ಬಿಸಿ ಬಿಸಿ ಸುದ್ದಿ

ಕಡ್ಡಾಯವಾಗಿ ಮಾಸ್ಕ್ ಧರಿಸಿ: ಉದ್ಯಮಿ ನರೇಂದ್ರ ವರ್ಮಾ

ಶಹಾಬಾದ: ಮಾರಾಣಾಂತಿಕ ಕೊರೊನಾ ವೈರಾಣು ಹರಡುವಿಕೆ ತಡೆಯಲು ಕಡ್ಡಾಯವಾಗಿ ಎಲ್ಲರೂ ಮಾಸ್ಕ್ ಧರಿಸಿ ಎಂದು ಉದ್ಯಮಿ ನರೇಂದ್ರ ವರ್ಮಾ ಹೇಳಿದರು.

ಅವರು ನಗರಸಭೆ ಹಾಗೂ ಕಂದಾಯ ಇಲಾಖೆ ವತಿಯಿಂದ ಆಯೋಜಿಸಲಾದ ಕೊರೊನಾ ಜಾಗೃತಿ ಜಾಥಾದಲ್ಲಿ ಪಾಲ್ಗೊಂಡು ಮಾತನಾಡಿದರು.

ಮಾಸ್ಕ್ ಧರಿಸುವ ಮೂಲಕ ಜನರು ಕೊರೊನಾ ತಡೆಯಲು ಸಹಕರಿಸುವಂತೆ ನಗರದ ನಾಗರೀಕರಿಗೆ ಅರಿವು ಮೂಡಿಸಿದರು.
ಕೋವಿಡ್ ೧೯ ಮಾರಾಣಾಂತಿಕ ವೈರಾಣು ಹರಡುವಿಕೆ ತಡೆಯಲು ಎಲ್ಲರೂ ಒಟ್ಟಾಗಿ ಶ್ರಮಿಸಬೇಕು. ಕಡ್ಡಾಯವಾಗಿ ಮಾಸ್ಕ್ ಧರಿಸುವುದು, ಕನಿ? ೬ ಅಡಿಗಳ ಅಂತರ ಕಾಪಾಡಿಕೊಳ್ಳುವ ಜೊತೆಗೆ ಕೈಗೆ ಸೋಪು ಮತ್ತು ನೀರಿನಿಂದ ತೊಳೆಯುವ ಮೂಲಕ ಕೊರೊನಾ ವೈರಸ್‌ಗೆ ಕಡಿವಾಣ ಹಾಕಲು ಸಾಧ್ಯವೆಂದು ಹೇಳಿದರು.

ತಹಸೀಲ್ದಾರ ಸುರೇಶ ವರ್ಮಾ ಮಾತನಾಡಿ, ಕೊರೊನಾ ವೈರಸ್ ರೋಗ ಲಕ್ಷಣಗಳಾದ ತೀವ್ರ ಜ್ವರ, ನಗಡೆ, ಕೆಮ್ಮು, ಉಸಿರಾಟದ ತೊಂದರೆ ಹಾಗೂ ಭೇದಿ ಈ ಲಕ್ಷಣಗಳು ಕಂಡು ಬಂದಲ್ಲಿ ತಕ್ಷಣ ಆಸ್ಪತ್ರೆಯ ವೈದ್ಯರಲ್ಲಿ ಪರೀಕ್ಷೆ ಮಾಡಿಸಿಕೊಳ್ಳಬೇಕು. ಮುಜಾಂಗ್ರತಾ ದೃಷ್ಟಿಯಿಂದ ಕೆಮ್ಮುವಾಗ ಸೀನುವಾಗ ಕರ ವಸ್ತ್ರ ಅಡ್ಡ ಹಿಡಿಯಬೇಕು.

ನಗರಸಭೆಯ ಪೌರಾಯುಕ್ತ ಡಾ.ಕೆ.ಗುರಲಿಂಗಪ್ಪ ಮಾತನಾಡಿ, ಸಾರ್ವಜನಿಕ ಸ್ಥಳದಲ್ಲಿ ಉಗಳಬಾರದು, ಕೈಗಳನ್ನು ಸಾಬೂನುನಿಂದ ತೊಳೆದುಕೊಳ್ಳುವುದರ ಮೂಲಕ ಸ್ವಚ್ಛತೆಯನ್ನು ಕಾಪಾಡಬೇಕು. ರೋಗದ ಲಕ್ಷಣ ಹೊಂದಿರುವವರು ಜನರೊಂದಿಗೆ ನಿಕಟ ಸಂಪರ್ಕ ಹೊಂದಬಾರದು. ಸರಿಯಾಗಿ ಬೇಯಿಸದ ಹಸಿ ಮೊಟ್ಟೆ, ಮಾಂಸ, ಸೇವೆನೆ ಮಾಡಬಾರದು.ಅಲ್ಲದೇ ಮಾಸ್ಕ್ ಧರಿಸುವುದು, ಸಾಮಾಜಿಕ ಅಂತರ ಕಾಪಾಡುವುದು ಎಲ್ಲರ ಕರ್ತವ್ಯವಾಗಲಿ ಎಂದು ಹೇಳಿದರು.

