ಕಲಬುರಗಿ: ಬೇರೆ ಬೇರೆ ಕಾರಣಗಳಿಂದಾಗಿ ನನಗೂ ಮೂರು ಸಲ ಮುಖ್ಯಮಂತ್ರಿ ಆಗುವ ಅವಕಾಶ ತಪ್ಪಿದೆ. ಹಂಗಂತ ನಾನೇನಾದರೂ ಬಹಿರಂಗವಾಗಿ ಮಾತನಾಡಿದ್ದೇನೆ. ನನಗೆ ಪಕ್ಷ ಹಾಗೂ ಅದರ ಸಿದ್ದಾಂತಗಳು ಮುಖ್ಯವಾಗಿದ್ದವು. ಆದರೆ, ನಮ್ಮ ಪಕ್ಷದಿಂದ ಹೊರಗೆ ಹೋದವರು ಕೂಡಾ ಸಿದ್ದಾಂತವನ್ನು ಪಾಲಿಸದೆ ಈಗ ಸಂವಿಧಾನ ವಿರೋಧಿ ಪಕ್ಷದಲ್ಲಿ ಕೆಲಸ ಮಾಡುತ್ತಿರುವುದು ನೋಡಿದರೆ ಅವರ ಜನಪರ ಕಾಳಜಿ ತಿಳಿಯುತ್ತದೆ ಎಂದು ಕಲಬುರಗಿ ಲೋಕಸಭಾ ಕ್ಷೇತ್ರದ ಕಾಂಗ್ರೇಸ್ ಅಭ್ಯರ್ಥಿ ಹಾಗೂ ಸಂಸದರಾದ ಸನ್ಮಾನ್ಯ ಮಲ್ಲಿಕಾರ್ಜುನ ಖರ್ಗೆ ವಾಗ್ದಾಳಿ ನಡೆಸಿದರು.
ಅವರು ಇಂದು ಪಟ್ಟಣ ಗ್ರಾಮದಲ್ಲಿ ನಡೆದ ಚುನಾವಣಾ ಸಭೆಯಲ್ಲಿ ಮಾತನಾಡುತ್ತಿದ್ದರು.
ನನ್ನ ಅಭಿವೃದ್ದಿ ಪರ ಕೆಲಸಗಳೇ ನನ್ನನ್ನು 11 ಸಲ ಗೆಲ್ಲುವಂತೆ ಮಾಡಿದೆ. ಹಾಗಾಗಿ ಕಲಬುರಗಿಗೆ ಬಂದಿದ್ದರು ಮೋದಿ ನನ್ನ ಬಗ್ಗೆ ಮಾತನಾಡಿಲ್ಲ. ಆದರೆ, ಮೋದಿಯ ಇಲ್ಲಿನ ಮರಿಗಳು ನನ್ನ ಬಗ್ಗೆ ಮಾತನಾಡುತ್ತಿವೆ ಎಂದು ತಮ್ಮ ರಾಜಕೀಯ ಎದುರಾಳಿಗಳಿಗೆ ಟಾಂಗ್ ನೀಡಿದರು.
ನನ್ನ ವಿರುದ್ದ ಹೊರಟವರು ತಾವೇ ಮೊದಲು ಸೋತು ಸುಣ್ಣವಾಗಿದ್ದಾರೆ ನನ್ನನ್ನು ಸೋಲಿಸುವ ಮಾತನಾಡುತ್ತಿದ್ದಾರೆ ಎಂದು ಕುಟುಕಿದರು. ಪ್ರಧಾನಿ ಮೋದಿ ದೇಶಭಕ್ತಿಯ ಮಾತನಾಡುತ್ತಿದ್ದಾರೆ. ಕಾಂಗ್ರೇಸ್ ಪಕ್ಷ ದೇಶಕ್ಕೆ ಹೋರಾಡಿ ತ್ಯಾಗ ಮಾಡಿದಾಗ ಮೋದಿ ಹುಟ್ಟೇ ಇರಲಿಲ್ಲ ಎಂದರು.
ದೇಶದ ಐಕ್ಯತೆಗೆ ಬಿಜೆಪಿ ಹಾಗೂ ಆರ್ ಎಸ್ ಎಸ್ ಸಿದ್ದಾಂತಗಳು ಮಾರಕ ಎಂದ ಖರ್ಗೆ ಈ ಸಲದ ಚುನಾವಣೆಯಲ್ಲಿ ಅಂತಹ ಶಕ್ತಿಗಳನ್ನು ದಮನ ಮಾಡಬೇಕು ಎಂದು ಕರೆನೀಡಿದರು.
ಈ ಸಂದರ್ಭದಲ್ಲಿ ಜಿಲ್ಲಾ ಕಾಂಗ್ರೇಸ್ ಸಮಿತಿ ಅಧ್ಯಕ್ಷ ಜಗದೇವ ಗುತ್ತೇದಾರ, ಅಲ್ಲಮಪ್ರಭು ಪಾಟೀಲ್ ಸೇರಿದಂತೆ ಹಲವರಿದ್ದರು.
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…
ಚಿಂಚೋಳಿ: ಸಿದ್ದಶ್ರೀ ಕಾರ್ಖಾನೆ ಪ್ರಾರಂಭ ಮಾಡಲು ರೈತರು ಹಗಲು ರಾತ್ರಿ ಎನ್ನದೆ ಬಸವೇಶ್ವರ ಉತ್ತರ ಬಳಿ ಧರಣಿಯಲ್ಲಿ ಹೋರಾಟ ಮಾಡುತ್ತಿದ್ದು.…
ಕಲಬುರಗಿ: ನವೆಂಬರ್ 29 ರಿಂದ 2 ಡಿಸೇಂಬರ್ ವರೆಗೆ ತಮಿಳುನಾಡಿನ ಅಲಗಪ್ಪ ವಿಶ್ವವಿದ್ಯಾಲಯ ಕರೈಕುಡಿಯಲ್ಲಿ ನಡೆಯುವ ದಕ್ಷಿಣ ಭಾರತ ಅಂತರ…
ಕಲಬುರಗಿ: ನಗರದ ವಾರ್ಡ ನಂ.51.ರ ಜೇವರ್ಗಿ ಕಾಲೋನಿ ವಾಟರ್ ಟ್ಯಾಂಕ್ ಹತ್ತಿರದ ಉದ್ಯವನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ ಖರ್ಗೆ…