ಕಲಬುರಗಿ: ಡಾ. ಬಾಬು ಜಗಜೀವನರಾಮ ಹಾಗೂ ಡಾ. ಬಾಬಾಸಾಹೇಬ ಅಂಬೇಡ್ಕರ್ ಅವರು ದಲಿತ ಲೋಕದ ಎರಡು ಕಣ್ಣುಗಳು ಇದ್ದ ಹಾಗೆ ಎಂದು ಪತ್ರಕರ್ತ-ಲೇಖಕ ಡಾ. ಶಿವರಂಜನ್ ಸತ್ಯಂಪೇಟೆ ಹೇಳಿದರು.
ಎಚ್. ಶಿವರಾಮೇಗೌಡರ ಕರ್ನಾಟಕ ರಕ್ಷಣಾ ವೇದಿಕೆಯ ಜಿಲ್ಲಾ ಘಟಕದ ವತಿಯಿಂದ ನಗರದ ಸಂಗಮ ವಿದ್ಯಾಮಂದಿರದಲ್ಲಿ ಗುರುವಾರ ಹಮ್ಮಿಕೊಂಡಿದ್ದ ಹಸಿರುಕ್ರಾಂತಿಯ ಹರಿಕಾರ ಡಾ. ಬಾಬು ಜಗಜೀವನರಾಮ ಅವರ 114ನೇ ಹಾಗೂ , ಸಂವಿಧಾನಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಅವರ 130ನೇ ಜಯಂತ್ಯುತ್ಸವ ಕಾರ್ಯಕ್ರಮದಲ್ಲಿ ವಿಶೇಷ ಉಪನ್ಯಾಸ ನೀಡಿದ ಅವರು, ಅವಮಾನ, ಅಸ್ಪೃಶ್ಯತೆಯ ನೋವು ಅನುಭವಿಸಿದ ಈ ಮಹನೀಯರು ತಮ್ಮ ಸ್ವ ಸಾಮರ್ಥ್ಯದ ಮೂಲಕ ಮೇರು ವ್ಯಕ್ತಿಗಳಾದರು ಎಂದು ಅಭಿಪ್ರಾಯಪಟ್ಟರು.
ಎಸ್ ಡಿ ಎಮ್ ಸಿ ಅಧ್ಯಕ್ಷರಾಗಿ ನಾಗಮೂರ್ತಿ ಗುತ್ತೆದಾರ ಆಯ್ಕೆ
ಕಾರ್ಯಕ್ರಮ ಉದ್ಘಾಟಿಸಿದ ಡಿ.ಎಂ.ಎಸ್. ಎಸ್. ಸಂಸ್ಥಾಪಕ ಲಿಂಗರಾಜ ತಾರ್ ಫೈಲ್ ಮಾತನಾಡಿ, ವಿದ್ಯಾರ್ಥಿಗಳು ಮಾದರಿ ಪುರುಷರ ಆದರ್ಶದ ಬದುಕನ್ನು ತಮ್ಮದಾಗಿಸಿಕೊಳ್ಳಬೇಕು. ಗುರು ಹಾಗೂ ಗುರಿ ಇಟ್ಟುಕೊಂಡು ಜೀವನದಲ್ಲಿ ಯಶಸ್ಸು ಕಾಣಬೇಕು ಎಂದು ತಿಳಿಸಿದರು.
ಮುಖ್ಯ ಅತಿಥಿಯಾಗಿದ್ದ ಜನಪರ ಹೋರಾಟಗಾರ ನಾಗಲಿಂಗಯ್ಯ ಮಠಪತಿ ಮಾತನಾಡಿ, ಕನಸು ಕಾಣುವುದರಲ್ಲಿ ತಪ್ಪಿಲ್ಲ. ಆದರೆ ಆ ಕನಸು ನನಸಾಗಿಸುವ ನಿಟ್ಟಿನಲ್ಲಿ ಸಾಗುವುದೇ ಜೀವನದ ಧ್ಯೇಯವಾಗಬೇಕು ಎಂದು ಹೇಳಿದರು.
