ಯಾದಗಿರಿ: ತಾಲ್ಲೂಕಿನ ಚಾಮನಳ್ಳಿ ಗ್ರಾಮದ ಮೂಲಭೂತ ಸಮಸ್ಯೆಗಳು ಪರಿಹರಿಸದ ಕ್ರಮ ಖಂಡಿಸಿ ಕರ್ನಾಟಕ ಪ್ರಾಂತ ರೈತ ಸಂಘ ಜಿಲ್ಲಾ ಸಮಿತಿ ವತಿಯಿಂದ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಲಾಯಿತು.
ಚಂಡ್ರಕಿಗೆ ಗ್ರಾಮವಾಸ್ತವ್ಯಕ್ಕೆ ತೆರಳುವ ಮೊದಲು ಪ್ರವಾಸಿ ಮಂದಿರದ ಹೊರಗಡೆ ಘೆರಾವ್ ಮಾಡಿದ ಕೆ.ಪಿ.ಆರ್.ಎಸ್. ಚಾಮನಳ್ಳಿ ಗ್ರಾಮ ಘಟಕ ಅಧ್ಯಕ್ಷ ಮುದುಕಪ್ಪ ಚಾಮನಳ್ಳಿ ಹಾಗೂ ಕಾರ್ಯಕರ್ತರು ಗ್ರಾಮದ ಮೂಲಭೂತ ಸೌಕರ್ಯ ಒದಗಿಸುವಲ್ಲಿ ನಿರಂತರ ನಿರ್ಲಕ್ಷ್ಯ ತೋರುತ್ತಿರುವುದನ್ನು ಖಂಡಿಸಿ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿದರು.
ಈ ಸಂದರ್ಭದಲ್ಲಿ ಮುಖ್ಯಮಂತ್ರಿ ಕುಮಾರಸ್ವಾಮಿಗೆ ಗ್ರಾಮದ ಸಮಸ್ಯೆ ವಿವರಿಸಿದ ಮುದುಕಪ್ಪ, ಯಾದಗಿರಿ ತಾಲ್ಲೂಕಿನ ಕುಗ್ರಾಮ ಚಾಮನಳ್ಳಿಯಲ್ಲಿ ಕನಿಷ್ಟ ಶುದ್ಧ ಕುಡಿವ ನೀರು ಇಲ್ಲ. ಆರೋಗ್ಯ ಪರಿಹಾರವಿಲ್ಲ ಯಾವುದೇ ಸೌಲಭ್ಯ ಇಲ್ಲದ ಗ್ರಾಮದಲ್ಲಿ ಮೂಲಭೂತ ಸಮಸ್ಯೆಗಳು ನೂರಾರು ಇದ್ದು ಇವುಗಳನ್ನು ಪರಿಹರಿಸುವಂತೆ ಹತ್ತು ಹಲವು ಬಾರಿ ಮನವಿ ಆಗ್ರಹ ಒತ್ತಾಯ ಮಾಡಿದರೂ ನಮ್ಮ ಸಮಸ್ಯೆ ಪರಿಹಾರ ಕಂಡಿಲ್ಲ ಈ ನಿರ್ಲಕ್ಷ್ಯದ ಕ್ರಮ ಖಂಡಿಸಿ ಮನವಿ ಸಲ್ಲಿಸುತ್ತಿದ್ದು ತಕ್ಷಣ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದರು.
ಈ ಸಂದರ್ಭದಲ್ಲಿ ದೇವು ಹತ್ತಿಕುಣಿ, ಆಂಜಿನೇಯ, ರಮೇಶ ಇನ್ನಿತರರು ಇದ್ದರು. ಮನವಿ ಸ್ವೀಕರಿಸಿದ ಮುಖ್ಯಮಂತ್ರಿ ಕುಮಾರಸ್ವಾಮಿ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದರು.
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…