ಕಲಬುರಗಿ: ಜಿಲ್ಲೆಯ ಆಳಂದ ತಾಲೂಕಿನ ಹಿರಿಯ ಶ್ರೇಣಿ ನ್ಯಾಯಾಲಯದಲ್ಲಿ ಖಾಲಿಯಿರುವ ಅಪರ ಸರಕಾರಿ ವಕೀಲರ ಹುದ್ದೆಗೆ ಅರ್ಹ ಅಭ್ಯರ್ಥಿಯಿಂದ ಅರ್ಜಿ ಅಹ್ವಾನಿಸಲಾಗಿದೆ.
ಅರ್ಜಿ ಸಲ್ಲಿಸುವ ಅರ್ಹ ಅಭ್ಯರ್ಥಿಗಳು ಸ್ಥಳೀಯರಾಗಿರಬೇಕು ಮತ್ತು ಅರ್ಜಿಯನ್ನು ಏಪ್ರಿಲ್ 30ರ ಸಂಜೆ 4 ಗಂಟೆಯೊಳಗಾಗಿ ಜಿಲ್ಲಾಧಿಕಾರಿಗಳು ಕಲಬುರಗಿ ರವರ ಕಾರ್ಯಲಯದಲ್ಲಿ ಅರ್ಜಿಗಳನ್ನು ಸಲ್ಲಿಸಬೇಕು.
ಅರ್ಜಿಯೊಂದಿಗೆ ಪೂರ್ಣ ಹೆಸರು, ಜನ್ಮ ದಿನಾಂಕ, ವಿದ್ಯಾರ್ಹತೆ, ಸದ್ಯದ ಅಂಚೆ ವಿಳಾಸ, ಜಿಲ್ಲಾ ಬಾರ್ ಅಸೋಸಿಯೇಷನ್‍ನಲ್ಲಿ ನೋಂದಣಿ ವಿವರ, ಕರ್ನಾಟಕ ಬಾರ್ ಅಸೋಸಿಯೇಷನ್‍ನಲ್ಲಿ ನೋಂದಣಿ ವಿವರ, ದಿವಾಣಿ ನ್ಯಾಯಾಲಯದಲ್ಲಿ ನಡೆಸಿದ ಪ್ರಕರಣಗಳ ಸಂಖ್ಯೆ, ಕ್ರಿಮಿನಲ್ ನ್ಯಾಯಾಲಯದಲ್ಲಿ ನಡೆಸಿದ ಪ್ರಕರಣಗಳ ಸಂಖ್ಯೆ, ಜಾತಿ ಮತ್ತು ಇತ್ಯಾದಿ ಪ್ರಮಾಣ ಪತ್ರ ದಾಖಲೆಗಳು (ಸಂಬಂಧ ಪಟ್ಟ ತಹಸೀಲ್ದಾರ ಕಾರ್ಯಾಲಯದಿಂದ) ಹಾಗೂ ವಕೀಲ ವೃತ್ತಿಯಲ್ಲಿ ಕನಿಷ್ಟ 7 ವರ್ಷಗಳ ಸೇವೆ ಸಲ್ಲಿಸಿದ ಅನುಭವ ಹೊಂದಿದ ದಾಖಲೆಯೊಂದಿಗೆ ಅರ್ಜಿ ಸಲ್ಲಿಸಬೇಕು ಎಂದು ಜಿಲ್ಲಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…
ಚಿಂಚೋಳಿ: ಸಿದ್ದಶ್ರೀ ಕಾರ್ಖಾನೆ ಪ್ರಾರಂಭ ಮಾಡಲು ರೈತರು ಹಗಲು ರಾತ್ರಿ ಎನ್ನದೆ ಬಸವೇಶ್ವರ ಉತ್ತರ ಬಳಿ ಧರಣಿಯಲ್ಲಿ ಹೋರಾಟ ಮಾಡುತ್ತಿದ್ದು.…
ಕಲಬುರಗಿ: ನವೆಂಬರ್ 29 ರಿಂದ 2 ಡಿಸೇಂಬರ್ ವರೆಗೆ ತಮಿಳುನಾಡಿನ ಅಲಗಪ್ಪ ವಿಶ್ವವಿದ್ಯಾಲಯ ಕರೈಕುಡಿಯಲ್ಲಿ ನಡೆಯುವ ದಕ್ಷಿಣ ಭಾರತ ಅಂತರ…
ಕಲಬುರಗಿ: ನಗರದ ವಾರ್ಡ ನಂ.51.ರ ಜೇವರ್ಗಿ ಕಾಲೋನಿ ವಾಟರ್ ಟ್ಯಾಂಕ್ ಹತ್ತಿರದ ಉದ್ಯವನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ ಖರ್ಗೆ…