ಕಲಬುರಗಿ: ಪ್ರತಿ ಕ್ವಿಂಟಾಲ್ ರಸಗೊಬ್ಬರ ದರ ಹೆಚ್ಚಳಗೊಂಡಿರುವ ಹಿನ್ನೆಲೆಯಲ್ಲಿ ಕೇಂದ್ರ ರಾಸಾಯನಿಕ ಮತ್ತು ರಸಗೊಬ್ಬರ ಖಾತೆ ಸಚಿವ ಡಿ.ವಿ.ಸದಾನಂದಗೌಡರ ನೇತೃತ್ವದಲ್ಲಿ ಸೋಮವಾರ ಸಭೆ ನಡೆಯಲಿದ್ದು, ಅದರಲ್ಲಿ ಪರಿಹಾರ ದೊರಕುವ ವಿಶ್ವಾಸವಿದೆ ಎಂದು ಕೃಷಿ ಸಚಿವ ಬಿ.ಸಿ. ಪಾಟೀಲ್ ಹೇಳಿದರು.
ರವಿವಾರ ಕಲಬುರಗಿ ನಗರದ ಗ್ರ್ಯಾಂಡ್ ಹೋಟೆಲ್‌ನಲ್ಲಿ ಕರೆಯಲಾದ ಸಚಿವರ ಜಂಟಿ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿದರು.
ರಸಗೊಬ್ಬರ ಉತ್ಪಾದನೆಗೆ ಬೇಕಾಗುವ ಫಾಸ್ಪರಿಕ್ ಆಸಿಡ್ ದರ ಪ್ರತಿ ಬ್ಯಾರೆಲ್‌ಗೆ ೪೦೦ ದಿಂದ ೭೦೦ ಡಾಲರ್‌ಗೆ ಹೆಚ್ಚಳ ಮತ್ತು ಆಫ್ರಿಕಾ ಸೇರಿದಂತೆ ಪಾಶ್ಚಿಮಾತ್ಯ ದೇಶದಿಂದ ಅಮದಾಗುವ ಕಚ್ಚಾವಸ್ತುಗಳ ದರ ದಿಢೀರ ಹೆಚ್ಚಳಗೊಂಡ ಕಾರಣ ದೇಶದಲ್ಲಿ ರಸಗೊಬ್ಬರ ದರ ಹೆಚ್ಚಳವಾಗಿದೆ. ಡಿ.ವಿ.ಸದಾನಂದ ನೇತೃತ್ವದಲ್ಲಿ ನಡೆಯುವ ಸಭೆಯಲ್ಲಿ ಇದಕ್ಕೆ ಪರಿಹಾರ ನೀಡುವ ಭರವಸೆ ಇದೆ ಎಂದರು.
ಕಲಬುರಗಿ ಜಿಲ್ಲೆಯಲ್ಲಿ ೨೦೨೧-೨೨ನೇ ಸಾಲಿನ ಮುಂಗಾರು ಹಂಗಾಮಿಗೆ ಒಟ್ಟು ೭.೫೫ ಲಕ್ಷ ಹೆಕ್ಟರ್ ಪ್ರದೇಶದಲ್ಲಿ ಪ್ರಮುಖ ಬೆಳೆಗಳಾದ ತೊಗರಿ, ಹತ್ತೀ, ಹೆಸರು, ಉದ್ದು ಸೇರಿದಂತೆ ಇತರೆ ಬೆಳೆಗಳ ಬಿತ್ತನೆಯ ಗುರಿ ಹೊಂದಿದೆ. ಇದಕ್ಕಾಗಿ ೪೬೫೫೯ ಕ್ವಿಂಟಾಲ್ ಬೀಜದ ಬೇಡಿಕೆಯಿದ್ದು, ದಾಸ್ತಾನು ಪ್ರಕ್ರಿಯೆ ನಡೆಯುತ್ತಿದೆ. ಇದರ ಜೊತೆಗೆ ೧,೧೯,೩೯೫ ಮೆಟ್ರಿಕ್ ಟನ್ ರಸಗೊಬ್ಬರದ ಬೇಡಿಕೆಯಿದ್ದು, ಇದರ ದಾಸ್ತಾನಿಗೂ ಕ್ರಮ ವಹಿಸಲಾಗಿದೆ ಎಂದು ಸಚಿವ ಬಿ.ಸಿ.ಪಾಟೀಲ ತಿಳಿಸಿದರು.
