ಬಿಸಿ ಬಿಸಿ ಸುದ್ದಿ

ಕಲಬುರಗಿ ನಗರದಾದ್ಯಂತ ಇಂದಿನಿಂದ 10 ನೈಟ್ ಕರ್ಫ್ಯೂ

ಕಲಬುರಗಿ: ಕೋವಿಡ್ 2ನೇ ಅಲೆಯ ಸೋಂಕು ಹೆಚ್ಚಾಗಿ ಕಂಡು ಬರುತ್ತಿರುವ ಹಿನ್ನೆಲೆಯಲ್ಲಿ ಕಲಬುರಗಿ ನಗರದಾದ್ಯಂತ ಸಿ.ಆರ್.ಪಿ.ಸಿ. ಕಾಯ್ದೆ 1973ರ ಕಲಂ 144 ರನ್ವಯ ಇದೇ ಏಪ್ರಿಲ್ 10 ರಿಂದ 20 ರವರೆಗೆ ಒಟ್ಟು ಹತ್ತು ದಿನಗಳ ಕಾಲ ಪ್ರತಿದಿನ ರಾತ್ರಿ 10 ಗಂಟೆಯಿಂದ ಬೆಳಿಗ್ಗೆ 5 ಗಂಟೆಯವರೆಗೆ ಪೂರ್ಣ ರಾತ್ರಿ ಕರ್ಫ್ಯೂ ಜಾರಿಗೊಳಿಸಿ ಕಲಬುರಗಿ ನಗರ ಪೊಲೀಸ್ ಆಯುಕ್ತ ಎನ್. ಸತೀಶಕುಮಾರ ಅವರು ಆದೇಶ ಹೊರಡಿಸಿದ್ದಾರೆ.

ಕೊರೋನಾ ಕಫ್ರ್ಯೂ (ನೈಟ್ ಕರ್ಫ್ಯೂ ) ಸಂದರ್ಭದಲ್ಲಿ ಅನಾವಶ್ಯಕವಾಗಿ ರಾತ್ರಿ ವೇಳೆಯಲ್ಲಿ ಯಾರು ಸಹ ಓಡಾಡುವಂತಿಲ್ಲ. ಈ ಕೆಳಕಂಡ ಅತ್ಯಾವಶ್ಯಕ ಸೇವೆಗಳಿಗೆ ಮಾತ್ರ ಅನುಮತಿ ನೀಡಲಾಗಿದ್ದು, ಉಳಿದ ಎಲ್ಲಾ ಸೇವೆ ಹಾಗೂ ಸಂಚಾರಗಳನ್ನು ನಿಷೇಧಿಸಲಾಗಿದೆ.

ಬಿಜೆಪಿ ನಾಯಕನಿಗೆ ‘ನಾಡೋಜ’ ಪ್ರಶಸ್ತಿಯೂ..! ವಿವಾದಕ್ಕೀಡಾಯಿತು ಹಂಪಿ ವಿಶ್ವವಿದ್ಯಾಲಯದ ನಡೆಯೂ.!!

ವಿವಿಧ ಅರೋಗ್ಯ ಸಂಬಂಧಿತ ಸಮಸ್ಯೆಗಳಿಂದ ಬಳಲುತ್ತಿರುವ ವ್ಯಕ್ತಿಗಳಿಗೆ ಹಾಗೂ ಅವರ ಸಹಾಯಕರಿಗೆ ವೈದ್ಯಕೀಯ ಸೇವೆಗಳಿಗಾಗಿ ಸಂಚರಿಸಲು ಅನುಮತಿ ನೀಡಲಾಗಿದೆ.

ರಾತ್ರಿ ಪಾಳಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಎಲ್ಲಾ ಕಾರ್ಖಾನೆಗಳು, ಕಂಪನಿಗಳು ಹಾಗೂ ಸಂಸ್ಥೆಗಳಿಗೆ ಯಥಾಸ್ಥಿತಿ ಕಾರ್ಯನಿರ್ವಹಿಸಲು ಅನುಮತಿ ನೀಡಲಾಗಿದ್ದು, ಆದರೆ ಸಂಬಂಧಿಸಿದ ಕಾರ್ಮಿಕರು, ನೌಕರರು ನೈಟ್ ಕಫ್ರ್ಯೂ ಅವಧಿಗೆ ಮುನ್ನವೇ ತಮ್ಮ ಕರ್ತವ್ಯಕ್ಕೆ ಹಾಜರಾಗಬೇಕು.

