ಬಿಸಿ ಬಿಸಿ ಸುದ್ದಿ

ನಿವೃತ್ತ ಚಾಲಕ ನಿರ್ವಾಹಕರನ್ನು ತಾತ್ಕಾಲಿಕ ಒಪ್ಪಂದದ ಆಧಾರದ ಮೇಲೆ ನಿಯೋಜನೆ

ಕಲಬುರಗಿ: ಈಶಾನ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ವಿವಿಧ ವಿಭಾಗಗಳಲ್ಲಿ ಸೇವೆ ಸಲ್ಲಿಸಿ ಕಳೆದ ಎರಡು ವರ್ಷಗಳಲ್ಲಿ ನಿವೃತ್ತಿ ಹೊಂದಿ ವಯೋಮಿತಿ 62 ವರ್ಷದೊಳಗಿನ ಚಾಲಕ ಹಾಗೂ ನಿರ್ವಾಹಕರನ್ನು ತಾತ್ಕಾಲಿಕವಾಗಿ ಸಂಸ್ಥೆಯಲ್ಲಿ ಒಪ್ಪಂದದ ಆಧಾರದ ಮೇಲೆ ಈ ಕೆಳಕಂಡ ಷರತ್ತು ಹಾಗೂ ನಿಬಂಧನೆಗೊಳಪಟ್ಟು ನಿಯೋಜಿಸಲಾಗುತ್ತಿದೆ ಎಂದು ಕಲಬುರಗಿ ಈಶಾನ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕ ಕೂರ್ಮಾರಾವ್ ಎಂ. ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ನಿವೃತ್ತ ನೌಕರರನ್ನು ಅವರು ನಿವೃತ್ತಿ ಹೊಂದಿದ ವಿಭಾಗ ಅಥವಾ ವಾಸಸ್ಥಳಕ್ಕೆ ಹತ್ತಿರದ ವಿಭಾಗಗಳಲ್ಲಿ ನಿಯೋಜಿಸಲಾಗುತ್ತದೆ. ಈ ಕೆಳಕಂಡ ಷರತ್ತುಗಳನ್ನು ಒಪ್ಪಿ ಕರ್ತವ್ಯ ನಿರ್ವಹಿಸಲು ಆಸಕ್ತಿಯಿರುವ ನಿವೃತ್ತ ಚಾಲನಾ ಸಿಬ್ಬಂದಿಗಳು ತಾವು ನಿವೃತ್ತಿ ಹೊಂದಿದ ವಿಭಾಗದಲ್ಲಿ ಕೂಡಲೇ ಕರ್ತವ್ಯಕ್ಕೆ ವರದಿ ಮಾಡಿಕೊಳ್ಳಬಹುದಾಗಿದೆ.

ಉಡುಪಿ ಕ್ಷೇತ್ರ ಶಿಕ್ಷಣಾಧಿಕಾರಿ ಅಮಾನತಿನ ಕುರಿತು ಸಮಗ್ರ ತನಿಖೆಗೆ ಕ್ಯಾಂಪಸ್ ಫ್ರಂಟ್ ಆಗ್ರಹ

ಷರತ್ತು ಮತ್ತು ನಿಬಂಧನೆಗಳು ಇಂತಿವೆ. ದೈಹಿಕವಾಗಿ ಚಾಲನಾ / ನಿರ್ವಾಹಕ ವೃತ್ತಿ ಮಾಡಲು ಸಮರ್ಥರಿರುವ ಬಗ್ಗೆ ಸಂಸ್ಥೆಯಲ್ಲಿ ನಿಗದಿಪಡಿಸಿರುವ ದೈಹಿಕ, ದೃಷ್ಟಿ ಸಾಮಥ್ರ್ಯ ಪ್ರಮಾಣಪತ್ರ ಹಾಗೂ ಕೋವಿಡ್-19 ನೆಗೆಟಿವ್ ವರದಿ ಕುರಿತು ಜಿಲ್ಲಾ ವೈದ್ಯಾಧಿಕಾರಿಗಳಿಂದ ಪ್ರಮಾಣಪತ್ರ ಪಡೆಯಬೇಕು. ಪ್ರಸ್ತುತ ಚಾಲ್ತಿಯಲ್ಲಿರುವ ಭಾರಿ ವಾಹನ / ನಿರ್ವಾಹಕ ಪರವಾನಗಿ ಹೊಂದಿರುವುದು ಕಡ್ಡಾಯವಾಗಿದೆ. ಪ್ರತಿ ದಿನದ ಕರ್ತವ್ಯಕ್ಕೆ ಚಾಲಕರಿಗೆ 800 ರೂ. ಹಾಗೂ ನಿರ್ವಾಹಕರಿಗೆ 700 ರೂ.ಗಳಂತೆ ಗೌರವ ಧನ ನೀಡಲಾಗುವುದು. ಈ ಸಿಬ್ಬಂದಿಗಳಿಗೆ ವಾರದ ರಜೆ ಹೊರತುಪಡಿಸಿ ಬೇರೆ ಯಾವುದೇ ರಜೆ ಸೌಲಭ್ಯಗಳಿಗೆ ಅರ್ಹರಿರುವುದಿಲ್ಲ. ಒಪ್ಪಂದದ ಅವಧಿಯನ್ನು ಯಾವುದೇ ಹೆಚ್ಚುವರಿ ಆರ್ಥಿಕ/ಸೇವಾ ಸೌಲಭ್ಯಗಳಿಗೆ ಪರಿಗಣಿಸುವುದಿಲ್ಲ.

