ರಾಜ್ಯದ ಆರು ಕಡೆ ಹೆಲಿಪೋರ್ಟ್ ಸ್ಥಾಪನೆ: ಸಿ.ಪಿ.ಯೋಗೇಶ್ವರ

1
44

ಕಲಬುರಗಿ: ಹೆಲಿಟೂರಿಸ್ಮ್ ಅಭಿವೃದ್ಧಿಪಡಿಸುವ ನಿಟ್ಟಿನಲ್ಲಿ ದೇಶ-ವಿದೇಶದ ಪ್ರವಾಸಿಗರನ್ನು ಆಕರ್ಷಿಸಲು ರಾಜ್ಯದ ಆರು ಸ್ಥಳಗಳಲ್ಲಿ ಹೆಲಿಪೋರ್ಟ್ ಸ್ಥಾಪಿಸಲಾಗುತ್ತಿದೆ ಎಂದು ಪ್ರವಾಸೋದ್ಯಮ, ಪರಿಸರ ಹಾಗೂ ಜೀವಶಾಸ್ತ್ರ ಸಚಿವ ಸಿ.ಪಿ.ಯೋಗೇಶ್ವರ ಅವರು ಹೇಳಿದರು.
ಮಂಗಳವಾರ ಇಲ್ಲಿನ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಪ್ರವಾಸೋದ್ಯಮ ಮತ್ತು ಪರಿಸರ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅವರು ಮಾತನಾಡಿದರು.

ಕಲಬುರಗಿ, ಹುಬ್ಬಳ್ಳಿ, ಹಂಪಿ, ಮೈಸೂರು, ಬೆಂಗಳೂರು ಹಾಗೂ ಮಂಗಳೂರಿನಲ್ಲಿ ವಿಮಾನ ಸಂಚಾರ ಇರುವುದರಿಂದ ಪ್ರಾಥಮಿಕ ಹಂತವಾಗಿ ಈ ಸ್ಥಳಗಳಲ್ಲಿ ಇಲಾಖೆಯಿಂದಲೆ ಹೆಲಿಪೋರ್ಟ್ ಅಭಿವೃದ್ಧಿಪಡಿಸಲಾಗುತ್ತಿದೆ. ನಾಲ್ಕೈದು ಎಕರೆ ಪ್ರದೇಶದಲ್ಲಿ ಇದು ತೆಲೆ ಎತ್ತಲಿದ್ದು, ಪ್ರತಿಯೊಂದು ಹೆಲಿಪೋರ್ಟ್‌ಗೆ ೧೦ ಕೋಟಿ ರೂ. ಖರ್ಚಾಗಬಹುದು ಎಂದು ಅಂದಾಜಿಸಲಾಗಿದೆ ಎಂದರು.

Contact Your\'s Advertisement; 9902492681

ಪ್ರವಾಸೋದ್ಯಮ ಅಭಿವೃದ್ದಿಗಾಗಿ ಹೆಚ್ಚಿನ‌ ಅನುಮಾನಕ್ಕೆ ಶಾಸಕ ಪ್ರಿಯಾಂಕ್ ಖರ್ಗೆ ಪತ್ರ

ಕಲಬುರಗಿಯಲ್ಲಿ ಹೆಲಿಪೋರ್ಟ್ ಸ್ಥಾಪನೆಗೆ ಸಂಬಂಧಿಸಿದಂತೆ ಶಾಸಕರೊಂದಿಗೆ ಚರ್ಚಿಸಿ ಹೆದ್ದಾರಿಗೆ ಹೊಂದಿಕೊಂಡಂತೆ ಭೂಮಿಯನ್ನು ೧೫ ದಿನದಲ್ಲಿ ಒದಗಿಸುವಂತೆ ಜಿಲ್ಲಾಧಿಕಾರಿ ವಿ.ವಿ.ಜ್ಯೋತ್ಸ್ನಾ ಅವರಿಗೆ ನಿರ್ದೇಶನ ನೀಡಿದ ಸಚಿವ ಸಿ.ಪಿ.ಯೋಗೇಶ್ವರ ಅವರು ೬ ಕಡೆ ಎ.ಎ.ಐ. ವಿಮಾನ ನಿಲ್ದಾಣಗಳನ್ನು ಮತ್ತು ಇತರೆ ಖಾಸಗಿ ಹೆಲಿಪ್ಯಾಡಗಳನ್ನು ಬಳಸಿಕೊಂಡು ತಾತ್ಕಾಲಿಕವಾಗಿ ಮುಂದಿನ ೨-೩ ತಿಂಗಳಲ್ಲಿ ಹೆಲಿಕಾಪ್ಟರ್ ಹಾರಾಟ ಆರಂಭಿಸಲಾಗುವುದು. ಇದರ ಜೊತೆ-ಜೊತೆಯಲ್ಲಿಯೆ ಪ್ರಮುಖ ಪ್ರವಾಸಿ ತಾಣಗಳಲ್ಲಿ ಹೆಲಿಪ್ಯಾಡ್ ಸಹ ನಿರ್ಮಿಸಲಾಗುವುದು ಎಂದು ಸಚಿವರು ತಿಳಿಸಿದರು.

