ಶಹಾಬಾದ: ಮಾರಾಣಾಂತಿಕ ಕೊರೊನಾ ವೈರಾಣು ಹರಡುವಿಕೆ ತಡೆಯಲು ಕಡ್ಡಾಯವಾಗಿ ಎಲ್ಲರೂ ಮಾಸ್ಕ್ ಧರಿಸಿ ಎಂದು ಉದ್ಯಮಿ ನರೇಂದ್ರ ವರ್ಮಾ ಹೇಳಿದರು.
ಅವರು ನಗರಸಭೆ ಹಾಗೂ ಕಂದಾಯ ಇಲಾಖೆ ವತಿಯಿಂದ ಆಯೋಜಿಸಲಾದ ಕೊರೊನಾ ಜಾಗೃತಿ ಜಾಥಾದಲ್ಲಿ ಪಾಲ್ಗೊಂಡು ಮಾತನಾಡಿದರು.
ಮಾಸ್ಕ್ ಧರಿಸುವ ಮೂಲಕ ಜನರು ಕೊರೊನಾ ತಡೆಯಲು ಸಹಕರಿಸುವಂತೆ ನಗರದ ನಾಗರೀಕರಿಗೆ ಅರಿವು ಮೂಡಿಸಿದರು.
ಕೋವಿಡ್ ೧೯ ಮಾರಾಣಾಂತಿಕ ವೈರಾಣು ಹರಡುವಿಕೆ ತಡೆಯಲು ಎಲ್ಲರೂ ಒಟ್ಟಾಗಿ ಶ್ರಮಿಸಬೇಕು. ಕಡ್ಡಾಯವಾಗಿ ಮಾಸ್ಕ್ ಧರಿಸುವುದು, ಕನಿ? ೬ ಅಡಿಗಳ ಅಂತರ ಕಾಪಾಡಿಕೊಳ್ಳುವ ಜೊತೆಗೆ ಕೈಗೆ ಸೋಪು ಮತ್ತು ನೀರಿನಿಂದ ತೊಳೆಯುವ ಮೂಲಕ ಕೊರೊನಾ ವೈರಸ್‌ಗೆ ಕಡಿವಾಣ ಹಾಕಲು ಸಾಧ್ಯವೆಂದು ಹೇಳಿದರು.
ತಹಸೀಲ್ದಾರ ಸುರೇಶ ವರ್ಮಾ ಮಾತನಾಡಿ, ಕೊರೊನಾ ವೈರಸ್ ರೋಗ ಲಕ್ಷಣಗಳಾದ ತೀವ್ರ ಜ್ವರ, ನಗಡೆ, ಕೆಮ್ಮು, ಉಸಿರಾಟದ ತೊಂದರೆ ಹಾಗೂ ಭೇದಿ ಈ ಲಕ್ಷಣಗಳು ಕಂಡು ಬಂದಲ್ಲಿ ತಕ್ಷಣ ಆಸ್ಪತ್ರೆಯ ವೈದ್ಯರಲ್ಲಿ ಪರೀಕ್ಷೆ ಮಾಡಿಸಿಕೊಳ್ಳಬೇಕು. ಮುಜಾಂಗ್ರತಾ ದೃಷ್ಟಿಯಿಂದ ಕೆಮ್ಮುವಾಗ ಸೀನುವಾಗ ಕರ ವಸ್ತ್ರ ಅಡ್ಡ ಹಿಡಿಯಬೇಕು.
ನಗರಸಭೆಯ ಪೌರಾಯುಕ್ತ ಡಾ.ಕೆ.ಗುರಲಿಂಗಪ್ಪ ಮಾತನಾಡಿ, ಸಾರ್ವಜನಿಕ ಸ್ಥಳದಲ್ಲಿ ಉಗಳಬಾರದು, ಕೈಗಳನ್ನು ಸಾಬೂನುನಿಂದ ತೊಳೆದುಕೊಳ್ಳುವುದರ ಮೂಲಕ ಸ್ವಚ್ಛತೆಯನ್ನು ಕಾಪಾಡಬೇಕು. ರೋಗದ ಲಕ್ಷಣ ಹೊಂದಿರುವವರು ಜನರೊಂದಿಗೆ ನಿಕಟ ಸಂಪರ್ಕ ಹೊಂದಬಾರದು. ಸರಿಯಾಗಿ ಬೇಯಿಸದ ಹಸಿ ಮೊಟ್ಟೆ, ಮಾಂಸ, ಸೇವೆನೆ ಮಾಡಬಾರದು.ಅಲ್ಲದೇ ಮಾಸ್ಕ್ ಧರಿಸುವುದು, ಸಾಮಾಜಿಕ ಅಂತರ ಕಾಪಾಡುವುದು ಎಲ್ಲರ ಕರ್ತವ್ಯವಾಗಲಿ ಎಂದು ಹೇಳಿದರು.
ಆರೋಗ್ಯ ನಿರೀಕ್ಷಕರಾದ ಶಿವರಾಜಕುಮಾರ,ರಾಜೇಶ, ಶರಣು, ಕಂದಾಯ ನಿರೀಕ್ಷಕ ವೀರಭದ್ರಪ್ಪ, ಗ್ರಾಮ ಲೆಕ್ಕಿಗ ಶ್ರೀಮಂತ, ಶಿವಾನಂದ, ಹುಣೇಶ, ಅನೀಲ ಸೇರಿದಂತೆ ಅನೇಕ ಜನರು ಇದ್ದರು.