ಬಿಸಿ ಬಿಸಿ ಸುದ್ದಿ

ನಳೀನ್ ಕುಮಾರ ಕಟೀಲ್ ಹೇಳಿಕೆಗೆ ಆಕ್ರೋಶ

ಶಹಾಬಾದ: ವಿಷಕಾರಿಯಾಗಿದ್ದರಿಂದಲೇ ಖರ್ಗೆ ಅವರು ಸೋತಿದ್ದಾರೆ ಎಂದು ಬಿಜೆಪಿ ರಾಜ್ಯ ಅಧ್ಯಕ್ಷ ನಳೀನ್ ಕುಮಾರ ಕಟೀಲ್ ಹೇಳಿಕೆ ನೀಡಿರುವುದಕ್ಕೆ ಶಹಾಬಾದ ಬ್ಲಾಕ್ ಕಾಂಗ್ರೆಸ್ ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡದ ಅಧ್ಯಕ್ಷ ರಾಜೇಶ ಯನಗುಂಟಿಕರ್ ಮತ್ತು ಬ್ಲಾಕ್ ಕಾಂಗ್ರೆಸ್ ಕಮಿಟಿಯ ಪ್ರಧಾನ ಕಾರ್ಯದರ್ಶಿ ಮೃತ್ಯಂಜಯ್ ಹಿರೇಮಠ ಹಾಗೂ ಪ್ರವೀಣ ರಾಜನ್ ಆಕ್ರೋಶ ವ್ಯಕ್ತಪಡಿಸಿದರಲ್ಲದೇ, ಬಹಿರಂಗವಾಗಿ ಕ್ಷಮಾಪಣೆ ಕೋರಬೇಕೆಂದು ಆಗ್ರಹಿಸಿದ್ದಾರೆ.

ಡಾ.ಮಲ್ಲಿಕಾರ್ಜುನ ಅವರು ಒಬ್ಬ ಹಿರಿಯ ನಾಯಕರು.ಸುಮಾರು ೧೧ ಬಾರಿ ಗೆಲುವು ಕಂಡವರು. ರಾಷ್ಟ್ರ ರಾಜಕಾರಣದಲ್ಲಿ ತಮ್ಮದೇ ಆದ ಛಾಪು ಮೂಡಿಸಿ ಅನೇಕ ಮಹತ್ವದ ಯೋಜನೆಗಳನ್ನು ತಂದು ಅಭಿವೃದ್ಧಿಗೊಳಿಸಿದವರು.ಚುನಾವಣೆಯಲ್ಲಿ ಸೋಲು-ಗೆಲುವು ಸಹಜ.ಆದರೆ ವಿಷಕಾರಿಯಾಗಿದ್ದರಿಂದಲೇ ಸೋತಿದ್ದಾರೆ ಎಂದು ಹೇಳಿಕೆ ನೀಡರುವುದು ನೋಡಿದರೇ ನಳಿನ್ ಕಟೀಲ್ ರಾಜ್ಯಾಧ್ಯಕ್ಷನಾಗಲು ಲಾಯಕ್ ಇಲ್ಲ ಎಂದು ಗೊತ್ತಾಗುತ್ತದೆ.ಇಂತಹ ಬುದ್ಧಿ ಭ್ರಮಣೆಯಾಗಿರುವ ವ್ಯಕ್ತಿಗಳನ್ನು ಬಿಜೆಪಿ ಸಾಕುತ್ತಿದೆ.