ಕೊರೋನಾ ರಾತ್ರಿ ಕಫ್ರ್ಯೂ ಸಂದರ್ಭದಲ್ಲಿ ವೈದ್ಯಕೀಯ ಸೇವೆಗಳು ಹಾಗೂ ತುರ್ತು ಚಟುವಟಿಕೆಗಳಿಗೆ ಮಾತ್ರ ಅನುಮತಿ ನೀಡಲಾಗಿದ್ದು, ಇನ್ನುಳಿದ ಎಲ್ಲಾ ವಾಣಿಜ್ಯ ಚಟುವಟಿಕೆಗಳನ್ನು ನಿರ್ಬಂಧಿಸಲಾಗಿದೆ.

ಫ್ಲಿಪ್ ಕಾರ್ಟ್ ನಡೆಸಿದ ಸಮೀಕ್ಷೆಯಲ್ಲಿ ಈ ಅಂಶ ಬಹಿರಂಗ

ಅಗತ್ಯ ಸೇವೆಗಳನ್ನು ಒದಗಿಸುವ ವಾಹನಗಳು, ಸರಕು ಸಾಗಾಣಿಕೆ ವಾಹನಗಳು, ಹೋಮ್ ಡೆಲಿವೆರಿ, ಇ-ಕಾಮರ್ಸ್ ಮತ್ತು ಖಾಲಿ ವಾಹನಗಳ ಸಂಚಾರಕ್ಕೆ ಮಾತ್ರ ಅನುಮತಿ ಒದಗಿಸಲಾಗಿದೆ. ರಾತ್ರಿ ವೇಳೆಯಲ್ಲಿ ಬಸ್ಸು, ರೈಲು ಹಾಗೂ ವಿಮಾನದ ಮೂಲಕ ದೂರ ಪ್ರಯಾಣಕ್ಕೆ ಅನುಮತಿಸಿದ್ದು, ಪ್ರಯಾಣಿಕರು ಮನೆಯಿಂದ ನಿಲ್ದಾಣಕ್ಕೆ ಹಾಗೂ ನಿಲ್ದಾಣದಿಂದ ಮನೆಗೆ ಅಧಿಕೃತ ಟಿಕೆಟ್‍ಗಳನ್ನು ತೋರಿಸುವ ಮೂಲಕ ಆಟೋ, ಕ್ಯಾಬ್ ಮತ್ತಿತರ ವಾಹನಗಳಲ್ಲಿ ಸಂಚರಿಸಲು ಅನುಮತಿ ನೀಡಲಾಗಿದೆ.

ಪೊಲೀಸ್ ಅಧಿಕಾರಿಗಳು ಈ ನೈಟ್ ಕಫ್ರ್ಯೂ ಅದೇಶವನ್ನು ಕಟ್ಟುನಿಟ್ಟಾಗಿ ಅನುಷ್ಠಾನಗೊಳಿಸಬೇಕೆಂದು ಕಲಬುರಗಿ ನಗರ ಪೊಲೀಸ್ ಆಯುಕ್ತರು ತಮ್ಮ ಆದೇಶದಲ್ಲಿ ತಿಳಿಸಿದ್ದಾರೆ.

emedialine

Recent Posts

ಬೆಂಗಳೂರು: ಸೇವಾದಳ ಯಂಗ್ ಬ್ರಿಗೇಡ್‌ನಿಂದ ಸದಸ್ಯತ್ವ ಅಭಿಯಾನಕ್ಕೆ ಚಾಲನೆ

ಕಲಬುರಗಿ: ಕಾಂಗ್ರೆಸ್ ಪಕ್ಷದ ಅಂಗ ಸಂಖ್ಯೆ ಸೇವಾದಳ ಯಂಗ್ ಬ್ರಿಗೇಡ್ ಸದಸ್ಯತ್ವ ಅಭಿಯಾನ ನ.20ರಿಂದ ರಾಜ್ಯವ್ಯಾಪಿ ಆರಂಭ ಮಾಡಲಾಗಿದ್ದು, ಆಸಕ್ತರು…

