ಕಲಬುರಗಿ: ಕೋವಿಡ್ 2ನೇ ಅಲೆಯ ಸೋಂಕು ಹೆಚ್ಚಾಗಿ ಕಂಡು ಬರುತ್ತಿರುವ ಹಿನ್ನೆಲೆಯಲ್ಲಿ ಕಲಬುರಗಿ ನಗರದಾದ್ಯಂತ ಸಿ.ಆರ್.ಪಿ.ಸಿ. ಕಾಯ್ದೆ 1973ರ ಕಲಂ 144 ರನ್ವಯ ಇದೇ ಏಪ್ರಿಲ್ 10 ರಿಂದ 20 ರವರೆಗೆ ಒಟ್ಟು ಹತ್ತು ದಿನಗಳ ಕಾಲ ಪ್ರತಿದಿನ ರಾತ್ರಿ 10 ಗಂಟೆಯಿಂದ ಬೆಳಿಗ್ಗೆ 5 ಗಂಟೆಯವರೆಗೆ ಪೂರ್ಣ ರಾತ್ರಿ ಕರ್ಫ್ಯೂ ಜಾರಿಗೊಳಿಸಿ ಕಲಬುರಗಿ ನಗರ ಪೊಲೀಸ್ ಆಯುಕ್ತ ಎನ್. ಸತೀಶಕುಮಾರ ಅವರು ಆದೇಶ ಹೊರಡಿಸಿದ್ದಾರೆ.
ಕೊರೋನಾ ಕಫ್ರ್ಯೂ (ನೈಟ್ ಕರ್ಫ್ಯೂ ) ಸಂದರ್ಭದಲ್ಲಿ ಅನಾವಶ್ಯಕವಾಗಿ ರಾತ್ರಿ ವೇಳೆಯಲ್ಲಿ ಯಾರು ಸಹ ಓಡಾಡುವಂತಿಲ್ಲ. ಈ ಕೆಳಕಂಡ ಅತ್ಯಾವಶ್ಯಕ ಸೇವೆಗಳಿಗೆ ಮಾತ್ರ ಅನುಮತಿ ನೀಡಲಾಗಿದ್ದು, ಉಳಿದ ಎಲ್ಲಾ ಸೇವೆ ಹಾಗೂ ಸಂಚಾರಗಳನ್ನು ನಿಷೇಧಿಸಲಾಗಿದೆ.
ಬಿಜೆಪಿ ನಾಯಕನಿಗೆ ‘ನಾಡೋಜ’ ಪ್ರಶಸ್ತಿಯೂ..! ವಿವಾದಕ್ಕೀಡಾಯಿತು ಹಂಪಿ ವಿಶ್ವವಿದ್ಯಾಲಯದ ನಡೆಯೂ.!!
ವಿವಿಧ ಅರೋಗ್ಯ ಸಂಬಂಧಿತ ಸಮಸ್ಯೆಗಳಿಂದ ಬಳಲುತ್ತಿರುವ ವ್ಯಕ್ತಿಗಳಿಗೆ ಹಾಗೂ ಅವರ ಸಹಾಯಕರಿಗೆ ವೈದ್ಯಕೀಯ ಸೇವೆಗಳಿಗಾಗಿ ಸಂಚರಿಸಲು ಅನುಮತಿ ನೀಡಲಾಗಿದೆ.
ರಾತ್ರಿ ಪಾಳಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಎಲ್ಲಾ ಕಾರ್ಖಾನೆಗಳು, ಕಂಪನಿಗಳು ಹಾಗೂ ಸಂಸ್ಥೆಗಳಿಗೆ ಯಥಾಸ್ಥಿತಿ ಕಾರ್ಯನಿರ್ವಹಿಸಲು ಅನುಮತಿ ನೀಡಲಾಗಿದ್ದು, ಆದರೆ ಸಂಬಂಧಿಸಿದ ಕಾರ್ಮಿಕರು, ನೌಕರರು ನೈಟ್ ಕಫ್ರ್ಯೂ ಅವಧಿಗೆ ಮುನ್ನವೇ ತಮ್ಮ ಕರ್ತವ್ಯಕ್ಕೆ ಹಾಜರಾಗಬೇಕು.
ಕೊರೋನಾ ರಾತ್ರಿ ಕಫ್ರ್ಯೂ ಸಂದರ್ಭದಲ್ಲಿ ವೈದ್ಯಕೀಯ ಸೇವೆಗಳು ಹಾಗೂ ತುರ್ತು ಚಟುವಟಿಕೆಗಳಿಗೆ ಮಾತ್ರ ಅನುಮತಿ ನೀಡಲಾಗಿದ್ದು, ಇನ್ನುಳಿದ ಎಲ್ಲಾ ವಾಣಿಜ್ಯ ಚಟುವಟಿಕೆಗಳನ್ನು ನಿರ್ಬಂಧಿಸಲಾಗಿದೆ.
ಫ್ಲಿಪ್ ಕಾರ್ಟ್ ನಡೆಸಿದ ಸಮೀಕ್ಷೆಯಲ್ಲಿ ಈ ಅಂಶ ಬಹಿರಂಗ
ಅಗತ್ಯ ಸೇವೆಗಳನ್ನು ಒದಗಿಸುವ ವಾಹನಗಳು, ಸರಕು ಸಾಗಾಣಿಕೆ ವಾಹನಗಳು, ಹೋಮ್ ಡೆಲಿವೆರಿ, ಇ-ಕಾಮರ್ಸ್ ಮತ್ತು ಖಾಲಿ ವಾಹನಗಳ ಸಂಚಾರಕ್ಕೆ ಮಾತ್ರ ಅನುಮತಿ ಒದಗಿಸಲಾಗಿದೆ. ರಾತ್ರಿ ವೇಳೆಯಲ್ಲಿ ಬಸ್ಸು, ರೈಲು ಹಾಗೂ ವಿಮಾನದ ಮೂಲಕ ದೂರ ಪ್ರಯಾಣಕ್ಕೆ ಅನುಮತಿಸಿದ್ದು, ಪ್ರಯಾಣಿಕರು ಮನೆಯಿಂದ ನಿಲ್ದಾಣಕ್ಕೆ ಹಾಗೂ ನಿಲ್ದಾಣದಿಂದ ಮನೆಗೆ ಅಧಿಕೃತ ಟಿಕೆಟ್‍ಗಳನ್ನು ತೋರಿಸುವ ಮೂಲಕ ಆಟೋ, ಕ್ಯಾಬ್ ಮತ್ತಿತರ ವಾಹನಗಳಲ್ಲಿ ಸಂಚರಿಸಲು ಅನುಮತಿ ನೀಡಲಾಗಿದೆ.
ಪೊಲೀಸ್ ಅಧಿಕಾರಿಗಳು ಈ ನೈಟ್ ಕಫ್ರ್ಯೂ ಅದೇಶವನ್ನು ಕಟ್ಟುನಿಟ್ಟಾಗಿ ಅನುಷ್ಠಾನಗೊಳಿಸಬೇಕೆಂದು ಕಲಬುರಗಿ ನಗರ ಪೊಲೀಸ್ ಆಯುಕ್ತರು ತಮ್ಮ ಆದೇಶದಲ್ಲಿ ತಿಳಿಸಿದ್ದಾರೆ.