ಶಹಾಬಾದ: ಕೊರೊನಾ ವೈರಸ್ ವ್ಯಾಪಕವಾಗಿ ಹರಡುತ್ತಿರುವುದರಿಂದ ಅದನ್ನು ತಡೆಗಟ್ಟುವ ನಿಟ್ಟಿನಲ್ಲಿ ಜಿಲ್ಲಾಧಿಕಾರಿಗಳು ಹಾಗೂ ತಹಸೀಲ್ದಾರ ಸುರೇಶ ವರ್ಮಾ ಅವರು ಕೈಗೊಂಡ ನಿರ್ಧಾರಕ್ಕೆ ಬದ್ಧರಾಗಿ, ಎಪ್ರಿಲ್ 13, 14, 15 ರಂದು ನಡೆಯಬೇಕಾದ ರಮಣಾದೇವಿ ಭವಾನಿ ಜಾತ್ರಾ ಮಹೋತ್ಸವವನ್ನು ರದ್ದುಪಡಿಸಲಾಗಿದೆ ಎಂದು ಸಾರ್ವಜನಿಕರಲ್ಲಿ ತಿಳಿಯಬಯಸುತ್ತೆನೆ ಎಂದು ದೇವಸ್ಥಾನದ ಟ್ರಸ್ಟ್ ಅಧ್ಯಕ್ಷ ಕಿಶನ್ ನಾಯಕ ಮತ್ತು ಪ್ರಧಾನ ಕಾರ್ಯದರ್ಶಿ ಸುರೇಶ.ಎಮ್.ರಾಠೋಡ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಈಗಾಗಲೇ ಟ್ರಸ್ಟ್‍ನ ಸದಸ್ಯರೊಂದಿಗೆ ಸಭೆ ನಡೆಸಲಾಗಿದ್ದು, ಸರ್ಕಾರ ಹೊರಡಿಸಿದ ಕೋವಿಡ್-19ನ ಮಾರ್ಗಸೂಚಿಗಳನ್ನು ಪಾಲನೆ ಮಾಡಬೇಕಾಗಿರುವುದು ನಮ್ಮ ಕರ್ತವ್ಯ.ಅಲ್ಲದೇ ಸಮಾಜದ ಸ್ವಾಸ್ಥ್ಯ ಕಾಪಾಡುವುದು ನಮ್ಮೆಲ್ಲರ ಜವಾಬ್ದಾರಿ.ಇದನ್ನು ಗಮನದಲ್ಲಿಟ್ಟಕೊಂಡು ಜಾತ್ರೆಯ ಎಲ್ಲಾ ಕಾರ್ಯಕ್ರಮಗಳನ್ನು ರದ್ದುಪಡಿಸಲಾಗಿದೆ. ಸಾರ್ವಜನಿಕರು ಭಕ್ತಾಧಿಗಳು ದೇವಸ್ಥಾನಕ್ಕೆ ಬರಕೂಡದು ಎಂದು ಮನವಿ ಮಾಡಿಕೊಳ್ಳುತ್ತೆವೆ.ಅಲ್ಲದೇ ಭಕ್ತಾಧಿಗಳು ಸಹಕರಿಸಬೇಕೆಂದು ಮನವಿ ಮಾಡಿದ್ದಾರೆ.
ವಾಡಿ (ಕಲಬುರಗಿ): ಪಟ್ಟಣದ ಡಾ.ಬಿ.ಆರ್.ಅಂಬೇಡ್ಕರ್ ಅವರ ವೃತ್ತದಲ್ಲಿರುವ ಬಾಬಾಸಾಹೇಬರ ಪುತ್ಥಳಿಗೆ ಮಾಲಾರ್ಪಣೆ ಮಾಡಿ ಸಂವಿಧಾನ ಪೂರ್ವ ಪೀಠಿಕೆ ಓದುವ ಮೂಲಕ…
ಕಲಬುರಗಿ: ಕಾಂಗ್ರೆಸ್ ಪಕ್ಷದ ಅಂಗ ಸಂಖ್ಯೆ ಸೇವಾದಳ ಯಂಗ್ ಬ್ರಿಗೇಡ್ ಸದಸ್ಯತ್ವ ಅಭಿಯಾನ ನ.20ರಿಂದ ರಾಜ್ಯವ್ಯಾಪಿ ಆರಂಭ ಮಾಡಲಾಗಿದ್ದು, ಆಸಕ್ತರು…
ಕಲಬುರಗಿ: ಜೀವನದಲ್ಲಿ ಹತ್ತನೇ ಮತ್ತು ಪಿಯುಸಿ ಬಹಳ ಮಹತ್ವದ ಘಟ್ಟಗಳು. ಇವೆರಡು ನಮ್ಮ ಭವಿಷ್ಯವನ್ನು ನಿರ್ಧರಿಸುತ್ತವೆ. ವಿದ್ಯಾರ್ಥಿಗಳು ಅಚಲವಾದ ಆತ್ಮವಿಶ್ವಾಸದಿಂದ…
ಸೇಡಂ : ತಮ್ಮ ಬೌದ್ಧಿಕ ವಿಕಾಸದಲ್ಲಿಯೇ ಮಹಿಳೆಯರ ಅಸ್ತಿತ್ವವಿದೆ ಎಂದು ಕೇಂದ್ರ ಸಾಹಿತ್ಯ ಅಕಾಡೆಮಿ ಸದಸ್ಯ ಡಾ.ಬಸವರಾಜ ಸಾದರ ಹೇಳಿದರು.…
ಕಲಬುರಗಿ: ಅಫಜಲಪುರ ತಾಲೂಕಿನ ಸೊನ್ನ ಗ್ರಾಮದ ನಿವಾಸಿ ಆನಂದಪ್ಪ ಶರಣಪ್ಪ ಉಮ್ಮನಗೋಳ್(೮೦) ಅವರು ಸೋಮವಾರ ಬೆಳಗ್ಗೆ ವಯೋಸಹಜವಾಗಿ ನಿಧನರಾದರು. ಮೃತರು…
ಕಲಬುರಗಿ: ಸಂಘಸಂಸ್ಥೆಗಳು ಸಾದಕರನ್ನು ಗುರುತಿಸಿ ಪ್ರಶಸ್ತಿ ಪುರಸ್ಕಾರಗಳನ್ನು ನೀಡುವ ಮುಖಾಂತರಾ ಅವರ ಜವಾಬ್ದಾರಿ ಹೆಚ್ಚಿಸುವುದರಜೋತೆಯಲ್ಲಿ ಸಾಮಾಜಿಕ ಕೆಲಸಗಳನ್ನು ಮಾಡುತ್ತಿರುವುದು ಸಮಾಜಕ್ಕೆ…