ಬಿಸಿ ಬಿಸಿ ಸುದ್ದಿ

ಮುಷ್ಕರ ಕೈಬಿಟ್ಟು ಕೆಲಸಕ್ಕೆ ಬನ್ನಿ: ಸಾರಿಗೆ ನೌಕರರಲ್ಲಿ ಸಚಿವ ಶಿವರಾಮ ಹೆಬ್ಬಾರ್ ಮನವಿ

ಕಲಬುರಗಿ: ರಾಜ್ಯ ರಸ್ತೆ ಸಾರಿಗೆ ನೌಕರರು ನಡೆಸುತ್ತಿರುವ ಅನಧಿಕೃತ ಮು?ರವನ್ನು ಕೈಬಿಟ್ಟು ಕೆಲಸಕ್ಕೆ ವಾಪಸ್ ಬರಬೇಕು ಎಂದು ಕಾರ್ಮಿಕ ಸಚಿವ ಶಿವರಾಮ ಹೆಬ್ಬಾರ್ ಅವರು ಸಾರಿಗೆ ನೌಕರರಲ್ಲಿ ಮನವಿ ಮಾಡಿದ್ದಾರೆ.

ರವಿವಾರ ಇಲ್ಲಿನ ಗ್ರಾಂಡ್ ಹೋಟೆಲ್‌ನಲ್ಲಿ ಕರೆಯಲಾದ ಜಂಟಿ ಸಚಿವರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಸಚಿವರು ಕಾರ್ಮಿಕ ಆಯುಕ್ತರಲ್ಲಿ ಮು?ರಕ್ಕೆ ಮಾನ್ಯತೆ ನೀಡುವಂತೆ ಕಾರ್ಮಿಕ ಸಂಘಟನೆ ಮನವಿ ಸಲ್ಲಿಸಿತು. ಈ ಕುರಿತು ಕಾರ್ಮಿಕ ಸಂಘಟನೆಯ ಬೈಲಾವನ್ನು ಪರಿಶೀಲಿಸಲಾಗಿ, ಇದು ಅನಧಿಕೃತ ಮು?ರವಾಗಿದೆ ಎಂದು ಕಾರ್ಮಿಕ ಇಲಾಖೆಯು ಈಗಾಗಲೇ ವ್ಯಾಜ್ಯ ಇತ್ಯರ್ಥಪಡಿಸಿದೆ ಎಂದರು.

ಸಾರಿಗೆ ನೌಕರರ ೯ ಪ್ರಮುಖ ಬೇಡಿಕೆಯಲ್ಲಿ ೮ ಬೇಡಿಕೆಗಳನ್ನು ಈಗಾಗಲೇ ಸರ್ಕಾರ ಈಡೇರಿಸಿದೆ. ವೇತನ ಹೆಚ್ಚಳ ಕುರಿತಂತೆ ಚುನಾವಣೆ ನೀತಿ ಸಂಹಿತೆ ಅಡ್ಡ ಇರುವುದರಿಂದ ಪ್ರಸ್ತುತ ಅದು ಸಾಧ್ಯವಿಲ್ಲ. ಸಾರಿಗೆ ನೌಕರರು ೬ನೇ ವೇತನ ಜಾರಿಗೆ ಮತ್ತು ಸರ್ಕಾರಿ ನೌಕರರನ್ನಾಗಿ ಪರಿಗಣನೆಗೆ ಪಟ್ಟು ಹಿಡಿದಿದ್ದು, ಇದು ಕಾರ್ಯಸಾಧುವಲ್ಲ ಎಂದು ಮುಖ್ಯಮಂತ್ರಿಗಳು ಮತ್ತು ಸಾರಿಗೆ ಸಚಿವರು ಈಗಾಗಲೆ ಸ್ಪಷ್ಟಪಡಿಸಿದ್ದಾರೆ. ಸಾರಿಗೆ ನಿಗಮ ಹೊರತುಪಡಿಸಿ ರಾಜ್ಯದಲ್ಲಿ ಇದೇ ಮಾದರಿಯ ಬಹಳಷ್ಟು ನಿಗಮಗಳಿವೆ. ಎಲ್ಲರನ್ನು ಸರಕಾರಿ ನೌಕರರನಾಗಿ ಪರಿಗಣಿಸುವುದು ಅಸಾಧ್ಯ ಎಂದ ಶಿವರಾಮ ಹೆಬ್ಬಾರ್ ಅವರು ನೌಕರರ ಮುಷ್ಕರದಿಂದ ಸಾರಿಗೆ ಸಂಸ್ಥೆಗೆ ೩೮೦೦ ಕೋಟಿ ರೂ. ನಷ್ಠವಿದೆ ಎಂದರು.

