ಸುರಪುರ: 14 ರಂದು ತಹಸೀಲ್ ಸಭಾಂಗಣದಲ್ಲಿ ಡಾ. ಬಾಬಾ ಸಾಹೇಬ ಅಂಬೇಡ್ಕರರ ಜಯಂತಿ ಆಚರಿಸಲಾಗುವುದು ಎಂದು ತಹಸೀಲ್ದಾರ ಸುರೇಶ ಅಂಕಲಗಿ ತಿಳಿಸಿದರು.
ನಗರದ ತಹಸೀಲ್ ಕಚೇರಿಯಲ್ಲಿ ಹಮ್ಮಿಕೊಂಡಿದ್ದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿ,ಈಗ ದೇಶಾದ್ಯಂತ ಸಾರ್ವತ್ರಿಕ ಚುನಾವಣೆಯ ನೀತಿ ಸಂಹಿತೆ ಇರುವ ಕಾರಣ ಸರಕಾರದ ಆದೇಶದಂತೆ ಈಬಾರಿ ಸರಳವಾಗಿ ಜಯಂತಿ ಆಚರಿಸಲಾಗುವುದು ಎಂದರು.
14 ರಂದು ಬೆಳಿಗ್ಗೆ ಎಂಟು ಗಂಟೆಗೆ ತಹಸೀಲ್ ಕಚೇರಿ ಸೇರಿದಂತೆ ತಾಲ್ಲೂಕಿನ ಎಲ್ಲಾ ಕಚೇರಿಗಳು ಮತ್ತು ಶಾಲಾ ಕಾಲೇಜುಗಳಲ್ಲಿ ಕಡ್ಡಾಯವಾಗಿ ಜಯಂತಿ ಆಚರಿಸಿ,ನಂತರ ೧೧ ಗಂಟೆಗೆ ತಹಸೀಲ್ ಸಭಾಂಗಣದಲ್ಲಿ ತಾಲ್ಲೂಕಾಡಳಿತದಿಂದ ಆಚರಿಸುವ ಜಯಂತಿ ಹಾಗು ಉಪನ್ಯಾಸ ಕಾರ್ಯಕ್ರಮದಲ್ಲಿ ಎಲ್ಲಾ ಇಲಾಖೆಯ ಅಧಿಕಾರಿಗಳು ಕಡ್ಡಾಯವಾಗಿ ಭಾಗವಹಿಸುವಂತೆ ಕರೆ ನೀಡಿದರು.ನೀತಿಸಂಹಿತೆಯ ಅಂಗವಾಗಿ ಯಾವುದೆ ಮೆರವಣಿಗೆಗೆ ಅವಕಾಶವಿಲ್ಲದ ಕಾರಣ ಸರಳವಾಗಿ ಜಯಂತಿ ಆಚರಿಸುವುದಾಗಿ ತಿಳಿಸಿದರು.
ಸಭೆಯಲ್ಲಿ ನಗರಸಭೆ ಆಯುಕ್ತ ಏಜಾಜ್ ಹುಸೇನ,ವ್ಯವಸ್ಥಾಕ ಯಲ್ಲಪ್ಪ ನಾಯಕ,ಲಕ್ಷ್ಮಣ ಕಟ್ಟಿಮನಿ, ಕೃಷಿ ಇಲಾಖೆ ಎಡಿ ಮಹಾದೇವಪ್ಪ,ಅರಣ್ಯ ಇಲಾಖೆಯ ಶರಣಪ್ಪ ಕುಂಬಾರ ಹಾಗು ವಿವಿಧ ಸಂಘಟನೆಗಳ ಮುಖಂಡರಾದ ಭೀಮರಾಯ ಸಿಂಧಗೇರಿ,ನಾಗಣ್ಣ ಕಲ್ಲದೇವನಹಳ್ಳಿ,ರಮೇಶ ಅರಕೇರಿ,ಮಹಾದೇವ ಬೊಮ್ಮನಹಳ್ಳಿ,ರಾಜು ಕಟ್ಟಿಮನಿ,ಶಿವಲಿಂಗ ಹಸನಾಪುರ,ರಾಮಣ್ಣ ಶೆಳ್ಳಿಗಿ, ಭೀಮಾಶಂಕರ ಬೊಮ್ಮನಹಳ್ಳಿ,ಮಲ್ಲಿಕಾರ್ಜುನ ವಾಗಣಗೇರಾ,ಸಾಹೇಬಗೌಡ ವಾಗಣಗೇರಾ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಸಭೆಯಲ್ಲಿದ್ದರು.
ರಾಜು ಕುಂಬಾರ
ಸುರಪುರ
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…
ಚಿಂಚೋಳಿ: ಸಿದ್ದಶ್ರೀ ಕಾರ್ಖಾನೆ ಪ್ರಾರಂಭ ಮಾಡಲು ರೈತರು ಹಗಲು ರಾತ್ರಿ ಎನ್ನದೆ ಬಸವೇಶ್ವರ ಉತ್ತರ ಬಳಿ ಧರಣಿಯಲ್ಲಿ ಹೋರಾಟ ಮಾಡುತ್ತಿದ್ದು.…
ಕಲಬುರಗಿ: ನವೆಂಬರ್ 29 ರಿಂದ 2 ಡಿಸೇಂಬರ್ ವರೆಗೆ ತಮಿಳುನಾಡಿನ ಅಲಗಪ್ಪ ವಿಶ್ವವಿದ್ಯಾಲಯ ಕರೈಕುಡಿಯಲ್ಲಿ ನಡೆಯುವ ದಕ್ಷಿಣ ಭಾರತ ಅಂತರ…
ಕಲಬುರಗಿ: ನಗರದ ವಾರ್ಡ ನಂ.51.ರ ಜೇವರ್ಗಿ ಕಾಲೋನಿ ವಾಟರ್ ಟ್ಯಾಂಕ್ ಹತ್ತಿರದ ಉದ್ಯವನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ ಖರ್ಗೆ…