ಜಿಲ್ಲೆಯ ಚಂದ್ರಂಪಳ್ಳಿ ಜಲಾಶಯ, ಅಮರ್ಜಾ ಜಲಾಶಯ, ಅಫಜಲಪೂರ ತಾಲೂಕಿನ ಸೊನ್ನ ಬ್ಯಾರೇಜ್, ಕಲಬುರಗಿ ತಾಲೂಕಿನ ಖಾಜಾ ಕೋಟನೂರ ಕೆರೆ, ಭೋಸಗಾ ಕೆರೆ, ಸೇಡಂ ತಾಲೂಕಿನ ಬೀರನಳ್ಳಿಯಲ್ಲಿಯೂ ಜಂಗಲ್ ಲಾಡ್ಜಸ್ ಮತ್ತು ರೆಸಾರ್ಟ್ ಸ್ಥಾಪನೆ ಕುರಿತಂತೆ ಪ್ರಸ್ತಾವನೆ ಕಳುಹಿಸಿದಲ್ಲಿ ಶೀಘ್ರವೇ ಕಾರ್ಯಾನುಷ್ಟಾನಕ್ಕೆ ತರಲಾಗುವುದು ಎಂದರು.

ಕಲಬುರಗಿಯ ಪೇದೆ ಬಲರಾಮ ರಜಪೂತಗೆ ಸಿಎಂ ಪದಕ

ಕಲಬುರಗಿಯಲ್ಲಿ ವಿಮಾನ ನಿಲ್ದಾಣವಿದ್ದರು ಒಂದು ಸ್ಟಾರ್ ಹೋಟೆಲ್‌ಗಳಿಲ್ಲ, ಇದು ಪ್ರವಾಸೋದ್ಯಮಕ್ಕೆ ಮಾರಕವಾಗಿದೆ. ಸ್ಟಾರ್ ಹೋಟೆಲ್ ನಿರ್ಮಿಸಲು ಮುಂದೆ ಬಂದಲ್ಲಿ ಇಲಾಖೆಯಿಂದ ಶೇ.೧೫ರಷ್ಟು ಸಬ್ಸಿಡಿ ನೀಡಲಾಗುವದು. ಹಿಂದುಳಿದ ಪ್ರದೇಶ ಇದಾಗಿರುವುದರಿಂದ ಇನ್ನು ಹೆಚ್ಚುವರಿ ಶೇ.೧೦ರಷ್ಟು ಸಬ್ಸಿಡಿ ನೀಡಲು ಸಹ ಇಲಾಖೆ ಸಿದ್ಧವಿದೆ. ಸ್ಟಾರ್ ಹೋಟೆಲ್‌ಗಳಿಗೆ ಕೈಗಾರಿಕಾ ಮಾನ್ಯತೆ ನೀಡಿದ್ದರಿಂದ ತೆರಿಗೆಯಲ್ಲಿ ವಿನಾಯಿತಿ ಜೊತೆಗೆ ವಿದ್ಯುತ್ ಬಿಲ್ಲು ಸಹ ಕಡಿಮೆ ಬರುತ್ತದೆ ಎಂದರು.