ಕೊರಳ್ಳಿ ಕ್ರಾಸ್ ಹತ್ತಿರ ಶೈಕ್ಷಣಿಕ ಹಬ್ ಸ್ಥಾಪಿಸಲು ಯತ್ನ
ಸಂಗಮ ವಿದ್ಯಾಸಂಸ್ಥೆಯ ಜಂಟಿ ಕಾರ್ಯದರ್ಶಿ ಜ್ಯೋತಿ ಇಮದಾಪುರ ಅಧ್ಯಕ್ಷತೆ ವಹಿಸಿದ್ದರು. ಕರವೇ ರಾಜ್ಯ ಸಂಚಾಲಕ ಮಂಜುನಾಥ ನಾಲವಾರಕರ್ ನಿರೂಪಿಸಿ ವಂದಿಸಿದರು.
ವಾಡಿ (ಕಲಬುರಗಿ): ಪಟ್ಟಣದ ಡಾ.ಬಿ.ಆರ್.ಅಂಬೇಡ್ಕರ್ ಅವರ ವೃತ್ತದಲ್ಲಿರುವ ಬಾಬಾಸಾಹೇಬರ ಪುತ್ಥಳಿಗೆ ಮಾಲಾರ್ಪಣೆ ಮಾಡಿ ಸಂವಿಧಾನ ಪೂರ್ವ ಪೀಠಿಕೆ ಓದುವ ಮೂಲಕ…
ಕಲಬುರಗಿ: ಕಾಂಗ್ರೆಸ್ ಪಕ್ಷದ ಅಂಗ ಸಂಖ್ಯೆ ಸೇವಾದಳ ಯಂಗ್ ಬ್ರಿಗೇಡ್ ಸದಸ್ಯತ್ವ ಅಭಿಯಾನ ನ.20ರಿಂದ ರಾಜ್ಯವ್ಯಾಪಿ ಆರಂಭ ಮಾಡಲಾಗಿದ್ದು, ಆಸಕ್ತರು…
ಕಲಬುರಗಿ: ಜೀವನದಲ್ಲಿ ಹತ್ತನೇ ಮತ್ತು ಪಿಯುಸಿ ಬಹಳ ಮಹತ್ವದ ಘಟ್ಟಗಳು. ಇವೆರಡು ನಮ್ಮ ಭವಿಷ್ಯವನ್ನು ನಿರ್ಧರಿಸುತ್ತವೆ. ವಿದ್ಯಾರ್ಥಿಗಳು ಅಚಲವಾದ ಆತ್ಮವಿಶ್ವಾಸದಿಂದ…
ಸೇಡಂ : ತಮ್ಮ ಬೌದ್ಧಿಕ ವಿಕಾಸದಲ್ಲಿಯೇ ಮಹಿಳೆಯರ ಅಸ್ತಿತ್ವವಿದೆ ಎಂದು ಕೇಂದ್ರ ಸಾಹಿತ್ಯ ಅಕಾಡೆಮಿ ಸದಸ್ಯ ಡಾ.ಬಸವರಾಜ ಸಾದರ ಹೇಳಿದರು.…
ಕಲಬುರಗಿ: ಅಫಜಲಪುರ ತಾಲೂಕಿನ ಸೊನ್ನ ಗ್ರಾಮದ ನಿವಾಸಿ ಆನಂದಪ್ಪ ಶರಣಪ್ಪ ಉಮ್ಮನಗೋಳ್(೮೦) ಅವರು ಸೋಮವಾರ ಬೆಳಗ್ಗೆ ವಯೋಸಹಜವಾಗಿ ನಿಧನರಾದರು. ಮೃತರು…
ಕಲಬುರಗಿ: ಸಂಘಸಂಸ್ಥೆಗಳು ಸಾದಕರನ್ನು ಗುರುತಿಸಿ ಪ್ರಶಸ್ತಿ ಪುರಸ್ಕಾರಗಳನ್ನು ನೀಡುವ ಮುಖಾಂತರಾ ಅವರ ಜವಾಬ್ದಾರಿ ಹೆಚ್ಚಿಸುವುದರಜೋತೆಯಲ್ಲಿ ಸಾಮಾಜಿಕ ಕೆಲಸಗಳನ್ನು ಮಾಡುತ್ತಿರುವುದು ಸಮಾಜಕ್ಕೆ…