ಈ ಹಿಂದೆಯೂ ಅನಂತಕುಮಾರ ಹೆಗಡೆ ಎನ್ನುವ ವ್ಯಕ್ತಿ ಕೂಡ ಸಂವಿಧಾನ ಬದಲಾವಣೆ ಮಾಡಲು ಬಂದಿದ್ದೆವೆ ಎಂದು ಹೇಳಿ, ಸಾರ್ವಜನಿಕರ ಹಿಡಿಶಾಪಕ್ಕೆ ಗುರಿಯಾಗಿದ್ದರು. ಬಿಎಸ್‌ಎನ್‌ಎಲ್, ರೇಲ್ವೆ, ವಿಮಾನಯಾನ ಸೇರಿದಂತೆ ಸರ್ಕಾರಿ ಸ್ವಾಮ್ಯದ ಕಂಪನಿಗಳನ್ನು ಬಂಡವಾಳಶಾಹಿಗಳಿಗೆ ಮಾರುತ್ತಿರುವ ಬಿಜೆಪಿ ಸರ್ಕಾರ ಜನರ ಮೇಲೆ ವಿಷಕಾರುತ್ತಿದೆ.

ವಿವಿಧತೆಯಲ್ಲೂ ಏಕತೆ ಹೊಂದಿರುವ ದೇಶದಲ್ಲಿ ಧರ್ಮ, ಜಾತಿಯ ವಿಷ ಬಿತ್ತುತ್ತಿರುವುದು ಬಿಜೆಪಿ ಪಕ್ಷ ಎಂದು ಎಲ್ಲರಿಗೂ ಗೊತ್ತಿದೆ.ತಮ್ಮ ತಟ್ಟೆಯಲ್ಲಿ ನೊಣಗಳು ಬಿದ್ದಿದ್ದನ್ನು ನೋಡದೇ, ಬೇರೆಯವರ ತಟ್ಟೆಯ ಬಗ್ಗೆ ಮಾತನಾಡುವುದು ಎಷ್ಟರ ಮಟ್ಟಿಗೆ ಸರಿ. ಡಾ.ಮಲ್ಲಿಕಾರ್ಜುನ ಖರ್ಗೆ ಅವರು ನಮ್ಮ ಭಾಗಕ್ಕೆ ೩೭೧(ಜೆ), ರೇಲ್ವೆ ಡಿವಿಜನ್, ಇಎಸ್‌ಐ ಆಸ್ಪತ್ರೆ, ಕೇಂದ್ರೀಯ ವಿಶ್ವವಿದ್ಯಾಲಯ, ಜಿಮ್ಸ್, ವಿಮಾನ ನಿಲ್ದಾಣ, ಜವಳಿ ಪಾರ್ಕ, ರಾಷ್ಟ್ರೀಯ ಹೆದ್ದಾರಿ, ಪೊಲೀಸ್ ಟ್ರೇನಿಂಗ್ ಸೆಂಟರ್,ಸೇರಿದಂತೆ ಹಲವಾರು ಅಭಿವೃದ್ದಿ ಯೋಜನೆಗಳು ತಂದಿದ್ದಾರೆ.ಅದನ್ನು ಮೊದಲು ಅರ್ಥ ಮಾಡಿಕೊಳ್ಳಬೇಕಾಗಿದೆ ಕಟೀಲ್. ಕೂಡಲೇ ಈ ಮೊದಲು ಬಹಿರಂಗವಾಗಿ ಕ್ಷಮಾಪಣೆ ಕೇಳಬವೇಕೆಂದು ಒತ್ತಾಯಿಸಿದರು.

emedialine

Recent Posts

ಕಾಳಗಿ; ರಟಕಲ್ ಗ್ರಾಮದಲ್ಲಿ ವಸವಾದಿ ಶರಣರ ವಚನ ಸಂಗಮಕ್ಕೆ ಅದ್ಧೂರಿ ಚಾಲನೆ

ಕಾಳಗಿ: ಬದುಕು ಹೇಗೆ ನಡೆಸಬೇಕೆಂದು ಹೇಳಿಕೊಟ್ಟ ಬಸವಾದಿ ಶರಣರ ವಚನದಲ್ಲಿ ಅಪಾರ ಶಕ್ತಿ ಇದೆ. 12 ನೇ ಶತಮಾನದಲ್ಲಿ ಮೊದಲ…

