ಬಿಸಿ ಬಿಸಿ ಸುದ್ದಿ

ಕರ್ತವ್ಯಕ್ಕೆ ಗೈರು ಹಿನ್ನೆಲೆ: ಈಶಾನ್ಯ ಸಾರಿಗೆ ಸಂಸ್ಥೆಯ 31 ಸಿಬ್ಬಂದಿ ವಜಾ

ಕಲಬುರಗಿ: ರಸ್ತೆ ಸಾರಿಗೆ ನೌಕರರ‌ ಮುಷ್ಕರ‌ದಲ್ಲಿ ಪಾಲ್ಗೊಂಡು ಕರ್ತವ್ಯಕ್ಕೆ ಗೈರಾದ ಈಶಾನ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ 8 ತರಬೇತಿ ಸಿಬ್ಬಂದಿ ಮತ್ತು 23 ಖಾಯಂ ಸಿಬ್ಬಂದಿ ಸೇರಿ 31 ಸಿಬ್ಬಂದಿಯನ್ನು ವಜಾಗೊಳಿಸಲಾಗಿದೆ ಎಂದು ಸಂಸ್ಥೆಯ ವ್ಯವಸ್ಥಾಪಕ‌ ನಿರ್ದೇಶಕ ಎಂ.ಕೂರ್ಮರಾವ ತಿಳಿಸಿದ್ದಾರೆ.

ಇದಲ್ಲದೆ ಸಾರ್ವಜನಿಕ ಹಿತದೃಷ್ಠಿ ಮತ್ತು ಆಡಳಿತಾತ್ಮಕ ಕಾರಣದಿಂದ 53 ಚಾಲನಾ ಸಿಬ್ಬಂದಿ, 20 ತಾಂತ್ರಿಕ ಸಿಬ್ಬಂದಿ, 2 ಆಡಳಿತ ಸಿಬ್ಬಂದಿ ಸೇರಿದಂತೆ 75 ಸಿಬ್ಬಂದಿಗಳಿಗೆ ಸಂಸ್ಥೆಯ ಅಂತರ ವಿಭಾಗ ವರ್ಗಾವಣೆ ಮಾಡಲಾಗಿದೆ.

ಹತ್ತನೇ ತರಗತಿ ವಿದ್ಯಾರ್ಥಿ ಕ್ಲಾಸ್ ರೂಮ್ ಲ್ಲಿ ಆತ್ಮಹತ್ಯೆ

122 ಚಾಲನಾ ಮತ್ತು‌ 27 ತಾಂತ್ರಿಕ ಸಿಬ್ಬಂದಿ ಸೇರಿದಂತೆ ಒಟ್ಟು 149 ಸಿಬ್ಬಂದಿಗಳ ಎರವಲು ಸೇವೆ ರದ್ದುಗೊಳಿಸಿ ಮೂಲ ಹುದ್ದೆಯ ಕರ್ತವ್ಯಕ್ಕೆ ನಿಯೋಜಿಸಲಾಗಿದೆ ಎಂದು ಎಂ.ಕೂರ್ಮರಾವ್ ತಿಳಿಸಿದ್ದಾರೆ.

ಮುಷ್ಕರದ‌ ನಡುವೆಯೂ ಸಾರ್ವಜನಿಕರ ಪ್ರಯಾಣಕ್ಕೆ ತೊಂದರೆಯಾಗದಂತೆ 358 ಖಾಸಗಿ ಬಸ್, 191 ಆಂಧ್ರಪ್ರದೇಶ ಮತ್ತು ತೆಲಂಗಾಣಾ ಸಾರಿಗೆ ಸಂಸ್ಥೆಯ ವಾಹನಗಳು ಹಾಗೂ 2757 ಇತರೆ ವಾಹನಗಳನ್ನು ಬಸ್ ನಿಲ್ದಾಣದ ಮೂಲಕ ಸಂಚಾರಕ್ಕೆ ಅವಕಾಶ ಮಾಡಿಕೊಡಲಾಗಿದೆ.

ಕಲಬುರಗಿ ನಗರದಾದ್ಯಂತ ಇಂದಿನಿಂದ 10 ನೈಟ್ ಕರ್ಫ್ಯೂ

ಸಿಬ್ಬಂದಿ‌ ಮನವೊಲಿಕೆ, 270 ಬಸ್ ರಸ್ತೆಗೆ: ಶನಿವಾರ ಮುಷ್ಕರದಲ್ಲಿ ನಿರತ‌ ಸಿಬ್ಬಂದಿಗಳ ಮನವೊಲಿಸಿ‌ ಸಂಸ್ಥೆಯ 270 ವಾಹನ‌ಗಳನ್ನು ಕಾರ್ಯಾಚರಣೆಗೆ ಇಳಿಸಲಾಗಿದೆ. ಹೊಸಪೇಟೆ ವಿಭಾಗದಲ್ಲಿ ಶೇ. 40ರಷ್ಟು ವಾಹನಗಳು ರಸ್ತೆಗೆ ಇಳಿದಿವೆ ಎಂದರು.