ಕಿಯೋಸ್ಕ್ ಸ್ಥಾಪಿಸಿ: ಕಲಬುರಗಿ ನಗರದ ಬಸ್ ನಿಲ್ದಾಣ, ರೈಲು ನಿಲ್ದಾಣ, ವಿಮಾನ ನಿಲ್ದಾಣಗಳಲ್ಲಿ ಪ್ರವಾಸಿಗರಿಗೆ ಅಗತ್ಯ ಮಾಹಿತಿ ನೀಡಲು ಕಿಯೋಸ್ಕ್ ಸ್ಥಾಪಿಸಬೇಕು ಮತ್ತು ನಗರದ ಎಲ್ಲಾ ಹೋಟೆಲ್‌ಗಳಲ್ಲಿ ಪ್ರವಾಸಿಗರಿಗೆ ಜಿಲ್ಲೆಯ ಪ್ರವಾಸಿ ತಾಣಗಳ ಸಮಗ್ರ ಮಾಹಿತಿ ದೊರೆಯುವಂತೆ ಬ್ರೋಚರ್ ಸಿದ್ಪಡಿಸಿ ವಿತರಿಸಬೇಕು ಎಂದು ಸಚಿವ ಸಿ.ಪಿ.ಯೋಗೇಶ್ವರ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.
ಪ್ರವಾಸೋದ್ಯಮ ಇಲಾಕೆಯ ಕಾರ್ಯದರ್ಶಿ ಪಂಕಜ ಕುಮಾರ ಪಾಂಡೆ ಅವರು ಮಾತನಾಡಿ ಹೆಲಿಟೂರಿಸ್ಮ್ ಭಾಗವಾಗಿ ರಾಜ್ಯದ ಪ್ರಮುಖ ಪ್ರವಾಸಿ ತಾಣಗಳಲ್ಲಿ ಹಂತ-ಹಂತವಾಗಿ ಹೆಲಿಪ್ಯಾಡ್ ನಿರ್ಮಿಸುವ ಯೋಜನೆ ಹೊಂದಿದೆ. ಜಿಲ್ಲೆಯಲ್ಲಿ ಜಂಗಲ್ಸ್ ಲಾಡ್ಜಸ್ ಮತ್ತು ರೆಸಾರ್ಟ್ ನಿರ್ಮಾಣಕ್ಕೆ ಮೂರು ದಿನದೊಳಗೆ ಪ್ರಸ್ತಾವನೆ ಸಲ್ಲಿಸಿದಲ್ಲಿ ಟೆಂಡರ್ ಕರೆಯಲಾಗುವುದು. ಪ್ರವಾಸಿ ಮೂಲಸೌಕರ್ಯ ಕಾಮಗಾರಿಗಳು ನಿಗದಿತ ಅವಧಿಯಲ್ಲಿಯೆ ಮುಗಿಸಬೇಕು ಎಂದರು.

ವಾಲ್ಮೀಕಿ ಕನಸು ಈಡೇರಿಸಲು ಪಣ ತೊಡಿ: ಡಾ.ಜಾಧವ

ಸಭೆಯಲ್ಲಿ ಕಲಬುರಗಿ ಕೋಟೆ ಅತಿಕ್ರಮಣ ತೆರವು ವಿಚಾರ ಮತ್ತು ಅಭಿವೃದ್ಧಿ ಕುರಿತು ಚರ್ಚೆಗೆ ಬಂದಾಗ ಜಿಲ್ಲಾಧಿಕಾರಿ ವಿ.ವಿ.ಜ್ಯೋತ್ಸ್ನಾ ಮಾತನಾಡಿ ಹೈಕೋರ್ಟ್ ನಿರ್ದೇಶನದಂತೆ ಅತಿಕ್ರಮಣ ತೆರವಿಗೆ ಕ್ರಿಯಾ ಯೋಜನೆ ರೂಪಿಸಿದೆ. ಅಲ್ಲಿನ ನಿವಾಸಿಗಳಿಗೆ ಸ್ಲಂ ಬೋರ್ಡ್‌ನಿಂದ ಪ್ರತ್ಯೇಕ ಪುನರ್ವಸತಿಗೆ ಕ್ರಮ ವಹಿಸಲಾಗಿದೆ ಎಂದು ಸಚಿವರಿಗೆ ತಿಳಿಸಿದರು.

ಪ್ರವಾಸೋದ್ಯಮ ಇಲಾಖೆಯ ಉಪನಿರ್ದೇಶಕ ಪ್ರಭುಲಿಂಗ ಎಸ್. ತಳಕೇರಿ ಮಾತನಾಡಿ ಜಿಲ್ಲೆಯಲ್ಲಿ ಪ್ರಸ್ತುತ ೧೦ ಪ್ರವಾಸಿ ತಾಣಗಳಿವೆ. ಇದರ ಜೊತೆಗೆ ಪ್ರವಾಸೋದ್ಯಮ ಇಲಾಖೆ ಹೊಸದಾಗಿ ರಾಜ್ಯದಾದ್ಯಂತ ಗುರುತಿಸಿರುವ ೩೧೯ ಪ್ರವಾಸಿ ತಾಣಗಳಲ್ಲಿ ಜಿಲ್ಲೆಯ ೨೯ ಪ್ರವಾಸಿ ತಾಣಗಳಿವೆ. ೨೦೧೯-೨೦ನೇ ಸಾಲಿನಲ್ಲಿ ವಿವಿಧ ಏಜೆನ್ಸಿಗಳ ಮೂಲಕ ಪ್ರವಾಸಿ ತಾಣಗಳಲ್ಲಿ ಮೂಲಸೌಕರ್ಯ ಕಲ್ಪಿಸುವ ೭೩ ಕಾಮಗಾರಿ ಕೈಗೆತ್ತಿಕೊಂಡಿದ್ದು, ಇದಕ್ಕಾಗಿ ೮೬೩೮.೨೪ ಲಕ್ಷ ರೂ. ಅನುದಾನ ಕಾಯ್ದಿರಿಸಿದೆ. ಇದರಲ್ಲಿ ೪೪೮೬.೮೫ ಲಕ್ಷ ರೂ. ಅನುದಾನ ಬಿಡುಗಡೆಯಾಗಿದ್ದು, ೧೩ ಕಾಮಗಾರಿಗಳು ಪೂರ್ಣಗೊಂಡಿವೆ. ೩೦ ಕಾಮಗಾರಿಗಳು ಪ್ರಗತಿಯಲ್ಲಿದ್ದರೆ ೩೦ ಕಾಮಗಾರಿಗಳು ಆರಂಭಿಸಬೇಕಿದೆ ಎಂದರು.