29 mins ago

ಕೃಷ್ಣ ಮಂದಿರದಲ್ಲಿ ಪಲಿಮಾರು ಮಠದ ಸಂಸ್ಥಾನ ಪೂಜೆ

ಕಲಬುರಗಿ; ಅಖಿಲ ಭಾರತ ಮಾಧ್ವ ಮಹಾಮಂಡಲ,ಶ್ರೀ ಜಯತೀರ್ಥ ವಿದ್ಯಾರ್ಥಿ ನಿಲಯ, ಶ್ರೀ ಕೃಷ್ಣ ಮಂದಿರ ಹಾಗು ಹನುಮ ಭೀಮ ಮಧ್ವರ…

2 hours ago

ಚಿಂಚೋಳಿ: ವೈದ್ಯಕೀಯ ದ್ರವ ಆಮ್ಲಜನಕ ಸೋರಿಕೆ ಬಗ್ಗೆ ಡಿ.ಎಚ್.ಓ ಸ್ಪಷ್ಟನೆ

ಕಲಬುರಗಿ: ಚಿಂಚೋಳಿ ತಾಲೂಕಾ ಸಾರ್ವಜನಿಕ ಆಸ್ಪತ್ರೆಯಲ್ಲಿ ವೈದ್ಯಕೀಯ ದ್ರವ ಆಮ್ಲಜನಕ ಟ್ಯಾಂಕ್ ಸ್ಪೋಟವಾಗಿದೆ ಎಂದು ಸುಳ್ಳು ಸುದ್ದಿ ಬಿತ್ತರವಾಗುತ್ತಿದ್ದು, ಇದಕ್ಕೆ…

5 hours ago

ಶರಣ ಮಾರ್ಗಕ್ಕೆ ನಿಮ್ಮೆಲ್ಲರ ಸಹಾಯ ಸಹಕಾರ ಅಗತ್ಯ: 10ನೇ ವರ್ಷದ ಹೊಸ್ತಿಲಲ್ಲಿ ನಿಂತು ನಿಮ್ಮೊಂದಿಗಿಷ್ಟು

ಈ ಜೂನ್ - ಜುಲೈ ತಿಂಗಳು ಬಂದಿತೆಂದರೆ ಸಾಕು ನಮ್ಮ ಇಡೀ ಕುಟುಂಬದ ಬಂಧು ಬಾಂಧವರಿಗೆ ಒಂದೆಡೆ ದುಃಖ, ತಳವಳ,…

6 hours ago

ಜಾನಪದ ಜೀವನ ಮೌಲ್ಯಗಳ ಪ್ರತೀಕ

ಸುರಪುರ; ಜೀವನದ ಮೌಲ್ಯಗಳನ್ನು ಎತ್ತಿ ಹಿಡಿಯುವ ಶಕ್ತಿ ಜಾನಪದ ಸಾಹಿತ್ಯ, ಕಲೆಗೆ ಇದ್ದು, ಜಾನಪದ ಸಾರ್ವಕಾಲಿಕ ಸತ್ಯವಾಗಿದೆ ಎಂದು ಲಕ್ಷ್ಮೀಪುರ…

19 hours ago

ಸುರಪುರ:ನೂತನ ಮರಗಮ್ಮ ದೇವಿ ರಜತ ಮೂರ್ತಿ ಪ್ರತಿಷ್ಠಾಪನೆ

ಸುರಪುರ: ತಿಮ್ಮಾಪುರದ ಮುಖ್ಯ ರಸ್ತೆಯಲ್ಲಿ ನಿರ್ಮಾಣವಾದ ನೂತನ ಮರಗಮ್ಮ ದೇವಿಯ ದೇವಸ್ಥಾನ ಲೋಕಾರ್ಪಣೆ , ಮರಗಮ್ಮ ದೇವಿಯ ರಜತ ಮೂರ್ತಿಯ…

19 hours ago