ರಸ್ತೆ ನಿರ್ಮಾಣ ಕಾಮಗಾರಿ ಪೂರ್ಣಗೊಳಿಸದೇ ಗುತ್ತಿಗೆದಾರ ಪಲಾಯನ: ಸಾರ್ವಜನಿಕರಿಂದ ಆಕ್ರೋಶ

0
77

ಶಹಾಬಾದ: ನಗರಸಭೆ ವ್ಯಾಪ್ತಿಯ ಕೊಳಸಾ ಫೈಲ್ ಬಡಾವಣೆಯಲ್ಲಿ ಸಂಪರ್ಕ ಕಲ್ಪಿಸುವ ರಸ್ತೆ ನಿರ್ಮಾಣ ಮಾಡುವ ಗುತ್ತಿಗೆದಾರ ಕಾಮಗಾರಿ ಮಾಡದೇ ಪಲಾಯನ ಮಾಡಿದ್ದಾನೆ.ಈ ಬಗ್ಗೆ ದೂರು ನೀಡಿದರೂ ನಗರಸಭೆಯ ಪೌರಾಯುಕ್ತರು ಯಾವುದೇ ಕ್ರಮ ತೆಗೆದುಕೊಳ್ಳುತ್ತಿಲ್ಲ ಎಂದು ಬಡಾವಣೆಯ ಜನರು ಆರೋಪಿಸಿದ್ದಾರೆ.

ನಗರೋತ್ಥಾನ ಯೋಜನೆಯಡಿ ಸುಮಾರು ಲಕ್ಷಗಟ್ಟಲೇ ಅನುದಾನದಲ್ಲಿ ರಸ್ತೆ ನಿರ್ಮಿಸಲು ಗುತ್ತಿಗೆ ನೀಡಲಾಗಿದೆ. ಕಳೆದ ೨ವ?ಗಳಿಂದ ಆರಂಭವಾದ ಕಾಮಗಾರಿ ಮುಕ್ತಾಯ ಕಾಣುತ್ತಿಲ್ಲ. ಎರಡು ವರ್ಷಗಳ ಹಿಂದೆ ಬಡಾವಣೆಯಲ್ಲಿ ರಸ್ತೆ ನಿರ್ಮಾಣವಾಗುತ್ತಿದೆ ಎಂಬ ಸುದ್ದಿ ಕೇಳಿ ಜನರು ಬಹಳ ಸಂತೋಷಪಟ್ಟಿದ್ದರು.

Contact Your\'s Advertisement; 9902492681

ಅಲ್ಲದೇ ರಸ್ತೆಯನ್ನು ಸಮತಟ್ಟು ಮಾಡದೇ ಕೇವಲ ಕಂಕರ್ ಹಾಕಿ ಹೋಗಿದ್ದು ಬಿಟ್ಟರೇ ಗುತ್ತಿಗೆದಾರರು ಮತ್ತೆ ಈ ಕಡೆ ತಲೆ ಹಾಕಿಲ್ಲ. ಇದರಿಂದ ರಸ್ತೆ ಸಂಚಾರಕ್ಕೆ ಸಂಚಕಾರವಾಗಿ ಪರಿಣಮಿಸಿದೆ. ಈ ಬಗ್ಗೆ ಎರಡು ವರ್ಷದಿಂದ ನಗರಸಭೆಯ ಅಧಿಕಾರಿಗಳಿಗೆ ಹಾಗೂ ಶಾಸಕರಿಗೆ ಮನವಿ ಸಲ್ಲಿಸಿದರೂ ಯಾವುದೇ ಪ್ರಯೋಜನವಾಗಿಲ್ಲ. ಎರಡು ವರ್ಷದಿಂದ ಕೆಲಸ ಮಾಡದ ಗುತ್ತಿಗೆದಾರನ ವಿರುದ್ಧವೂ ಕ್ರಮಕೈಗೊಳ್ಳುತ್ತಿಲ್ಲ. ಅಲ್ಲದೇ ರಸ್ತೆ ನಿರ್ಮಾಣ ಮಾಡಲು ತಾಕೀತು ಮಾಡುತ್ತಿಲ್ಲ. ಗುತ್ತಿಗೆದಾರನಿಗೆ ಕರೆ ಮಾಡಿದರೂ ಸ್ವೀಕರಿಸುತ್ತಿಲ್ಲ.ಇದರಿಂದ ಇಲ್ಲಿನ ಜನರು ರೋಸಿ ಹೋಗಿದ್ದಾರೆ.

ಅಲ್ಲದೇ ಈ ಬಡಾವಣೆಯಲ್ಲಿ ಕೂಲಿ ಕಾರ್ಮಿಕರು, ದಲಿತರೇ ಹೆಚ್ಚಾಗಿರುವ ಕಾರಣ ಅಧಿಕಾರಿಗಳು ಹಾಗೂ ಶಾಸಕರು ನಿರ್ಲಕ್ಷ್ಯ ಧೋರಣೆ ತೋರುತ್ತಿದ್ದಾರೆ ಎಂದು ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.ಅಲ್ಲದೇ ಚುನಾವಣೆಯ ಸಂದರ್ಭದಲ್ಲಿ ಶಾಸಕರು ಬಂದು ನಿಮ್ಮ ಬೇಡಿಕೆಗಳನ್ನು ಈಡೇರಿಸುತ್ತೆವೆ ಎಂದು ಹೇಳಿದ್ದರು.ಈಗ ಇಲ್ಲಿನ ಸಾರ್ವಜನಿಕರು ಸಮಸ್ಯೆ ಆಲಿಸುತ್ತಿಲ್ಲ ಎಂದು ಮನೋಹರ ಆಕ್ರೋಶ ವ್ಯಕ್ತಪಡಿಸಿದ್ದಾರೆ.ಕೂಡಲೇ ಗುತ್ತಿಗೆದಾರನಿಗೆ ಕಪ್ಪು ಪಟ್ಟಿಗೆ ಸೇರಿಸಬೇಕೆಂದು ಆಗ್ರಹಿಸಿದ್ದಾರೆ.
ಚಿತ್ರ ಶೀರ್ಷಿಕೆ
೧೫ಎಸ್‌ಬಿಡಿ೨
ಶಹಾಬಾದ:ನಗರದ ಕೊಳಸಾಫೈಲ್ ಬಡಾವಣೆಯಲ್ಲಿ ಎರಡು ವರ್ಷದ ಹಿಂದೆ ನಗರೋತ್ಥಾನ ಯೋಜನೆಯಡಿ ಕಂಕರ್ ಹಾಕಿ ಅರ್ಧಕ್ಕೆ ಬಿಟ್ಟಿರುವುದು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here