30 ಲಕ್ಷ ರೈತರಿಗೆ ಸಾಲ ನೀಡುವ ಗುರಿ: ಸಚಿವ ಸೋಮಶೇಖರ

0
33

ಕಲಬುರಗಿ: ವಿವಿಧ ಕಾರಣದಿಂದ ನಿಷ್ಕ್ರೀಯ ಹಂತದಲ್ಲಿದ್ದ ಕಲಬುರಗಿ ಡಿ.ಸಿ.ಸಿ ಬ್ಯಾಂಕಿಗೆ ರಾಜ್ಯ ಸರ್ಕಾರವು ೧೦ ಕೋಟಿ ರೂ. ಶೇರು ಹಣ ನೀಡಿದ್ದು, ಬ್ಯಾಂಕ್ ಪುನಶ್ಚೇತನಕ್ಕೆ ರಾಜ್ಯ ಸರ್ಕಾರದಿಂದ ಎಲ್ಲಾ ರೀತಿಯ ಸಹಕಾರ ನೀಡಲಾಗುವುದು ಎಂದು ಸಹಕಾರ ಸಚಿವ ಎಸ್.ಟಿ.ಸೋಮಶೇಖರ್ ಹೇಳಿದರು.

ರವಿವಾರ ಕಲಬುರಗಿ ನಗರದ ಗ್ರ್ಯಾಂಡ್ ಹೋಟೆಲ್‌ನಲ್ಲಿ ಕರೆಯಲಾದ ಸಚಿವರ ಜಂಟಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ಡಿ.ಸಿ.ಸಿ. ಬ್ಯಾಂಕಿಗೆ ಅಪೆಕ್ಸ್ ಬ್ಯಾಂಕ್ ಕೂಡ ೨೦೦ ಕೋಟಿ ರೂ. ಸಾಲ ನೀಡಲು ಒಪ್ಪಿಗೆ ಸೂಚಿಸಿದೆ ಎಂದರು.

Contact Your\'s Advertisement; 9902492681

ಕಲಬುರಗಿ ಡಿ.ಸಿ.ಸಿ ಬ್ಯಾಂಕಿನ ಪ್ರಸ್ತುತ ಆಡಳಿತ ಮಂಡಳಿ ಉತ್ತಮವಾಗಿ ಕಾರ್ಯನಿರ್ವಹಿಸುತ್ತಿದ್ದು ಇದರ ಪರಿಣಾಮ ೧೮೭ ಕೋಟಿ ರೂ. ಸಾಲ ವಸೂಲಾತಿಯಾಗಿದೆ. ಕಲಬುರಗಿ ಸೇರಿದಂತೆ ರಾಜ್ಯದ ೨೧ ಡಿ.ಸಿ.ಸಿ. ಬ್ಯಾಂಕ್ ಗಳನ್ನು ಪುನಶ್ಚೇತನಕ್ಕೆ ಸರ್ಕಾರದ ಬದ್ಧವಿದೆ ಎಂದರು.

ರಸಗೊಬ್ಬರ ದರ ಹೆಚ್ಚಳ ಹಿನ್ನೆಲೆ: ಕೇಂದ್ರ ರಾಸಾಯನಿಕ ಸಚಿವರ ನೇತೃತ್ವದಲ್ಲಿ ಸಭೆ: ಬಿ.ಸಿ.ಪಾಟೀಲ

ರಾಜ್ಯ ಸರ್ಕಾರವೇ ಡಿ.ಸಿ.ಸಿ ಬ್ಯಾಂಕಿಗೆ ೩೦೦ ಕೋಟಿ ರೂ. ಹೆಚ್ಚುವರಿ ಸಾಲ ನೀಡುವ ಮೂಲಕ ಬ್ಯಾಂಕಿಗೆ ಆರ್ಥಿಕ ಬಲ ನೀಡಬೇಕು ಎಂಬ ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿದ ಸಚಿವರು ಬ್ಯಾಂಕ್ ಬೇಡಿಕೆ ಅನುಗುಣವಾಗಿ ಹಂತ ಹಂತವಾಗಿ ರಾಜ್ಯ ಸರ್ಕಾರದಿಂದ ಹಣ ನೀಡಲಾಗುವುದು ಎಂದರು.

೩೦ ಲಕ್ಷ ರೈತರಿಗೆ ಸಾಲ ನೀಡುವ ಗುರಿ: ಪ್ರಸಕ್ತ ಮುಂಗಾರು ಹಂಗಾಮಿಗೆ ರಾಜ್ಯದ ೩೦ ಲಕ್ಷ ರೈತರಿಗೆ ಸುಮಾರು ೨೦ ಸಾವಿರ ಕೋಟಿ ರೂ. ಡಿ.ಸಿ.ಸಿ. ಬ್ಯಾಂಕುಗಳಿಂದ ಸಾಲ ನೀಡುವ ಗುರಿ ಹೊಂದಿದೆ ಎಂದು ಸಹಕಾರ ಸಚಿವರು ತಿಳಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಕೃಷಿ ಸಚಿವ ಬಿ.ಸಿ.ಪಾಟೀಲ, ಕಾರ್ಮಿಕ ಸಚಿವ ಶಿವರಾಂ ಹೆಬ್ಬಾರ್, ಮೂಲಸೌಕರ್ಯ, ಹಜ್ ಮತ್ತು ವಕ್ಫ್ ಸಚಿವ ಆನಂದ್ ಸಿಂಗ್ ಹಾಗೂ ಗಣಿ ಮತ್ತು ಭೂವಿಜ್ಞಾನ ಸಚಿವ ಮುರುಗೇಶ್ ಅರ್. ನಿರಾಣಿ ಇದ್ದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here