಿನ ಬಹು ಕೋಟಿ ಯೋಜನೆಗೆ ಸಿಎಂ ಕುಮಾರಸ್ವಾಮಿಯವರು ಒಪ್ಪಿಗೆ ಸೂಚಿಸಿ ಮುಂದಿನ ಕಾರ್ಯಾಚರಣೆ ನಡೆಸುವಂತೆ ಅನುಮೋದನೆ ನೀಡಿದ್ದಾರೆ ಎಂದು ತಿಳಿಸಿದ್ದಾರೆ.
ನಗರದಲ್ಲಿ ಬಹುದಿನಗಳಿಂದ ಒಳಚರಂಡಿ ಯೋಜನೆ ಜಾರಿಗೆ ತರಬೇಕೆನ್ನುವುದು ಕನಸಿನ ಮಾತಾಗಾತ್ತು. ಆದರೆ ಹಲವಾರು ಅಡಚಣೆಗಳಿಂದ ಈ ಯೋಜನೆಯನ್ನು ಕೈ ಬಿಡಲಾಗಿತ್ತು. ಸಧ್ಯ ನಾಡಿನ ದೊರೆ ಈ ಯೋಜನೆಗೆ ಅಸ್ತು ಎಂದು ಹೇಳಿರುವುದರಿಂದ ಮುಂದಿನ ದಿನಗಳಲ್ಲಿ ಒಳಚರಂಡಿ ಯೋಜನೆಯ ಕಾಮಗಾರಿ ಮಾಡುವ ಮೂಲಕ ನಗರದ ಸ್ವಚ್ಛತೆಗೆ ಆಧ್ಯತೆ ನೀಡಬಹುದಾಗಿದೆ.
ಅಲ್ಲದೆ ನಗರಕ್ಕೆ ಕುಡಿಯುವ ನೀರಿನ ಯೋಜನೆಗಾಗಿ ಹತ್ತಿರದ ಭೀಮಾ ನದಿ ಸನ್ನತಿ ಬ್ಯಾರೇಜ್‌ನಿಂದ ನಗರದ ಫಿಲ್ಟರ್ ಬೆಡ್ ಕೆರೆಗೆ ನೀರು ತುಂಬಿಸುವ ಮೂಲಕ ದಿನಂಪ್ರತಿ ಕುಡಿಯುವ ನೀರು ಸರಬರಾಜು ಮಾಡಬಹುದಾಗಿದೆ. ಇದು ಸುಮಾರು 184.55 ಲಕ್ಷ ರೂ. ಯೋಜನೆಯಾಗಿದ್ದು ಈ ಯೋಜನೆಗೆ ಸಿಎಂ ಕುಮಾರಸ್ವಾಮಿಯವರು ಗ್ರಾಮ ವಾಸ್ತವ್ಯ ದಿನದಂದು ನಗರಕ್ಕೆ ಕೊಡುಗೆಯಾಗಿ ನೀಡಿದ್ದಾರೆಂದು ಶಾಸಕ ಶರಣಬಸಪ್ಪಗೌಡ ದರ್ಶನಾಪುರ ತಿಳಿಸಿದ್ದಾರೆ.
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…
ಚಿಂಚೋಳಿ: ಸಿದ್ದಶ್ರೀ ಕಾರ್ಖಾನೆ ಪ್ರಾರಂಭ ಮಾಡಲು ರೈತರು ಹಗಲು ರಾತ್ರಿ ಎನ್ನದೆ ಬಸವೇಶ್ವರ ಉತ್ತರ ಬಳಿ ಧರಣಿಯಲ್ಲಿ ಹೋರಾಟ ಮಾಡುತ್ತಿದ್ದು.…
ಕಲಬುರಗಿ: ನವೆಂಬರ್ 29 ರಿಂದ 2 ಡಿಸೇಂಬರ್ ವರೆಗೆ ತಮಿಳುನಾಡಿನ ಅಲಗಪ್ಪ ವಿಶ್ವವಿದ್ಯಾಲಯ ಕರೈಕುಡಿಯಲ್ಲಿ ನಡೆಯುವ ದಕ್ಷಿಣ ಭಾರತ ಅಂತರ…
ಕಲಬುರಗಿ: ನಗರದ ವಾರ್ಡ ನಂ.51.ರ ಜೇವರ್ಗಿ ಕಾಲೋನಿ ವಾಟರ್ ಟ್ಯಾಂಕ್ ಹತ್ತಿರದ ಉದ್ಯವನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ ಖರ್ಗೆ…