ರೈತರು ಆಧುನಿಕ ಕೃಷಿ ಪದ್ಧತಿಯನ್ನು ಅಳವಡಿಸಕೊಳ್ಳಬೇಕು: ಪ್ರೋ: ಶ್ಯಾಮರಾವ್ ಕುಲಕರ್ಣಿ

ಸಿಮೆಂಟ್ ಕಾರ್ಖಾನೆಯಲ್ಲಿ ಕಾರ್ಮಿಕರಿಗೆ ಅನಗತ್ಯ ತೊಂದರೆ ನೀಡಲಾಗುತ್ತಿದೆ ಎಂಬ ದೂರುಗಳು ಬಂದಿದ್ದು, ಈ ಸಂಬಂಧ ಈಗಾಗಲೇ ಅಧಿಕಾರಿಗಳಿಂದ ವರದಿ ತರಿಸಿಕೊಂಡಿದ್ದೇನೆ. ಕಾರ್ಮಿಕ ಸಂಘಟನೆಗಳೊಂದಿಗೆ ಮಾತನಾಡಿ ಸಮಸ್ಯೆ ಬಗೆಹರಿಸಲಾಗುವುದು. ಯಾವುದೇ ರೀತಿಯಲ್ಲಿ ಕಾರ್ಮಿಕರಿಗೆ ಅನ್ಯಾಯವಾಗದಂತೆ ನೋಡಿಕೊಳ್ಳಲಾಗುವುದು. ಕಾರ್ಮಿಕರ ಹಿತ ಕಾಯುವುದೇ ಇಲಾಖೆಯ ಪ್ರಥಮ ಆದ್ಯತೆಯಾಗಿದ್ದು, ಉದ್ದಿಮೆಯೂ ಬೆಳೆಯಬೇಕಿದೆ. ಒಟ್ಟಿನಲ್ಲಿ ಸಮತೋಲನದಿಂದ ಸಮಸ್ಯೆಗಳನ್ನು ಪರಿಹರಿಸಲಾಗುವುದು ಎಂದರು.

ಕಳೆದ ಒಂದು ವ?ದ ಅವಧಿಯಲ್ಲಿ ರಾಜ್ಯದಲ್ಲಿ ಕಾರ್ಮಿಕ ಕ್ಷೇತ್ರಗಳಲ್ಲಿಯೇ ೭ ಸುಧಾರಣೆಗಳನ್ನು ತರಲಾಗಿದೆ. ಇಡೀ ದೇಶದಲ್ಲಿ ಮಾದರಿಯಾಗಿ ೨೪ ಗಂಟೆಗಳ ಕಾಲ ಮಹಿಳೆಯರು ಸಹ ಕೆಲಸ ನಿರ್ವಹಿಸಲು ಅವಕಾಶ ನೀಡಲಾಗಿದೆ ಎಂದರು.

ಪತ್ರಿಕಾಗೋಷ್ಠಿಯಲ್ಲಿ ಸಹಕಾರ ಸಚಿವ ಎಸ್.ಟಿ.ಸೋಮಶೇಖರ, ಕೃಷಿ ಸಚಿವ ಬಿ.ಸಿ.ಪಾಟೀಲ, ಮೂಲಸೌಕರ್ಯ, ಹಜ್ ಮತ್ತು ವಕ್ಫ್ ಸಚಿವ ಆನಂದ್ ಸಿಂಗ್ ಹಾಗೂ ಗಣಿ ಮತ್ತು ಭೂವಿಜ್ಞಾನ ಸಚಿವ ಮುರುಗೇಶ್ ಅರ್. ನಿರಾಣಿ ಇದ್ದರು.

