ಸುರಪುರ; ನಗರಸಭೆಯ ಪೌರಾಯುಕ್ತ ಜೀವನಕುಮಾರ ಕಟ್ಟಿಮನಿ ನೇತೃತ್ವದಲ್ಲಿ ನಗರದಾದ್ಯಂತ ಸಂಚರಿಸಿ ಎಲ್ಲಾ ಅಂಗಡಿ ಮುಂಗಟ್ಟುಗಳಲ್ಲಿ ಮಾಸ್ಕ್ ಧರಿಸದವರಿಗೆ ದಂಡ ವಿಧಿಸುವ ಹಾಗು ಮಾಸ್ಕ್ ಕಡ್ಡಾಯವಾಗಿ ಧರಿಸುವಂತೆ ಅರಿವು ಮೂಡಿಸುವ ಅಭಿಯಾನ ನಡೆಯಿತು.
ಈ ಸಂದರ್ಭದಲ್ಲಿ ಮಾತನಾಡಿದ ಪೌರಾಯುಕ್ತ ಜೀವನಕುಮಾರ ಕಟ್ಟಿಮನಿ,ಕೊರೊನಾ ಎರಡನೇ ಅಲೆ ರಾಜ್ಯದಲ್ಲಿ ವೇಗವಾಗಿ ಹರಡುತ್ತಿದ್ದು ಜನರು ಕಡ್ಡಾಯವಾಗಿ ಮಾಸ್ಕ್ ಧರಿಸುವುದು ಮತ್ತು ಸಾಮಾಜಿಕ ಅಂತರವನ್ನು ಕಾಪಾಡುವುದು ಕಡ್ಡಾಯವಾಗಿದೆ.ಈಗಾಗಲೆ ಸರಕಾರವು ನಿಯಮಗಳನ್ನು ಜಾರಿಗೊಳಿಸಿದ್ದು ಯಾವುದೇ ವ್ಯಾಪಾರಿಗಳು ಮತ್ತು ಸಾರ್ವಜನಿಕರು ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು ಧರಿಸದವರಿಗೆ ದಂಡ ವಿಧಿಸಲಾಗುವುದು ಎಂದು ತಿಳಿಸಿದರು.
ನಗರದ ವಿವಿಧ ಅಂಗಡಿಗಳಲ್ಲಿನ ವ್ಯಾಪಾಯಿಗಳು ಮತ್ತು ಕೆಲ ಸಾರ್ವಜನಿಕರಿಗು ಮಾಸ್ಕ ಧರಿಸದ ಕಾರಣ ದಂಡ ವಿಧಿಸಿ ಎಚ್ಚರಿಕೆ ನೀಡಿದರು.ಮೊದಲ ದಿನದ ಅಭಿಯಾನದಲ್ಲಿ ಮಾಸ್ಕ್ ಧರಿಸದವರಿಗೆ ವಿಧಿಸಿದ ದಂಡದ ಮೊತ್ತ ೫೭೦೦ ರೂಪಾಯಿ ದಂಡ ವಸೂಲಿ ಮಾಡಲಾಗಿದೆ ಎಂದು ಪೌರಾಯುಕ್ತರು ತಿಳಿಸಿದ್ದಾರೆ.
ಈ ಸಂದರ್ಭದಲ್ಲಿ ನಗರಸಭೆ ವ್ಯವಸ್ಥಾಪಕ ಯಲ್ಲಪ್ಪ ನಾಯಕ ಸಿಬ್ಬಂದಿಗಳಾದ ಓಂಕಾರೆಪ್ಪ ಪೂಜಾರಿ ಲಕ್ಷ್ಮಣ ಕಟ್ಟಿಮನಿ ಶಿವಪುತ್ರ ಸೇರಿದಂತೆ ಅನೇಕರಿದ್ದರು.
ಕಲಬುರಗಿ: ಸ್ಲಂ ಜನರ ಸಂಘಟನೆ ಕರ್ನಾಟಕ ವತಿಯಿಂದ ಆಯೋಜಿಸಿದ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ವೃತ್ತ ಹೈ -ಕೋರ್ಟ್ ರಸ್ತೆ…
ಕಲಬುರಗಿ: ಕರ್ನಾಟಕ ರಾಜ್ಯದ ಕಲಬುರಗಿ-ಜಿಲ್ಲೆಯಲ್ಲಿ ದಲಿತ (ಮಾದಿಗ) ಸಮುದಾಯದವರಿಗೆ ರಾಷ್ಟ್ರೀಕೃತ ಬ್ಯಾಂಕ್‍ಗಳು ಸಾಲ ಸೌಲಭ್ಯ ನೀಡದಿರುವ ಕುರಿತು ಶೋಷಿತ ಜನಜಾಗೃತಿ…
ಕಲಬುರಗಿ: ಪ್ರಶಸ್ತಿ ಪುರಸ್ಕೃತರು ಸನ್ಮಾನ ಸಮಾರಂಭಕ್ಕೆ ಗೈರಾಗಿರುವುದು ಬೇಸರದ ಸಂಗತಿ ಎಂದು ಜಿಲ್ಲಾ ವೈದ್ಯ ಸಾಹಿತ್ಯ ಪರಿಷತ್ ಅಧ್ಯಕ್ಷ ಹಾಗೂ…
ಕಲಬುರಗಿ: ಹಣೆಯ ಮೇಲೆ ಹಚ್ಚಿದ ವಿಭೂತಿ ಸಮಾನತೆ ಸಾರುವದರೊಂದಿಗೆ ಮನುಷ್ಯನ ಆತ್ಮವಿಶ್ವಾಸ ಹೆಚ್ಚಿಸುತ್ತದೆ ಎಂದು ಆರಾಧನಾ ಪದವಿ ಪೂರ್ವ ಕಾಲೇಜಿನ…
ಕಲಬುರಗಿ ಕೇಂದ್ರ ಕಾರಾಗೃಹದಲ್ಲಿರುವ ಸಂವಿಧಾನ ದಿನವನ್ನು ಸರ್ಕಾರದ ಸುತ್ತೋಲೆ ಆದೇಶದಂತೆ ಕಾರಾಗೃಹದ ಲಿಪಿಕ/ ಕಾನಿನಿರ್ವಹಕ ಅಧಿಕಾರಿ/ಸಿಬ್ಬಂದಿಯವರೊಂದಿಗೆ ಡಾ|| ಬಾಬಾ ಸಾಹೇಬ್…
ಕಲಬುರಗಿ; ಸಂವಿಧಾನವನ್ನು ರಕ್ಷಿಸಲು ಮತ್ತು ಜನರಲ್ಲಿ ಸಂವಿಧಾನದ ಮೇಲಿನ ನಂಬಿಕೆಯನ್ನು ಬಲಪಡಿಸಲು ಜಾಗೃತ ಶಕ್ತಿಯಾಗಿ ಕಾರ್ಯನಿರ್ವಹಿಸುವ ಗುರುತರವಾದ ಜವಾಬ್ದಾರಿಯನ್ನು ದೇಶದ…