ಸೇಡಂ: ಸರಕಾರಿ ಜಿಪಿಎಸ್ ಶಾಲೆಯಲ್ಲಿ ಸ್ನೇಹ ಸಮ್ಮಿಲನ-ಗುರುವಂದನಾ
ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯಡಿ ಜಿಲ್ಲೆಯಲ್ಲಿ ೨.೮೧ ಲಕ್ಷ ರೈತರು ನೋಂದಣಿಯಾಗಿದ್ದು, ೨೦೧೯-೨೦ನೇ ಸಾಲಿನಿಂದ ಇಲ್ಲಿಯವರೆಗೆ ೨.೬೨ ಲಕ್ಷ ರೈತರಿಗೆ ೪೫೭.೮೯ ಕೋಟಿ ರೂ. ಆರ್ಥಿಕ ನೆರವು ನೀಡಲಾಗಿದೆ.
ಪ್ರಧಾನಮಂತ್ರಿ ಫಸಲ್ ಭೀಮಾ ಯೋಜನೆಯಡಿ ೨೦೨೦-೨೧ನೇ ಸಾಲಿನ ಮುಂಗಾರು ಮತ್ತು ಹಿಂಗಾರು ಹಂಗಾಮಿನಲ್ಲಿ ೩೮,೬೫೩ ರೈತೆರು ನೋಂದಣಿಯಾಗಿದ್ದಾರೆ. ಸ್ಥಳೀಯ ವಿಪತ್ತಿನಡಿ ೧೩,೯೦೯ ರೈತರು ವಿಮಾ ಪರಿಹಾರಕ್ಕೆ ಕೋರಿದ್ದು, ಇಲ್ಲಿಯವರೆಗೆ ೬,೨೪೮ ರೈತರಿಗೆ ೬.೮೯ ಕೋಟಿ ರೂ. ಪರಿಹಾರ ನೀಡಿದೆ. ಉಳಿದ ಅರ್ಜಿಗಳ ವಿಲೇವಾರಿ ಪ್ರಕ್ರಿಯೆ ಸಹ ಜಾರಿಯಲ್ಲಿದೆ ಎಂದರು.
ನೀರಿನ ಸದ್ಬಳಕೆಯನ್ನು ಪ್ರೋತ್ಸಾಹಿಸುವ ನಿಟ್ಟಿನಲಿ ಕೇಂದ್ರ ಮತ್ತು ರಾಜ್ಯ ಸರ್ಕಾರದ ಜಂಟಿ ಪ್ರಾಯೋಜಕತ್ವದಲ್ಲಿ ಶೇ.೯೦ ರ? ರಿಯಾಯಿತಿಯೊಂದಿಗೆ ಪ್ರಧಾನ ಮಂತ್ರಿ ಕೃಷಿ ಸಿಂಚಾಯಿ ಯೋಜನೆ ಅನುಷ್ಠಾನಕ್ಕಾಗಿ ೨೦೨೦-೨೧ನೇ ಸಾಲಿನಲ್ಲಿ ಜಿಲ್ಲೆಯಲ್ಲಿ ೨೧.೮೭ ಕೋಟಿ ಕ್ರಿಯಾ ಯೋಜನೆಗೆ ಅನುಮೋದನೆ ನೀಡಿ ಮಾರ್ಚ್ ಅಂತ್ಯದ ವರೆಗೆ ೨೧.೯ ಕೋಟಿ ವೆಚ್ಚ ಮಾಡಿ ೧೦,೧೭೫ ಹೆಕ್ಟೇರ್ ಪ್ರದೇಶದಲ್ಲಿ ಹನಿ ನೀರಾವರಿ ಮತ್ತು ತುಂತುರು ನೀರಾವರಿ ಘಟಕಗಳನ್ನು ಅಳವಡಿಸಿದೆ ಎಂದರು.
ದೃಷ್ಟಿಕೋನ ಬದಲಾವಣೆ ಮಾಡುವುದೇ ಶಿಕ್ಷಣದ ಉದ್ದೇಶ: ಬಡಶೇಷಿ
ಬಿಸಿಯೂಟದಲ್ಲಿ ಸಿರಿಧಾನ್ಯ ಸೇರ್ಪಡೆ: ಶಾಲಾ ಮಕ್ಕಳಿಗೆ ನೀಡಲಾಗುವ ಮಧ್ಯಾಹ್ನದ ಬಿಸಿ ಊಟದಲ್ಲಿ ಸಿರಿಧಾನ್ಯಗಳಾದ ನವಣೆ, ರಾಗಿ, ತೊಗರಿ ನೀಡಲು ಸಚಿವ ಸಂಪುಟ ಉಪ ಸಮಿತಿಯಲ್ಲಿ ಚರ್ಚೆ ನಡೆದಿದ್ದು, ಮುಂದಿನ ದಿನದಲ್ಲಿ ಸೂಕ್ತ ನಿರ್ಧಾರ ಕೈಗೊಳ್ಳಲಾಗುವುದು ಎಂದು ಸಚಿವ ಬಿ.ಸಿ.ಪಾಟೀಲ್ ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿದರು.