ಈಗಾಗಲೇ ಮುಷ್ಕರದಲ್ಲಿ ಪಾಲ್ಗೊಂಡಿರುವ ಈ ಸಾರಿಗೆ ಸಂಸ್ಥೆಯ ಸಿಬ್ಬಂದಿಗಳು ಈ ಮುಷ್ಕರವನ್ನು ಕೈ ಬಿಟ್ಟು ಕರ್ತವ್ಯಕ್ಕೆ ಹಾಜರಾಗಬೇಕೆಂದು ಸಂಸ್ಥೆಯ ಸಿಬ್ಬಂದಿಗಳಿಗೆ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕರು ಮನವಿ ಮಾಡಿದ್ದಾರೆ.

emedialine

Recent Posts

ಶಹಾಪುರ: ಪಹಣಿಗೆ ಆಧಾರ್ ಜೋಡಣೆ ಕಡ್ಡಾಯ

ಶಹಾಪುರ ತಾಲೂಕಿನ ಸಗರ ಗ್ರಾಮ ಆಡಳಿತ ಅಧಿಕಾರಿ ರಮೇಶ್ ರಾಠೋಡ್ ಶಹಾಪುರ : ರೈತರು ಬೆಳೆವಿಮೆ, ಪರಿಹಾರ,ಸಾಲ ಮನ್ನಾ,ಇತರೆ ಸೇರಿದಂತೆ…

1 hour ago

ಕಲಬುರಗಿ: ಬಿಜೆಪಿ ಹಿರಿಯ ಮುಖಂಡ ಧರ್ಮಣ್ಣ ದೊಡ್ಡಮನಿ ನಿಧನ

ಕಲಬುರಗಿ: ಬಿಜೆಪಿ ಹಿರಿಯ ಮುಖಂಡ ಧರ್ಮಣ್ಣ ಇಂದು ಬೆಳಗ್ಗೆ ವಾಕಿಂಗ್ ಹೋದಾಗ ತೀವ್ರ ಹೃದಯಾಘಾತದಿಂದ ನಿಧನರಾಗಿದ್ದಾರೆ. ಕಲಬುರಗಿ ನಗರದ ಜೇವರ್ಗಿ…

7 hours ago

ಜೇವರ್ಗಿ: ಲಂಚಾಪಡೆಯುತ್ತಿದ್ದಾಗ ಮಹಿಳಾ ಸಿಬ್ಬಂದಿ ಲೋಕಾಯುಕ್ತರ ಬಲೆಗೆ

ಕಲಬುರಗಿ: ನೀರಿನ ಕನೆಕ್ಷನಗಾಗಿ ಹತ್ತು ಸಾವಿರ ಲಂಚಾಪಡೆಯುತ್ತಿದ್ದಾಗ ಜೇವರ್ಗಿ ಪುರಸಭೆಯ ಮಹಿಳಾ ಸಿಬ್ಬಂದಿ ಲಣೊಕಾಯುಕ್ತರ ಬಲೆಗೆ ಬಿದ್ದ ಘಟನೆ ಬುಧವಾರ…

19 hours ago

371 ಜೆ ಅಡಿ ಉದ್ಯೋಗ ನೇಮಕಾತಿ ಸಂಬಂಧದ ಗೊಂದಲ ನಿವಾರಿಸಿ ಮಾರ್ಗಸೂಚಿ ಸಿದ್ಧಪಡಿಸಲು ಸಚಿವರ ಸೂಚನೆ

ಬೆಂಗಳೂರು: ಕಲ್ಯಾಣ ಕರ್ನಾಟಕ ಪ್ರದೇಶದಲ್ಲಿ 371 ಜೆ ಅಡಿ ಉದ್ಯೋಗ ನೇಮಕಾತಿ ಹಾಗೂ ಬಡ್ತಿ ಸಂಬಂಧದಲ್ಲಿ ಆಗಿರುವ ಗೊಂದಲಗಳನ್ನು ನಿವಾರಿಸಿ…

21 hours ago

ಶ್ಯಾಮರಾವ ನಾಟಿಕಾರಗೆ ಅಧ್ಯಕ್ಷರನ್ನಾಗಿ ನೇಮಕಕ್ಕೆ ಡಾ. ಮಲ್ಲಿಕಾರ್ಜುನ ಖರ್ಗೆಗೆ ಮನವಿ

ಕಲಬುರಗಿ: ಆದಿಜಾಂಬವ ಸರ್ಕಾರಿ ಅರೆ ಸರ್ಕಾರಿ ನೌಕರರ ಪತ್ತಿನ ಸಹಕಾರ ಸಂಘದ ನಿಯೋಗ ನವದೆಹಲಿಯಲ್ಲಿ ಎಐಸಿಸಿ ಅಧ್ಯಕ್ಷರಾದ ಡಾ.ಮಲ್ಲಿಕಾರ್ಜುನ ಖರ್ಗೆ…

21 hours ago

ಚಿರಂಜೀವಿ ವೆಂಕಯ್ಯ ಕುಶಾಲ್ ಗುತ್ತೇದಾರ್ ಗೆ ಸನ್ಮಾನ

ಕಲಬುರಗಿ: ಮಾಜಿ ಸಚಿವರಾದ ಮಾಲಿಕೆಯ್ಯಾ ಗುತ್ತೇದಾರ್ ಅವರ ಅಪ್ಪಟ ಅಭಿಮಾನಿ ಹಾಗೂ ತಾಲೂಕ ಕನ್ನಡ ಸಾಹಿತ್ಯ ಪರಿಷತ್ತಿನ ನಿಕಟ ಪೂರ್ವ…

21 hours ago