5 hours ago

ಆತ್ಮವಿಶ್ವಾಸವಿದ್ದರೆ ಜೀವನದಲ್ಲಿ ಏನನ್ನಾದರೂ ಸಾಧಿಸಬಹುದು : ಶಂಕರಗೌಡ

ಕಲಬುರಗಿ: ಜೀವನದಲ್ಲಿ ಹತ್ತನೇ ಮತ್ತು ಪಿಯುಸಿ ಬಹಳ ಮಹತ್ವದ ಘಟ್ಟಗಳು. ಇವೆರಡು ನಮ್ಮ ಭವಿಷ್ಯವನ್ನು ನಿರ್ಧರಿಸುತ್ತವೆ. ವಿದ್ಯಾರ್ಥಿಗಳು ಅಚಲವಾದ ಆತ್ಮವಿಶ್ವಾಸದಿಂದ…

16 hours ago

ಬೌದ್ಧಿಕ ವಿಕಾಸದಿಂದ ತನ್ನತನದ ಶೋಧ

ಸೇಡಂ : ತಮ್ಮ ಬೌದ್ಧಿಕ ವಿಕಾಸದಲ್ಲಿಯೇ ಮಹಿಳೆಯರ ಅಸ್ತಿತ್ವವಿದೆ ಎಂದು ಕೇಂದ್ರ ಸಾಹಿತ್ಯ ಅಕಾಡೆಮಿ ಸದಸ್ಯ ಡಾ.ಬಸವರಾಜ ಸಾದರ ಹೇಳಿದರು.…

16 hours ago

ನಿಧನ ವಾರ್ತೆ; ಆನಂದಪ್ಪ ಉಮ್ಮನಗೋಳ್

ಕಲಬುರಗಿ: ಅಫಜಲಪುರ ತಾಲೂಕಿನ ಸೊನ್ನ ಗ್ರಾಮದ ನಿವಾಸಿ ಆನಂದಪ್ಪ ಶರಣಪ್ಪ ಉಮ್ಮನಗೋಳ್(೮೦) ಅವರು ಸೋಮವಾರ ಬೆಳಗ್ಗೆ ವಯೋಸಹಜವಾಗಿ ನಿಧನರಾದರು. ಮೃತರು…

18 hours ago

ಸಂಘಸಂಸ್ಥೆಗಳು ಸಮಾಜಕ್ಕೆ ನೀಡಿದ ಕೋಡುಗೆ ಅಪಾರ ಪಾಳಾಶ್ರೀ

ಕಲಬುರಗಿ: ಸಂಘಸಂಸ್ಥೆಗಳು ಸಾದಕರನ್ನು ಗುರುತಿಸಿ ಪ್ರಶಸ್ತಿ ಪುರಸ್ಕಾರಗಳನ್ನು ನೀಡುವ ಮುಖಾಂತರಾ ಅವರ ಜವಾಬ್ದಾರಿ ಹೆಚ್ಚಿಸುವುದರಜೋತೆಯಲ್ಲಿ ಸಾಮಾಜಿಕ ಕೆಲಸಗಳನ್ನು ಮಾಡುತ್ತಿರುವುದು ಸಮಾಜಕ್ಕೆ…

18 hours ago

ಹೊಸ ಹೊಸ ಉದ್ಯೋಗ ಸೃಷ್ಟಿಸಲು HKE ಸಂಸ್ಥೆ ಕಾರ್ಯ ಶ್ಲಾಘನೀಯ

ಕಲಬುರಗಿ; ಹೈದ್ರಾಬಾದ್- ಕರ್ನಾಟಕ ಶಿಕ್ಷಣ ಸಂಸ್ಥೆಯ PDACE ಸಭಾಂಗಣದಲ್ಲಿ ನಡೆದ ಕಲ್ಯಾಣ ಕರ್ನಾಟಕ startup conclave ಇಂದು ದಕ್ಷಣ ಶಾಸಕ…

18 hours ago