ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಉಪನ್ಯಾಸಕರು ಪಾಠ ಮಾಡಬೇಕು: ಶಿವಶರಣಪ್ಪ ಮೂಳೆಗಾಂವ

0
33

ಕಲಬುರಗಿ: ವಿದ್ಯಾರ್ಥಿಗಳ ಅನುಗುಣವಾಗಿ ಪಾಠ ಮಾಡಿದಾಗ ನಮ್ಮ ಜಿಲ್ಲೆಯ ಫಲಿತಾಂಶವನ್ನು ಮೊದಲನೆಯ ಸ್ಥಾನ ಪಡೆಯಲು ಅನುಮಾನ ಇಲ್ಲ ಎಂದು ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೆಶಕರಾದ ಶಿವಶರಣಪ್ಪ ಮೂಳೆಗಾಂವ ಹೇಳಿದರು.

ನಗರದ ಕೆ.ಇ.ಬಿ. ಕಲ್ಯಾಣ ಮಂಟಪದ ಹತ್ತಿರವಿರುವ ರಾಧಬಾಯಿ ಜಹಾಗೀರದಾರ್ ವಿಜ್ಞಾನ ವಿಭಾಗದ ಕಾಲೇಜಿನಲ್ಲಿ ಪದವಿ ಪೂರ್ವ ಶಿಕ್ಷಣ ಇಲಾಖೆ ಕಲಬುರಗಿ ಹಾಗೂ ಜಿಲ್ಲಾ ಪದವಿ ಪೂರ್ವ ಕಾಲೇಜುಗಳು ಸಹಯೋಗದೊಂದಿಗೆ ಹಮ್ಮಿಕೊಂಡ ಪ್ರಶ್ನೆ ಪತ್ರಿಕೆ ಕಾರ್ಯಾಗಾರವನ್ನು ಉದ್ಘಾಟಿಸಿ ಮಾತನಾಡಿದ ಅವರು, ಒಟ್ಟು ಮೂರು ಪ್ರಶ್ನೆ ಪತ್ರಿಕೆ ತಯಾರಿಸುವ ಮೂಲಕ ವಿದ್ಯಾರ್ಥಿಗಳಿಗೆ ಅರ್ಥವಾಗುವ ರೀತಿಯಲ್ಲಿ ಉಪನ್ಯಾಸಕರು ಬೋಧನೆ ಮಾಡಲು ಪ್ರಯತ್ನ ಮಾಡಬೇಕು ಎಂದು ಮೂಳೆಗಾಂವ ಅವರು ಉಪನ್ಯಾಸಕರಿಗೆ ಕಿವಿ ಮಾತು ಹೇಳಿದರು.

Contact Your\'s Advertisement; 9902492681

ಕಲ್ಯಾಣ ಕರ್ನಾಟಕ ಅಭಿವೃದ್ಧಿಗಾಗಿ ಬಿ.ಜಿ. ಪಾಟೀಲ್ ಮುಂದಾಳತ್ವಕ್ಕೆ ಪ್ಯಾಟಿ ಮೆಚ್ಚುಗೆ

ಪ್ರಾಚಾರ್ಯರ ಸಂಘದ ಜಿಲ್ಲಾಧ್ಯಕ್ಷರಾದ ಅರುಣಕುಮಾರ ಪಾಟೀಲ ಮಾತನಾಡಿ, ವಿದ್ಯಾರ್ಥಿಗಳಲ್ಲಿ ಆಸಕ್ತಿ ವಹಿಸಿ ಉಪನ್ಯಾಸಕರು ಪಾಠ ಮಾಡುವುದರ ಮೂಲಕ ವಿದ್ಯಾರ್ಥಿಗಳ ಜೊತೆಗೆ ಚರ್ಚೆ ಮಾಡಬೇಕು ಎಂದು ಉಪನ್ಯಾಸಕರಿಗೆ ಸಲಹೆ ನೀಡಿದರು.

ನಾವು ನಮ್ಮ ಮಕ್ಕಳಿಗಿಂತ ಹೆಚ್ಚಿನ ಪ್ರಮಾಣದಲ್ಲಿ ನಮ್ಮ ಕಾಲೇಜಿನಲ್ಲಿ ಓದುವ ವಿದ್ಯಾರ್ಥಿಗಳಿಗೆ ಸಲಹೆ, ಸಹಕಾರ ನೀಡಿದಾಗ ಮಾತ್ರ ನಾವು ಪಡೆಯುವ ಸಂಬಳ ಅರ್ಥವಿರುತ್ತದೆ ಎಂದು ಸಹೋದ್ಯೋಗಿಗಳಿಗೆ ತಿಳಿಸಿದರು.

ಕಲಬುರಗಿ: ಜಿಲ್ಲಾ ಪಂಚಾಯತ್ ಕ್ಷೇತ್ರ ರದ್ದು ಖಂಡಿಸಿ ಪ್ರತಿಭಟನೆ

ಈ ಸಂದರ್ಭದಲ್ಲಿ ಜೇವರ್ಗಿ ಸರಕಾರಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಬಸವರಾಜ ಬಿರಾದಾರ, ರಮಾಬಾಯಿ ಜಹಾಗೀರದಾರ ಪದವಿ ಪೂರ್ವ ವಿಜ್ಞಾನ ಕಾಲೇಜಿನ ಪ್ರಾಂಶುಪಾಲರಾದ ಡಾ.ಬುರ್ಲಿ ಪ್ರಹ್ಲಾದ, ದಶರಥ ರಾಠೋಡ ಸೇರಿದಂತೆ ಹಲವಾರು ಉಪನ್ಯಾಸಕರು ಕಾರ್ಯಾಗಾರದಲ್ಲಿ ಭಾಗವಹಿಸಿದ್ದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here