ಕಲಬುರಗಿ: ನಗರದ ಆಳಂದ ರಸ್ತೆಯಲ್ಲಿರುವ ಕಾರ್ಮಿಕರ ಭವಿಷ್ಯ ನಿಧಿ ಇಲಾಖೆಯಲ್ಲಿ ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಅವರ 130ನೇ ಜನ್ಮ ದಿನಾಚರಣೆಯ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಕಾರ್ಯಕ್ರಮದಲ್ಲಿ ಡಾ.ಬಿ.ಆರ್. ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಸಹಾಯಕ ಭವಿಷ್ಯ ನಿಧಿ ಆಯುಕ್ತ ಸುಪ್ರತಿಕ ದಾಶ್ ಅವರು ಪುಷ್ಪಾರ್ಚನೆ ಮಾಡಿ ಗೌರವ ಸಲ್ಲಿಸಿ ಸರಳವಾಗಿ ಆಚರಿಸಲಾಯಿತು.
ಬಹುಮುಖ ವ್ಯಕ್ತಿತ್ವದ ಡಾ. ಬಾಬಾಸಾಹೇಬ್ ಅಂಬೇಡ್ಕರ್ ಅವರು ಸೌಲಭ್ಯವಂಚಿತರಿಗೆ ಮತ್ತು ಮಹಿಳೆಯರಿಗೆ ಸಮಾನ ಹಕ್ಕು ನೀಡುವ ಗುರಿಯೂ ಅವರ ಮನಸ್ಸಿನಲ್ಲಿತ್ತು. ಸಾಮಾಜಿಕ ನ್ಯಾಯದ ಹರಿಕಾರ ಡಾ. ಬಿ.ಅಂಬೇಡ್ಕರ್ ಸಾಮಾಜಿಕ ನ್ಯಾಯದ ಹರಿಕಾರ, ಅನ್ಯಾಯ, ಅಸಮಾನತೆ ಮತ್ತು ಶೋಷಣೆಯ ವಿರುದ್ಧದ ಹೋರಾಟಕ್ಕೆ ಸ್ಫೂರ್ತಿಯಾಗಿದ್ದರು.
ಶಿಕ್ಷಣ, ಸಂಘಟನೆ ಮತ್ತು ಹೋರಾಟ ಎಂಬ ಮೂರು ಮಂತ್ರಗಳನ್ನು ಶೋಷಿತ ವರ್ಗಕ್ಕೆ ನೀಡಿದ ಯುಗಪುರುಷ. ಡಾ.ಬಿ ಆರ್ ಅಂಬೇಡ್ಕರ್ ಅವರ ಜಯಂತಿಯಂದು ನಾನು ಅವರಿಗೆ ತಲೆಬಾಗುತ್ತೇನೆ. ಸಮಾಜದ ಬಡ ಮತ್ತು ಸಾಮಾನ್ಯ ವರ್ಗದ ಸೇವೆಗಾಗಿ ತಮ್ಮ ಬದುಕನ್ನು ಮುಡಿಪಾಗಿಟ್ಟ ಸಂವಿಧಾನ ಶಿಲ್ಪಿಗೆ ನನ್ನ ನಮನ ಎಂದು ಪ್ರಸ್ತಾವಿಕವಾಗಿ ಮಾತನಾಡಿದ ಅವಿನಾಶಕುಮಾರ ಸಿಂಗ್ ತಿಳಿಸಿದರು.
ಕಾರ್ಯಕ್ರಮದಲ್ಲಿ ಸಂಜಯ ಬಿರ್ಜೆ, ವಿಠ್ಠಲ, ಅವಿನಾಶಕುಮಾರ ಸಿಂಗ್, ಶಿವರಾಜ, ಕಲ್ಪನಾ ಮಧಬಾವಿ, ಬಸವರಾಜ ಹೆಳವರ, ಎಸ್ಸಿ/ಎಸ್ಟಿ ನೌಕರರ ಸಂಘದ ಕಾರ್ಯದರ್ಶಿ ಮುಖೇಶ ತುಳಸಿರಾಮ, ಮನೋಜಕುಮಾರ, ಪ್ರತಿಭಾ, ಕೇಶವರಾವ ಕುಲಕರ್ಣಿ, ಮನಿಶಾ, ಸವಿತಾ, ಪಾರ್ವತಿಭಾಯಿ, ಶಿವಶರಣಪ್ಪ ಶಿವಕೇರಿ ಮತ್ತು ಕಾರ್ಯಾಲಯದ ಇನ್ನಿತರ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.