4.5 ಕೋಟಿ ಆದಾಯದಲ್ಲಿ‌ ಕೊರತೆ: ಸಾರಿಗೆ‌ ನೌಕರರ ಮುಷ್ಕರದಿಂದ‌ ಸಂಸ್ಥೆಗೆ 4.5 ಕೋಟಿ ರೂ. ಆದಾಯದಲ್ಲಿ ಕೊರತೆಯಾಗಿದ್ಸು, ಹೀಗಾಗಿ ಮುಷ್ಕರ ಕೈಬಿಟ್ಟು ಕರ್ತವ್ಯಕ್ಕೆ ಹಾಜರಾಗುವಂತೆ ನೌಕರರಲ್ಲಿ ಎಂ.ಕೂರ್ಮರಾವ್ ಮನವಿ ಮಾಡಿದ್ದಾರೆ.

emedialine

Recent Posts

ಸಂವಿಧಾನ ಸಮರ್ಪಣಾ ದಿನದ ಅಂಗವಾಗಿ ಸಂವಿಧಾನ ಓದು ಕಾರ್ಯಕ್ರಮ

ಕಲಬುರಗಿ: ಸ್ಲಂ ಜನರ ಸಂಘಟನೆ ಕರ್ನಾಟಕ ವತಿಯಿಂದ ಆಯೋಜಿಸಿದ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ವೃತ್ತ ಹೈ -ಕೋರ್ಟ್ ರಸ್ತೆ…

4 hours ago

ಶೋಷಿತ ಜನಜಾಗೃತಿ ವೇದಿಕೆ ವತಿಯಿಂದ ಪ್ರಧಾನ ಮಂತ್ರಿ ನರೇಂದ್ರ ಮೋದಿಗೆ ಮನವಿ

ಕಲಬುರಗಿ: ಕರ್ನಾಟಕ ರಾಜ್ಯದ ಕಲಬುರಗಿ-ಜಿಲ್ಲೆಯಲ್ಲಿ ದಲಿತ (ಮಾದಿಗ) ಸಮುದಾಯದವರಿಗೆ ರಾಷ್ಟ್ರೀಕೃತ ಬ್ಯಾಂಕ್‍ಗಳು ಸಾಲ ಸೌಲಭ್ಯ ನೀಡದಿರುವ ಕುರಿತು ಶೋಷಿತ ಜನಜಾಗೃತಿ…

4 hours ago

ಪ್ರಶಸ್ತಿ ಪುರಸ್ಕೃತರು ಸನ್ಮಾನ ಸಮಾರಂಭಕ್ಕೆ ಗೈರು: ಡಾ. ಎಸ್.ಎಸ್. ಗುಬ್ಬಿ ಬೇಸರ

ಕಲಬುರಗಿ: ಪ್ರಶಸ್ತಿ ಪುರಸ್ಕೃತರು ಸನ್ಮಾನ ಸಮಾರಂಭಕ್ಕೆ ಗೈರಾಗಿರುವುದು ಬೇಸರದ ಸಂಗತಿ ಎಂದು ಜಿಲ್ಲಾ ವೈದ್ಯ ಸಾಹಿತ್ಯ ಪರಿಷತ್ ಅಧ್ಯಕ್ಷ ಹಾಗೂ…

4 hours ago

ಹಣೆಯ ಮೇಲೆ ಹಚ್ಚಿದ ವಿಭೂತಿ ಆತ್ಮವಿಶ್ವಾಸ ಹೆಚ್ಚಿಸುತ್ತದೆ: ಅರ್ಪಿತಾ ಪಾಟೀಲ

ಕಲಬುರಗಿ: ಹಣೆಯ ಮೇಲೆ ಹಚ್ಚಿದ ವಿಭೂತಿ ಸಮಾನತೆ ಸಾರುವದರೊಂದಿಗೆ ಮನುಷ್ಯನ ಆತ್ಮವಿಶ್ವಾಸ ಹೆಚ್ಚಿಸುತ್ತದೆ ಎಂದು ಆರಾಧನಾ ಪದವಿ ಪೂರ್ವ ಕಾಲೇಜಿನ…

4 hours ago

ಕಲಬುರಗಿ ಕೇಂದ್ರ ಕಾರಾಗೃಹದಲ್ಲಿ ಸಂವಿಧಾನ ದಿನ ಆಚರಣೆ

ಕಲಬುರಗಿ ಕೇಂದ್ರ ಕಾರಾಗೃಹದಲ್ಲಿರುವ ಸಂವಿಧಾನ ದಿನವನ್ನು ಸರ್ಕಾರದ ಸುತ್ತೋಲೆ ಆದೇಶದಂತೆ ಕಾರಾಗೃಹದ ಲಿಪಿಕ/ ಕಾನಿನಿರ್ವಹಕ ಅಧಿಕಾರಿ/ಸಿಬ್ಬಂದಿಯವರೊಂದಿಗೆ ಡಾ|| ಬಾಬಾ ಸಾಹೇಬ್…

4 hours ago

ಸಂವಿಧಾನವನ್ನು ರಕ್ಷಿಸಲು ಜವಾಬ್ದಾರಿ ಯುವಕರು ಮೇಲಿದೆ : ಹಿರಿಯ ವಕೀಲ ವೈಜನಾಥ ಎಸ್ ಝಳಕಿ

ಕಲಬುರಗಿ; ಸಂವಿಧಾನವನ್ನು ರಕ್ಷಿಸಲು ಮತ್ತು ಜನರಲ್ಲಿ ಸಂವಿಧಾನದ ಮೇಲಿನ ನಂಬಿಕೆಯನ್ನು ಬಲಪಡಿಸಲು ಜಾಗೃತ ಶಕ್ತಿಯಾಗಿ ಕಾರ್ಯನಿರ್ವಹಿಸುವ ಗುರುತರವಾದ ಜವಾಬ್ದಾರಿಯನ್ನು ದೇಶದ…

4 hours ago