emedialine

Recent Posts

ಬೆಂಗಳೂರು: ಸೇವಾದಳ ಯಂಗ್ ಬ್ರಿಗೇಡ್‌ನಿಂದ ಸದಸ್ಯತ್ವ ಅಭಿಯಾನಕ್ಕೆ ಚಾಲನೆ

ಕಲಬುರಗಿ: ಕಾಂಗ್ರೆಸ್ ಪಕ್ಷದ ಅಂಗ ಸಂಖ್ಯೆ ಸೇವಾದಳ ಯಂಗ್ ಬ್ರಿಗೇಡ್ ಸದಸ್ಯತ್ವ ಅಭಿಯಾನ ನ.20ರಿಂದ ರಾಜ್ಯವ್ಯಾಪಿ ಆರಂಭ ಮಾಡಲಾಗಿದ್ದು, ಆಸಕ್ತರು…

7 hours ago

ಆತ್ಮವಿಶ್ವಾಸವಿದ್ದರೆ ಜೀವನದಲ್ಲಿ ಏನನ್ನಾದರೂ ಸಾಧಿಸಬಹುದು : ಶಂಕರಗೌಡ

ಕಲಬುರಗಿ: ಜೀವನದಲ್ಲಿ ಹತ್ತನೇ ಮತ್ತು ಪಿಯುಸಿ ಬಹಳ ಮಹತ್ವದ ಘಟ್ಟಗಳು. ಇವೆರಡು ನಮ್ಮ ಭವಿಷ್ಯವನ್ನು ನಿರ್ಧರಿಸುತ್ತವೆ. ವಿದ್ಯಾರ್ಥಿಗಳು ಅಚಲವಾದ ಆತ್ಮವಿಶ್ವಾಸದಿಂದ…

18 hours ago

ಬೌದ್ಧಿಕ ವಿಕಾಸದಿಂದ ತನ್ನತನದ ಶೋಧ

ಸೇಡಂ : ತಮ್ಮ ಬೌದ್ಧಿಕ ವಿಕಾಸದಲ್ಲಿಯೇ ಮಹಿಳೆಯರ ಅಸ್ತಿತ್ವವಿದೆ ಎಂದು ಕೇಂದ್ರ ಸಾಹಿತ್ಯ ಅಕಾಡೆಮಿ ಸದಸ್ಯ ಡಾ.ಬಸವರಾಜ ಸಾದರ ಹೇಳಿದರು.…

18 hours ago

ನಿಧನ ವಾರ್ತೆ; ಆನಂದಪ್ಪ ಉಮ್ಮನಗೋಳ್

ಕಲಬುರಗಿ: ಅಫಜಲಪುರ ತಾಲೂಕಿನ ಸೊನ್ನ ಗ್ರಾಮದ ನಿವಾಸಿ ಆನಂದಪ್ಪ ಶರಣಪ್ಪ ಉಮ್ಮನಗೋಳ್(೮೦) ಅವರು ಸೋಮವಾರ ಬೆಳಗ್ಗೆ ವಯೋಸಹಜವಾಗಿ ನಿಧನರಾದರು. ಮೃತರು…

20 hours ago

ಸಂಘಸಂಸ್ಥೆಗಳು ಸಮಾಜಕ್ಕೆ ನೀಡಿದ ಕೋಡುಗೆ ಅಪಾರ ಪಾಳಾಶ್ರೀ

ಕಲಬುರಗಿ: ಸಂಘಸಂಸ್ಥೆಗಳು ಸಾದಕರನ್ನು ಗುರುತಿಸಿ ಪ್ರಶಸ್ತಿ ಪುರಸ್ಕಾರಗಳನ್ನು ನೀಡುವ ಮುಖಾಂತರಾ ಅವರ ಜವಾಬ್ದಾರಿ ಹೆಚ್ಚಿಸುವುದರಜೋತೆಯಲ್ಲಿ ಸಾಮಾಜಿಕ ಕೆಲಸಗಳನ್ನು ಮಾಡುತ್ತಿರುವುದು ಸಮಾಜಕ್ಕೆ…

20 hours ago

ಹೊಸ ಹೊಸ ಉದ್ಯೋಗ ಸೃಷ್ಟಿಸಲು HKE ಸಂಸ್ಥೆ ಕಾರ್ಯ ಶ್ಲಾಘನೀಯ

ಕಲಬುರಗಿ; ಹೈದ್ರಾಬಾದ್- ಕರ್ನಾಟಕ ಶಿಕ್ಷಣ ಸಂಸ್ಥೆಯ PDACE ಸಭಾಂಗಣದಲ್ಲಿ ನಡೆದ ಕಲ್ಯಾಣ ಕರ್ನಾಟಕ startup conclave ಇಂದು ದಕ್ಷಣ ಶಾಸಕ…

20 hours ago