ಮಹಾಪುರುಷರ ಕೊಡುಗೆ ಅಪಾರ: ನ್ಯಾಯವಾದಿಗಳಾದ ಸತೀಶ ಅಳ್ಳೊಳ್ಳಿ

ಇದಲ್ಲದೆ ಜಿಲ್ಲೆಯ ಆಳಂದ ತಾಲೂಕಿನ ಅಮರ್ಜಾ ಜಲಾಶಯ ಬಳಿ ೧೦ ಕೋಟಿ ರೂ., ಅಫಜಲಪೂರ ತಾಲೂಕಿನ ಮಣ್ಣೂರ ದೇವಸ್ಥಾನ ಬಳಿ ೨ ಕೋಟಿ ರೂ., ಕಮಲಾಪೂರ ತಾಲೂಕಿನ ಹೊಳಕುಂದಾ ಗ್ರಾಮದಲ್ಲಿ ಐತಿಹಾಸಿಕ ಸ್ಮಾರಕ ರಕ್ಷಣೆಗೆ ೬ ಕೋಟಿ ರೂ., ಚಿತ್ತಾಪೂರ ತಾಲೂಕಿನ ಸನ್ನತ್ತಿ ದೇವಸ್ಥಾನ ಬಳಿ ೨ ಕೋಟಿ ರೂ., ಚಿಂಚೋಳಿ ತಾಲೂಕಿನ ಚಂದ್ರಂಪಲ್ಲಿಯಲ್ಲಿ ೧೦ ಕೋಟಿ ರೂ. ವೆಚ್ಚದಲ್ಲಿ ವಿವಿಧ ಮೂಲಸೌಕರ್ಯಗಳ ಅಭಿವೃದ್ಧಿ ಹಾಗೂ ಕಲಬುರಗಿ ನಗರದ ಕೆಸರಟಗಿ ಬಳಿ ೩.೫ ಎಕರೆ ಪ್ರದೇಶದಲ್ಲಿ ಸ್ಟಾರ್ ಹೋಟೆಲ್ ನಿರ್ಮಿಸಬೇಕಿದೆ ಎಂದು ಸಚಿವರ ಗಮನಕ್ಕೆ ತಂದರು.

ಸಭೆಯಲ್ಲಿ ಕಲ್ಯಾಣ ಕರ್ನಾಟಕ ಪ್ರದೆಶಾಭಿವೃದ್ಧಿ ಮಂಡಳಿಯ ಅಧ್ಯಕ್ಷ ದತ್ತಾತ್ರೇಯ ಪಾಟೀಲ ರೇವೂರ, ಈಶಾನ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಅಧ್ಯಕ್ಷ ರಾಜಕುಮಾರ ಪಾಟೀಲ ತೇಲ್ಕೂರ, ಸಂಸದ ಡಾ.ಉಮೇಶ ಜಾಧವ, ಶಾಸಕರಾದ ಎಂ.ವೈ.ಪಾಟೀಲ, ಬಸವರಾಜ ಮತ್ತಿಮೂಡ, ಡಾ.ಅವಿನಾಶ ಜಾಧವ, ವಿಧಾನ ಪರಿಷತ್ತಿನ ಶಾಸಕ ಬಿ.ಜಿ.ಪಾಟೀಲ, ಜಿಲ್ಲಾ ಪಂಚಾಯತ್ ಸದಸ್ಯರಾದ ಶಿವರಾಜ ಪಾಟೀಲ ರದ್ದೆವಾಡಗಿ, ಹರ್ಷಾನಂದ ಗುತ್ತೇದಾರ, ಸಿ.ಇ.ಓ. ಡಾ.ದಿಲೀಶ್ ಸಾಸಿ, ಮಹಾನಗರ ಪಾಲಿಕೆಯ ಆಯುಕ್ತ ಸ್ನೇಹಲ್ ಸುಧಾಕರ ಲೋಖಂಡೆ ಸೇರಿದಂತೆ ಇನ್ನಿತರ ಅಧಿಕಾರಿಗಳು ಇದ್ದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here