ಅಂಬೇಡ್ಕರ್ ಜಯಂತ್ಯುತ್ಸವ: ಚಿಂತನೆಗೆ ವೇದಿಕೆಯಾಗಲಿ

0
66

ಶಹಾಬಾದ : ಎಲ್ಲ ಧರ್ಮ, ಜಾತಿಗಳಿಗೆ ಸಮಾನತೆ, ಸಮಾನ ಅವಕಾಶ ನೀಡಿದ ಸಂವಿಧಾನ ಕರ್ತೃ ಭಾರತರತ್ನ ಡಾ.ಬಿ.ಆರ್.ಅಂಬೇಡ್ಕರ್ ಅವರ ಜಯಂತೋತ್ಸವಗಳು ಕಾಟಾಚಾರಕ್ಕೆ ನಡೆಯದೆ ಅವರ ಬದುಕು, ಆದರ್ಶ, ತತ್ವಗಳ ಗಂಭೀರ ಚಿಂತನೆಗಳ ಚರ್ಚೆಗೆ ವೇದಿಕೆಯಾಗಬೇಕು ಎಂದು ನಗರಸಭೆಯ ಪೌರಾಯುಕ್ತ ಡಾ.ಕೆ.ಗುರಲಿಂಗಪ್ಪ ಹೇಳಿದರು.

ಅವರು ಬುಧವಾರ ನಗರಸಭೆಯಲ್ಲಿ ಆಯೋಜಿಸಲಾದ ಕಾರ್ಯಕ್ರಮ ಡಾ.ಬಾಬಾ ಸಾಹೇಬ ಅಂಬೇಡ್ಕರ್ ಜಯಂತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.

Contact Your\'s Advertisement; 9902492681

ಬಡತನದಲ್ಲಿ ಜನಿಸಿ ಹಲವು ನೋವುಗಳ ಮಧ್ಯೆ ತಮ್ಮ ವಿದ್ಯಾಬ್ಯಾಸವನ್ನು ಪಡೆದ ಅಂಬೇಡ್ಕರ್ ಅವರು ಜಗತ್ತಿನ ಹಲವು ದೇಶಗಳ ಸಂವಿಧಾನ ಅಧ್ಯಯನ ಮಾಡಿ ಅಮೇರಿಕಾ, ಇಂಗ್ಯೆಂಡ್, ಐರ್ಲೆಂಡ್ ದೇಶದ ಪ್ರಮುಖ ಅಂಶ ತೆಗೆದುಕೊಂಡು ಎಲ್ಲಾ ಸಮಸ್ಯೆಗಳನ್ನು ಬಗೆಹರಿಸುವಂತ ಸಂವಿಧಾನ ನಮ್ಮ ದೇಶಕ್ಕೆ ಸಮರ್ಪಣೆ ಮಾಡಿದ ಕೀರ್ತಿ ಇದೆ ಎಂದರು.

ತಹಸೀಲ್ದಾರ ಸುರೇಶ ವರ್ಮಾ ಮಾತನಾಡಿ, ವ್ಯವಸ್ಥಿತ ಸಂವಿಧಾನವನ್ನು ದೇಶಕ್ಕೆ ನೀಡಿದ ಮಹಾನ್ ನಾಯಕ ಅಂಬೇಡ್ಕರ್. ಅವರು ಹಾಕಿಕೊಟ್ಟ ಮಾರ್ಗದಲ್ಲಿ ಎಲ್ಲ ವರ್ಗದ ಜನ, ವಿಶೇಷವಾಗಿ ದಲಿತರು ಸಾಗಬೇಕಿದೆ ಎಂದರು.

ನಗರಸಭೆ ಅಧ್ಯಕ್ಷೆ ಅಂಜಲಿ ಗಿರೀಶ ಕಂಬಾನೂರ, ಉಪಾಧ್ಯಕ್ಷೆ ಸಲೀಮಾಬೇಗಂ, ಸ್ಥಾಯಿ ಸಮಿತಿ ಅಧ್ಯಕ್ಷ ತಿಪ್ಪಣ್ಣ ನಾಟೇಕಾರ, ನಗರಸಭೆಯ ವ್ಯವಸ್ಥಾಪಕ ಶಂಕರ ಇಂಜಗನೇರಿ, ನಗರಸಭೆಯ ಸದಸ್ಯರಾದ ಪಾರ್ವತಿ ಪವಾರ, ನಾಗರಾಜ ಕರಣಿಕ್, ಡಾ.ಅಹ್ಮದ್ ಪಟೇಲ್,ಆರೋಗ್ಯ ನಿರೀಕ್ಷಕ ಶಿವರಾಜಕುಮಾರ, ದಸಂಸ ರಾಜ್ಯ ಸಂಘಟನಾ ಸಂಚಾಲಕ ಮರಿಯಪ್ಪ ಹಳ್ಳಿ, ಕೃಷ್ಣಪ್ಪ ಕರಣಿಕ್, ಬಸವರಾಜ ಮಯೂರ, ರಾಜೇಶ ಯನಗುಂಟಿಕರ್, ಶಿವರಾಜ ಕೋರೆ,ಪ್ರವೀಣ ರಾಜನ್, ಸ್ನೇಹಲ್ ಜಾಯಿ,ಪೂಜಪ್ಪ ಮೇತ್ರೆ, ಗೌತಮ್ ಬಿದನಕರ್, ಶರಣು ಧನ್ನೇಕರ್ ಸೇರಿದಂತೆ ನಗರಸಭೆಯ ಸರ್ವ ಸದಸ್ಯರು ಹಾಗೂ ಸಿಬ್ಬಂದಿ ವರ್ಗದವರು ಹಾಜರಿದ್ದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here