ಪತ್ರಿಕಾಗೋಷ್ಠಿಯಲ್ಲಿ ಸಹಕಾರ ಸಚಿವ ಎಸ್.ಟಿ.ಸೋಮಶೇಖರ, ಕಾರ್ಮಿಕ ಸಚಿವ ಶಿವರಾಂ ಹೆಬ್ಬಾರ್, ಮೂಲಸೌಕರ್ಯ, ಹಜ್ ಮತ್ತು ವಕ್ಫ್ ಸಚಿವ ಆನಂದ್ ಸಿಂಗ್ ಹಾಗೂ ಗಣಿ ಮತ್ತು ಭೂವಿಜ್ಞಾನ ಸಚಿವ ಮುರುಗೇಶ್ ಅರ್. ನಿರಾಣಿ ಇದ್ದರು.
ಕಲಬುರಗಿ: ಕಾಂಗ್ರೆಸ್ ಪಕ್ಷದ ಅಂಗ ಸಂಖ್ಯೆ ಸೇವಾದಳ ಯಂಗ್ ಬ್ರಿಗೇಡ್ ಸದಸ್ಯತ್ವ ಅಭಿಯಾನ ನ.20ರಿಂದ ರಾಜ್ಯವ್ಯಾಪಿ ಆರಂಭ ಮಾಡಲಾಗಿದ್ದು, ಆಸಕ್ತರು…
ಕಲಬುರಗಿ: ಜೀವನದಲ್ಲಿ ಹತ್ತನೇ ಮತ್ತು ಪಿಯುಸಿ ಬಹಳ ಮಹತ್ವದ ಘಟ್ಟಗಳು. ಇವೆರಡು ನಮ್ಮ ಭವಿಷ್ಯವನ್ನು ನಿರ್ಧರಿಸುತ್ತವೆ. ವಿದ್ಯಾರ್ಥಿಗಳು ಅಚಲವಾದ ಆತ್ಮವಿಶ್ವಾಸದಿಂದ…
ಸೇಡಂ : ತಮ್ಮ ಬೌದ್ಧಿಕ ವಿಕಾಸದಲ್ಲಿಯೇ ಮಹಿಳೆಯರ ಅಸ್ತಿತ್ವವಿದೆ ಎಂದು ಕೇಂದ್ರ ಸಾಹಿತ್ಯ ಅಕಾಡೆಮಿ ಸದಸ್ಯ ಡಾ.ಬಸವರಾಜ ಸಾದರ ಹೇಳಿದರು.…
ಕಲಬುರಗಿ: ಅಫಜಲಪುರ ತಾಲೂಕಿನ ಸೊನ್ನ ಗ್ರಾಮದ ನಿವಾಸಿ ಆನಂದಪ್ಪ ಶರಣಪ್ಪ ಉಮ್ಮನಗೋಳ್(೮೦) ಅವರು ಸೋಮವಾರ ಬೆಳಗ್ಗೆ ವಯೋಸಹಜವಾಗಿ ನಿಧನರಾದರು. ಮೃತರು…
ಕಲಬುರಗಿ: ಸಂಘಸಂಸ್ಥೆಗಳು ಸಾದಕರನ್ನು ಗುರುತಿಸಿ ಪ್ರಶಸ್ತಿ ಪುರಸ್ಕಾರಗಳನ್ನು ನೀಡುವ ಮುಖಾಂತರಾ ಅವರ ಜವಾಬ್ದಾರಿ ಹೆಚ್ಚಿಸುವುದರಜೋತೆಯಲ್ಲಿ ಸಾಮಾಜಿಕ ಕೆಲಸಗಳನ್ನು ಮಾಡುತ್ತಿರುವುದು ಸಮಾಜಕ್ಕೆ…
ಕಲಬುರಗಿ; ಹೈದ್ರಾಬಾದ್- ಕರ್ನಾಟಕ ಶಿಕ್ಷಣ ಸಂಸ್ಥೆಯ PDACE ಸಭಾಂಗಣದಲ್ಲಿ ನಡೆದ ಕಲ್ಯಾಣ ಕರ್ನಾಟಕ startup conclave ಇಂದು ದಕ್ಷಣ ಶಾಸಕ…