ಚಿತ್ತಾಪುರ: ತಾಲ್ಲೂಕಿನ ವಾಡಿ ಪಟ್ಟಣದ ಬಿಜೆಪಿ ಶಕ್ತಿ ಕೇಂದ್ರದ ವತಿಯಿಂದ ಭಾರತೀಯ ಜನತಾ ಪಾರ್ಟಿಯ ಸಂಸ್ಥಾಪನ ದಿನಾಚರಣೆ ಆಚರಣೆ ಮಾಡಲಾಯಿತು.
ಈ ಸಂಸ್ಥಾಪನೆ ದಿನಾಚರಣೆಯ ಅಂಗವಾಗಿ ಕೆಲವು ದಿನಗಳ ಹಿಂದೆ ಹೃದಯಘಾತದಿಂದ ನಿಧನರಾದ ಬಿಜೆಪಿ ಮಾಜಿ ಶಾಸಕ ದಿವಂಗತ ವಾಲ್ಮೀಕಿ ನಾಯಕ್ ಅವರ ಮನೆಯ ಮೇಲೆ ಪಕ್ಷದ ಧ್ವಜಾರೋಹಣ ಮಾಡುವುದರ ಮೂಲಕ ಚಾಲನೆ ನೀಡಲಾಯಿತು.
ಈ ಸಂದರ್ಭದಲ್ಲಿ ವಾಡಿ ಬಿಜೆಪಿ ಶಕ್ತಿ ಕೇಂದ್ರದ ಪ್ರಧಾನ ಕಾರ್ಯದರ್ಶಿ ವೀರಣ್ಣ ಯಾರಿ ಮಾತನಾಡಿದರು.
ರಾಷ್ಟ್ರೀಯ ಸ್ವಯಂಸೇವಕ ಸಂಘದ ರಾಜಕೀಯ ಅಂಗವಾಗಿ ಸ್ಥಾಪಿತವಾಗಿದ್ದ ಡಾ.ಶ್ಯಾಮಪ್ರಸಾದ್ ಮುಖರ್ಜಿ ಸ್ಥಾಪಿತ ಭಾರತೀಯ ಜನ ಸಂಘ 1980ರಲ್ಲಿ ಭಾರತೀಯ ಜನತಾ ಪಕ್ಷವಾಗಿ ಮರು ನಾಮಕರಣಗೊಂಡು ಇಂದಿಗೆ 41 ವರ್ಷ ಪೂರೈಸಿದೆ ಎಂದರು.
ಪ್ರವಾಸೋದ್ಯಮ ಸಚಿವ ಸಿ.ಪಿ.ಯೋಗಿಶ್ವರಗೆ ಶಾಸಕ ಬಸವರಾಜ ಮತ್ತಿಮಡು ಸನ್ಮಾನ
ಹಿಂದುತ್ವ, ರಾಷ್ಟ್ರೀಯತೆ, ರಾಷ್ಟ್ರೀಯ ಸುರಕ್ಷತೆ, ಏಕಾತ್ಮ ಮಾನವತಾವಾದ ಹಾಗೂ ಬಲಪಂಥೀಯ ಮೌಲ್ಯಗಳನ್ನು ಪ್ರತಿಪಾದಿಸುವ ಪಕ್ಷವಾಗಿ ರೂಪಗೊಂಡು. ಹಿಂದುತ್ವ ಎಂಬುದು ಒಂದು ಮತವನ್ನು ಪ್ರತಿನಿಧಿಸುವುದಿಲ್ಲ, ಬದಲಾಗಿ ರಾಷ್ಟ್ರೀಯತೆಯ ಪ್ರತೀಕ ಎಂಬ ಸಿದ್ದಾಂತ ಎಂಬುದನ್ನು ಸಾರಿ ಇಂದು ವಿಶ್ವದಲ್ಲೇ ಅತೀ ದೊಡ್ಡ ಪಕ್ಷ ವಾಗಿದ್ದು ನಮ್ಮೆಲ್ಲರಿಗೆ ಹೆಮ್ಮೆಯ ವಿಷಯ, ನಮ್ಮಂತಹ ಪ್ರತಿಯೊಬ್ಬ ಕಾರ್ಯಕರ್ತರ ಶ್ರಮದ ಫಲ ಎಂದರು.
