ಶಹಾಬಾದನಲ್ಲಿ ಎಪ್ರಿಲ್ 7 ರಿಂದ 9ರವರೆಗೆ 144ರ ಅಡಿಯಲ್ಲಿ ನಿಷೇಧಾಜ್ಞೆ ಜಾರಿ-ಸುರೇಶ ವರ್ಮಾ

0
860

ಶಹಾಬಾದ:ತಾಲೂಕಿನಲ್ಲಿ ಕೊರೊನಾ ವೈರಸ್ ಪ್ರಕರಣಗಳು ತೀವ್ರವಾಗಿ ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ನಗರದಲ್ಲಿ ಎಪ್ರಿಲ್ 7 ರ ಬೆಳಿಗ್ಗೆಯಿಂದ ಎಪ್ರಿಲ್ 9ರವರೆಗೆ ಮೂರು ದಿನಗಳ ಕಾಲ ವಿಪತ್ತು ನಿರ್ವಹಣಾ ಕಾಯ್ದೆಯಡಿ ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ ಕಲಂ 144ರ ಅಡಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಿ ತಹಸೀಲ್ದಾರ ಸುರೇಶ ವರ್ಮಾ ಆದೇಶ ಹೊರಡಿಸಿದ್ದಾರೆ.

ಸಾರ್ವಜನಿಕರ ಆರೋಗ್ಯದ ಹಿತದೃಷ್ಟಿಯಿಂದ ಎಪ್ರಿಲ್ 7 ರಿಂದ ಎಪ್ರಿಲ್ 9 ರವರೆಗೆ ಮೂರು ದಿನಗಳ ಕಾಲ ನಗರದಲ್ಲಿ ಕಲಂ 144 ರ ಅಡಿಯಲ್ಲಿ ನಿಷೇಧಾಜ್ಞೆ ಜಾರಿಗೆ ಬರಲಿದೆ. ಆದೇಶದ ಪ್ರಕಾರ ನಗರದಲ್ಲಿ ಐದಕ್ಕಿಂತ ಹೆಚ್ಚು ಜನರು ಒಟ್ಟು ಸೇರುವಂತಿಲ್ಲ. ಸಂತೆ, ಜಾತ್ರೆ, ಧಾರ್ಮಿಕ ಕಾರ್ಯಕ್ರಮಗಳು, ಪ್ರತಿಭಟನೆ, ಧರಣಿ, ಮುಷ್ಕರಗಳನ್ನು ನಡೆಸುವಂತಿಲ್ಲ. ಏನಾದರೂ ಕೈಗೊಂಡರೆ ಈ ಬಗ್ಗೆ ಕಠಿಣ ಕ್ರಮ ಕೈಗೊಳ್ಳಲಾಗುವುದು. ಅಲ್ಲದೇ ಸೂಕ್ತ ಕಾರಣವಿಲ್ಲದೆ ಯಾರೂ ಬೇಕಾಬಿಟ್ಟಿಯಾಗಿ ಓಡಾಡುವಂತಿಲ್ಲ.

Contact Your\'s Advertisement; 9902492681

ಜಿಲ್ಲೆಯಲ್ಲಿ ಮತ್ತು ತಾಲೂಕಿನಲ್ಲಿ ಒಂದೇ ಸಮನೆ ಕೊರೊನಾ ಪ್ರಕರಣಗಳು ಏರಿಕೆಯಾಗುತ್ತಿರುವುದರಿಂದ ಆತಂಕದ ವಾತಾವರಣ ಸೃಷ್ಠಿಯಾಗಿದೆ.ಈಗಾಗಲೇ ತಾಲೂಕಿನಲ್ಲಿ20 ಕ್ಕೂ ಹೆಚ್ಚು ಪ್ರಕರಣಗಳು ಬೆಳಕಿಗೆ ಬಂದಿವೆ.ಸೊಂಕಿತರ ಸಂಪರ್ಕಕ್ಕೆ ಬಂದ ಸುಮಾರು 400 ಕ್ಕೂ ಹೆಚ್ಚು ಜನರ ಸ್ಯಾಂಪಲ್ ಪಡೆದು ಪ್ರಯೋಗಾಲಯಕ್ಕೆ ಕಳಿಸಿ ಕೊಡಲಾಗಿದೆ.ಆದ್ದರಿಂದ ಸಾರ್ವಜನಿಕರು ಅನಾವಶ್ಯಕವಾಗಿ ಮನೆಯಿಂದ ಹೊರಗಡೆ ಬರಬೇಡಿ. ಅಲ್ಲದೇ ಅವಶ್ಯಕತೆ ಇದ್ದಾಗ ಕಡ್ಡಾಯವಾಗಿ ಮಾಸ್ಕ್ ಧರಿಸಿ.ನಿಮ್ಮಮತ್ತು ನಿಮ್ಮ ಕುಟುಂಬದ ಜೀವ ಹಾಗೂ ಸಾಮಾಜಿಕ ಸ್ವಾಸ್ಥ್ಯ ಕಾಪಾಡುವುದು ತಮ್ಮೆಲ್ಲರ ಜವಾಬ್ದಾರಿ.ಆದ್ದರಿಂದ ವಿಪತ್ತು ನಿರ್ವಹಣಾ ಕಾಯ್ದೆಯಡಿ ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ ಕಲಂ 144 ರ ಅಡಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ ಎಂದು ತಿಳಿಸಿದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here