ಆರೋಗ್ಯ ನಿರೀಕ್ಷಕರಾದ ಶಿವರಾಜಕುಮಾರ,ರಾಜೇಶ, ಶರಣು, ಕಂದಾಯ ನಿರೀಕ್ಷಕ ವೀರಭದ್ರಪ್ಪ, ಗ್ರಾಮ ಲೆಕ್ಕಿಗ ಶ್ರೀಮಂತ, ಶಿವಾನಂದ, ಹುಣೇಶ, ಅನೀಲ ಸೇರಿದಂತೆ ಅನೇಕ ಜನರು ಇದ್ದರು.

emedialine

Recent Posts

ಜಾನಪದ ಜೀವನ ಮೌಲ್ಯಗಳ ಪ್ರತೀಕ

ಸುರಪುರ; ಜೀವನದ ಮೌಲ್ಯಗಳನ್ನು ಎತ್ತಿ ಹಿಡಿಯುವ ಶಕ್ತಿ ಜಾನಪದ ಸಾಹಿತ್ಯ, ಕಲೆಗೆ ಇದ್ದು, ಜಾನಪದ ಸಾರ್ವಕಾಲಿಕ ಸತ್ಯವಾಗಿದೆ ಎಂದು ಲಕ್ಷ್ಮೀಪುರ…

11 hours ago

ಸುರಪುರ:ನೂತನ ಮರಗಮ್ಮ ದೇವಿ ರಜತ ಮೂರ್ತಿ ಪ್ರತಿಷ್ಠಾಪನೆ

ಸುರಪುರ: ತಿಮ್ಮಾಪುರದ ಮುಖ್ಯ ರಸ್ತೆಯಲ್ಲಿ ನಿರ್ಮಾಣವಾದ ನೂತನ ಮರಗಮ್ಮ ದೇವಿಯ ದೇವಸ್ಥಾನ ಲೋಕಾರ್ಪಣೆ , ಮರಗಮ್ಮ ದೇವಿಯ ರಜತ ಮೂರ್ತಿಯ…

11 hours ago

ಜುಲೈ 8 ರಂದು ಕಾಳಗಿಯಲ್ಲಿ ಉಚಿತ ಆರೋಗ್ಯ ತಪಾಸಣೆ ಶಿಬಿರ

ಕಲಬುರಗಿ: ನಗರದ ಪ್ರತಿಷ್ಠಿತ ಸುಬೇದಾರ ಕೇರ್ ಹಾಸ್ಪಿಟಲ್ ವತಿಯಿಂದ ಕಾಳಗಿ ಪಟ್ಟಣದ ಬಸ್ ನಿಲ್ದಾಣದ ಆವರಣದಲ್ಲಿ ಜುಲೈ 8 ರಂದು…

13 hours ago

ವಾಡಿ: “ತಾಯಿ ಹೆಸರಲ್ಲಿ ಒಂದು ಸಸಿ” ಅಭಿಯಾನ

ವಾಡಿ: ಪಟ್ಟಣದ ಬಸ್ ನಿಲ್ದಾಣದ ಹತ್ತಿರದ ಹನುಮಾನ ಮಂದಿರದ ಮುಂಭಾಗದಲ್ಲಿ ಬಿಜೆಪಿ ಮುಖಂಡರು ಸಾರ್ವಜನಿಕರಿಗೆ ಸಸಿಗಳನ್ನು ವಿತರಿಸುವ ಮೂಲಕ"ತಾಯಿ ಹೆಸರಲ್ಲಿ…

13 hours ago

ವಾಡಿ: ಶ್ಯಾಮ್‌ ಪ್ರಸಾದ್ ಮುಖರ್ಜಿ ಜಯಂತಿ, ಬಾಬು ಜಗಜೀವನ್ ರಾಮ್ ಪುಣ್ಯಸ್ಮರಣೆ

ವಾಡಿ: ಪಟ್ಟಣದ ಬಿಜೆಪಿ ಕಛೇರಿಯಲ್ಲಿ ಭಾರತೀಯ ಜನಸಂಘದ ಸಂಸ್ಥಾಪಕರು, ಭಾರತದ ಅಖಂಡತೆ ಹಾಗೂ ಏಕತೆಗಳಿಗಾಗಿ ಶ್ರಮಿಸಿದ ಡಾ. ಶ್ಯಾಮ ಪ್ರಸಾದ್…

13 hours ago

ನಾಳೆ ವಾಡಿಯಲ್ಲಿ ಕವಿಗೋಷ್ಠಿ

ವಾಡಿ: ಸಂಚಲನ ಸಾಹಿತ್ಯ ಮತ್ತು ಸಾಂಸ್ಕøತಿಕ ವೇದಿಕೆ ವತಿಯಿಂದ ಜುಲೈ ಇಂದು ಬೆಳಿಗ್ಗೆ 10:00 ಗಂಟೆಗೆ ಪಟ್ಟಣದ ಡಾ. ಅಂಬೇಡ್ಕರ್…

14 hours ago