ಈ ಸಂದರ್ಭದಲ್ಲಿ ಪುರಸಭೆಯ ವಿರೋಧ ಪಕ್ಷದ ನಾಯಕರಾದ ಭೀಮಶಾ ಜೀರೋಳ್ಳಿ, ಮುಖಂಡರಾದ ಗಿರಿಮಲ್ಲಪ್ಪ ಕಟ್ಟಿಮನಿ,ರಾಮು ರಾಥೋಡ್, ರವೀಂದ್ರ ನಾಯಕ್,ಕಿಶನ್ ಜಾದವ್, ಅಶೋಕ್ ಪವಾರ್, ಕಾಶಿನಾಥ ಅರಳಗುಂಡಗಿ,ವಿಜಯ ಪವಾರ್,ರವಿ ರಾಠೋಡ ಸೇರಿದಂತೆ ಇತರರು ಪಾಲ್ಗೊಂಡಿದ್ದರು.
ಕಲಬುರಗಿ: ಹೈದ್ರಾಬಾದ ಕರ್ನಾಟಕ ಶಿಕ್ಷಣ ಸಂಸ್ಥೆಯ ಶ್ರೀಮತಿ ವೀರಮ್ಮ ಗಂಗಸಿರಿ ಪದವಿ ಪೂರ್ವ ಮಹಿಳಾ ಮಹಾವಿದ್ಯಾಲಯ ಕಲಬುರಗಿಯಲ್ಲಿ ಪ್ರತಿ ವರ್ಷದಂತೆ…
ಅಫಜಲಪುರ: 2024-25ನೇ ಸಾಲಿನಲ್ಲಿ ಅಫಜಲಪುರ ತಾಲೂಕಿನಲ್ಲಿರುವ ಸಕ್ಕರೆ ಕಾರ್ಖಾನೆಗಳು ರೈತರಿಗೆ ಕನಿಷ್ಠ 3500 ರೂ.ಬೆಲೆ ನಿಗದಿ ಪಡಿಸಿ ಘೋಷಣೆ ಮಾಡಬೇಕು,ಅಲ್ಲದೇ…
ಕಲಬುರಗಿ: ಕಾರ್ಯಕ್ರಮ ಒಂದರಲ್ಲಿ ಪ್ರವಾದಿ ಮುಹಮ್ಮದ್ (ಸ.ಅ) ಅವರ ವಿರುದ್ಧ ಅಕ್ರಮಣಕಾರಿ ಮತ್ತು ಪ್ರಚೋದನಕಾರಿ ಹೇಳಿಕೆ ನೀಡಿರುವ ಗಾಜಿಯಾಬಾದ್ನ ದಾಸ್ನಾ…
ಕಲಬುರಗಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿ.ಸಿ ಟ್ರಸ್ಟ್ ಮತ್ತು ಜಿಲ್ಲಾ ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಸಮಿತಿಯಿಂದ…
ಶಹಾಬಾದ: ನಗರಸಭೆ ವ್ಯಾಪ್ತಿಯ ಸಾರ್ವಜನಿಕರ ಕುಡಿಯುವ ನೀರಿನ ಬಿಲ್ ಬಡ್ಡಿ ಮನ್ನಾ ಮಾಡಿ ಅಸಲು ಮಾತ್ರ ಪಾವತಿಸಲು ಅನುಕೂಲ ಮಾಡಿಕೊಡಬೇಕೆಂದು…
ಶಹಾಬಾದ: ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳು ರೈತರ ಜೀವನಾಡಿಯಾಗಿದ್ದು, ಇವುಗಳ ಪ್ರಗತಿಗೆ ಆದ್ಯತೆ ನೀಡುವುದು ಪ್ರತಿಯೊಬ್ಬರ ಜವಾಬ್ದಾರಿ ಎಂದು…