ಶಹಾಪುರ: ಗಿರೀಶ್ ಕಾರ್ನಾಡ್ ಅವರು ನಟರಾಗಿ, ನಿರ್ದೇಶಕರಾಗಿ, ಸಾಹಿತಿಗಳಾಗಿ, ರಂಗಭೂಮಿ ಕಲಾವಿದರಾಗಿ, ಎಲ್ಲ ಕ್ಷೇತ್ರಗಳಲ್ಲೂ ಕ್ರಿಯಾಶೀಲರಾಗಿ ಕೆಲಸ ಮಾಡಿ ಬಾಳಿ ಬದುಕಿದವರು ಎಂದು ಖ್ಯಾತ ಕಥೆಗಾರರಾದ ಸಿದ್ದರಾಮ ಹೊನ್ಕಲ್ ಅವರು ಹೇಳಿದರು.
ಸಾಹಿತಿ ಸಂಶೋಧಕರಾದ ಡಾ. ಮೊನಪ್ಪ ಶಿರವಾಳ ಮಾತನಾಡಿ ಒಬ್ಬ ಸಾಹಿತಿಯ ಬದುಕು ಮತ್ತು ಬರಹ ಒಂದೇ ನೆಲೆಗಟ್ಟಿನಲ್ಲಿರಬೇಕು ಎಂಬುದನ್ನು ತೋರಿಸಿಕೊಟ್ಟವರು ಗಿರೀಶ್ ಕಾರ್ನಾಡ್ ಅವರು ಎಂದು ಹೇಳಿದರು.
ಹಿರಿಯ ಜೀವಿ ಶರಣ ಸಾಹಿತಿ ಶಿವಣ್ಣ ಇಜೇರಿ ಮಾತನಾಡಿ ಸಿನಿಮಾ ರಂಗದಲ್ಲೂ ಅವರು ಗುರುತಿಸಿಕೊಂಡು ಬಹುಭಾಷಾ ಸಿನಿಮಾಗಳನ್ನು ನಿರ್ದೇಶಿಸಿ ಕಥೆ ಸಂಭಾಷಣೆಯನ್ನು ನೀಡಿದ್ದಾರೆ ಸಂಸ್ಕಾರ ಎಂಬ ಅವರ ಚಲನಚಿತ್ರ ಬಹಳ ಅದ್ಭುತವಾಗಿ ಮೂಡಿ ಬಂದಿದೆ ಎಂದು ಈ ಸಂದರ್ಭದಲ್ಲಿ ನೆನಪಿಸಿಕೊಂಡರು.
ಕಾರ್ಯಕ್ರಮದ ಪ್ರಾರಂಭದಲ್ಲಿ ಗಿರೀಶ್ ಕಾರ್ನಾಡ್ ಅವರಿಗೆ ಶ್ರದ್ಧಾಂಜಲಿ ಸಲ್ಲಿಸಿ ಒಂದು ನಿಮಿಷಗಳ ಕಾಲ ಮೌನಾಚರಣೆ ಸಲ್ಲಿಸಲಾಯಿತು ಈ ಸಂದರ್ಭದಲ್ಲಿ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ಸಿದ್ದಲಿಂಗಣ್ಣ ಆನೆಗುಂದಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು, ತಾಲ್ಲೂಕು ಶರಣ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ಲಿಂಗಣ್ಣ ಪಡಶೆಟ್ಟಿ, ಮುಖಂಡರಾದ ಬಸನಗೌಡ ಮಾಲಿ ಪಾಟೀಲ್ ಸಗರ, ನಗರ ಯೋಜನಾ ಪ್ರಾಧಿಕಾರದ ಮಾಜಿ ಅಧ್ಯಕ್ಷರಾದ ಗುಂಡಣ್ಣ ತುಂಬಿಗಿ,ಬಸವರಾಜ ಅರುಣಿ, ಗುಂಡಪ್ಪ ನಿವೃತ್ತ ಆರ್. ಐ.ಹಾಗೂ ಇತರರು ಉಪಸ್ಥಿತರಿದ್ದರು.
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…