ಜೇವರ್ಗಿ: ಭಾರತ ರತ್ನ ಸಂವಿಧಾನ ಶಿಲ್ಪಿ ಬಾಬಾಸಾಹೇಬ್ ಅಂಬೇಡ್ಕರ್ ರವರ 130 ನೇ ಜನ್ಮದಿನಾಚರಣೆ ಅಂಗವಾಗಿ ಜೇವರ್ಗಿಯ ಶಾಸಕ ಡಾ . ಅಜಯ್ ಸಿಂಗ್ ರವರು ಬಾಬಾಸಾಹೇಬ್ ಪುತ್ಥಳಿಗೆ ಮಾಲಾರ್ಪಣೆ ಮಾಡಿದರು.
ಈ ವೇಳೆಯಲ್ಲಿ ಮಾತನಾಡಿದ ಅವರು ರಾಷ್ಟ್ರಕ್ಕೆ ಮಾದರಿ ಸಂವಿಧಾನವನ್ನು ನೀಡಿದ ವಿಶ್ವಚೇತನ ಬಾಬಾಸಾಬ್ ಅಂಬೇಡ್ಕರ್ ಅವರು ಮಾದರಿಯ ನಾಯಕರಾಗಿದ್ದಾರೆ. ಇವರ ಶಿಕ್ಷಣ ಸಂಘಟನೆ ಹೋರಾಟದ ಸೂತ್ರವು ನಾವು ನಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕಾಗಿದೆ ಎಂದು ಕರೆ ನೀಡಿದರು.
ನಂತರ ತಾಲೂಕು ಕಾರ್ಯಾಲಯದಲ್ಲಿ ಸರಕಾರದ ವತಿಯಿಂದ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಬಾಬಾಸಾಹೇಬ್ ಅಂಬೇಡ್ಕರ್ ಭಾವ ಚಿತ್ರಕ್ಕೆ ಪೂಜೆ ನೆರವೇರಿಸಿದರು.
ದಲಿತ ಸಮಾಜದ ಮುಖಂಡರಾದ ಚಂದ್ರಶೇಖರ್ ಹರನಾಳ ಸೇರಿದಂತೆ ತಾಲೂಕಿನ ವಿವಿಧ ಸಮಾಜದ ಮುಖಂಡರು ಹಾಗೂ ತಾಲೂಕು ಆಡಳಿತದ ಎಲ್ಲಾ ನೌಕರ ವರ್ಗದವರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.
ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…
ಕಲಬುರಗಿ; ಕನಾ೯ಟಕ ರಾಜ್ಯ ತಳವಾರ ಮಹಾಸಭಾ ಕಲಬುರಗಿ ಜಿಲ್ಲಾಧ್ಯಕ್ಷರಾದ ಚಂದ್ರಕಾಂತ ದಶರಥ ತಳವಾರ ಅವರ ಅಧ್ಯಕ್ಷತೆಯಲ್ಲಿ ಇಂದು ಆನಂದ ನಿಲಯ…
ಕಲಬುರಗಿ; ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಶನಿವಾರ ಶಹಾಬಾದ ರಸ್ತೆಯಲ್ಲಿರುವ ನಂದೂರ-ಕೆಸರಟಗಿ ಮತ್ತು ಹುಮನಾಬಾದ ರಸ್ತೆಯಲ್ಲಿರುವ ಕಪನೂರ ಕೈಗಾರಿಕಾ…
ಶಹಾಬಾದ: ಕರ್ನಾಟಕದ ಬಹುಮತ ಸರಕಾರವನ್ನು ಬೀಳಿಸಲು ಇಲ್ಲಸಲ್ಲದ ಆರೋಪ ಮಾಡುವ ಮೂಲಕ ಸಿಎಂ ರಾಜೀನಾಮೆಗೆ ಒತ್ತಾಯ ಮಡುತ್ತಿರುವ ಬಿಜೆಪಿ ಹಾಗೂ…
ಶಹಾಬಾದ:ಪ್ರತಿ ಮನೆಗೂ ನೀರು ದೊರಿಸಿಕೊಡುವ ಉದ್ದೇಶದಿಂದ ನಡೆಯುವ ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಬೇಕೆಂದು ಕಾಂಗ್ರೆಸ್ ಮುಖಂಡ ಮೃತ್ಯುಂಜಯ್ ಹಿರೇಮಠ ಹೇಳಿದರು.…
ಶಹಾಬಾದ :ನಗರದ ಬೌದ್ಧ ವಿಹಾರದಲ್ಲಿ ರವಿವಾರ ಹಮ್ಮಿಕೊಂಡ 68ನೇ ಧಮ್ಮಚಕ್ರ ಪ್ರವರ್ತನಾ ದಿನದ ಅಂಗವಾಗಿ ಕಲಬುರ್ಗಿಯಲ್ಲಿ ಅ.13 ಮತ್ತು 14…