ಬಿಸಿ ಬಿಸಿ ಸುದ್ದಿ

ಗಮೇಸಾ ಕಾರ್ಮಿಕರನ್ನು ಶೀಘ್ರವೇ ಕೆಲಸಕ್ಕೆ ಪುನರ್ ನೇಮಕಕ್ಕೆ ಆಗ್ರಹ

ಕವಿತಾಳ: ಗಮೇಸಾ ವಿಂಡ್ ಟರ್ಬೈನ್ ಕಂಪನಿಯ 19 ಹೆಚ್ಚು ಕಾರ್ಮಿಕರನ್ನು ಕಾನೂನು ಬಾಹಿರ ವಾಗಿ ಕೆಲಸದಿಂದ ವಜಾ ಮಾಡಿದ್ದನ್ನು ಖಂಡಿಸಿ ಹಾಗೂ ಪುನರ್ ನೇಮಕ ಮಾಡಿಕೊಳ್ಳಲು ಒತ್ತಾಯಿಸಿ, ಇತರೆ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ CITU ನೇತೃತ್ವದಲ್ಲಿ ಕಂಪನಿಯ ಮುಂಭಾಗದಲ್ಲಿ ಕಾರ್ಮಿಕರು ನಡೆಸುತ್ತಿರುವ ಹೋರಾಟವು 32 ನೆಯ ದಿನಕ್ಕೆ ಕಾಲಿಟ್ಟಿದೆ.

ಈ ಹೋರಾಟಕ್ಕೆ ಮಾನ್ವಿ ವಿಧಾನಸಭಾ ಕ್ಷೇತ್ರದ ಶಾಸಕರಾದ ರಾಜಾ ವೆಂಕಟಪ್ಪ ನಾಯಕ, ಲೋಕಸಭಾ ಸದಸ್ಯರಾದ ರಾಜಾ ಅಮರೇಶ್ವರ ನಾಯಕ ಸೇರಿ ಸ್ಥಳಿಯ ಜನ ಪ್ರತಿನಿಧಿಗಳ ಮತ್ತು ಸುತ್ತಮುತ್ತಲಿನ ಗ್ರಾಮಗಳ ರೈತರ, ಗ್ರಾಮಸ್ಥರ ಬೆಂಬಲವು ಇದೆ ಆದರೆ ಕಂಪನಿಯ ಮಾಲೀಕರು ಮಾತ್ರ ಹೋರಾಟವನ್ನು ಸಂಪೂರ್ಣವಾಗಿ ನಿರ್ಲಕ್ಷ್ಯ ಮಾಡಿ ಕಾರ್ಮಿಕರನ್ನು ಬೀದಿಗೆ ತಂದು ನಿಲ್ಲಿಸಿದ್ದಾರೆ. ಭೂಮಿ, ಗಾಳಿ, ನೀರು ಸೇರಿ ಎಲ್ಲವು ನಮ್ಮದು ಆದರೆ ಕೆಲಸ ಮಾತ್ರ ಪರರಿಗೆ ಕೊಟ್ಟಿದ್ದಾರೆ, ಏಳು ವರ್ಷಗಳ ಕಾಲ ಕಾರ್ಮಿಕರನ್ನು ದುಡಿಸಿಕೊಂಡು ಈಗ ವಜಾ ಗೊಳಿಸಿ ಸ್ಥಳೀಯರಲ್ಲದವರನ್ನು ನೇಮಕ ಮಾಡಿಕೊಂಡಿದ್ದು ಕಾನೂನು ಮತ್ತು ಸಂವಿಧಾನ ವಿರೋಧಿ ನಡೆಯಾಗಿದೆ ಕೂಡಲೇ ಎಚ್ಚೆತ್ತುಕೊಂಡು ಕಾರ್ಮಿಕರನ್ನು ಪುನಃ ಕೆಲಸಕ್ಕೆ ನೇಮಕ ಮಾಡಿಕೊಳ್ಳದಿದ್ದರೆ ಹತ್ತಿರದಲ್ಲೆ  ರೈತರ ‌ಮತ್ತು ಗ್ರಾಮಸ್ಥರ, ಜನಪ್ರತಿನಿಧಿಗಳ, ವಿವಿಧ ಸಂಘಟನೆಗಳ ಸಹಕಾರದೊಂದಿಗೆ ಬೀಗ ಮುದ್ರೆಯನ್ನು ಹಾಕಿ ತಕ್ಕ ಪಾಠ ಕಲಿಸಬೇಕಾಗುತ್ತದೆ ಎಂದು ಹೋರಾಟದಲ್ಲಿ ಭಾಗವಹಿಸಿದ SFI ರಾಜ್ಯ ಉಪಾಧ್ಯಕ್ಷರಾದ ಶಿವಕುಮಾರ ಮ್ಯಾಗಳಮನಿ ಮಾತನಾಡಿ ಹೇಳಿದರು.

ನಂತರ ಹೋರಾಟ ವನ್ನು ಉದ್ದೇಶಿಸಿ SFI ಕವಿತಾಳ ನಗರ ಘಟಕದ ಅಧ್ಯಕ್ಷರಾದ ಮೌನೇಶ ಬುಳ್ಳಾಪುರ ಮತ್ತು ಕಾರ್ಮಿಕ ಮುಖಂಡರಾದ ಲಕ್ಷ್ಮಣ್ ಸಿಂಗ್, ಸಿದ್ದರಾಮಯ್ಯ ಮಾತನಾಡಿದರು.

ಈ ಸಂದರ್ಭದಲ್ಲಿ ಕವಿತಾಳ ನಗರ ಘಟಕದ ಕಾರ್ಯದರ್ಶಿ ವೆಂಕಟೇಶ, ಮುಖಂಡರಾದ ನಾಗಮೋಹನ್ ಸಿಂಗ್, ಮಲ್ಲಿಕಾರ್ಜುನ, ಮಹೇಶ್ ಯಡವಲ,  ಅರುಣ್ ಕುಮಾರ್ ಹಣಿಗಿ, ಲಿಂಗಣ್ಣ ಹುಸೇನಪುರ, ನಿಂಗಪ್ಪ ನಾಯಕ ತೊಪ್ಪಲದೊಡ್ಡಿ ಸೇರಿದಂತೆ ಕಾರ್ಮಿಕರು ಇದ್ದರು.

emedialine

Recent Posts

ಮಹಿಳಾ ಸಹಭಾಗಿತ್ವ ಇಲ್ಲದೆ ದೇಶದ ಅಭಿವೃದ್ಧಿ ಅಸಾಧ್ಯ: ಮಾತೋಶ್ರೀ ಡಾ. ಅವ್ವಾಜಿ

ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…

16 hours ago

ತೊಗರಿ ಬೆಳೆ‌ ಹಾನಿ ಪ್ರದೇಶ ವೀಕ್ಷಿಸಿದ ಶಾಸಕ ಅಲ್ಲಮಪ್ರಭು ಪಾಟೀಲ

ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…

1 day ago

ಕಷ್ಟಗಳಿಗೆ ಕುಗ್ಗದೇ ಸವಾಲಾಗಿ ಸ್ವಿಕರಿಸಿ

ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…

1 day ago

ಕಲಬುರಗಿ: ಹಾಸ್ಯ ಕಲಾವಿದ ರೇವಣಸಿದ್ಧ ಸ್ವಾಮಿ ದಂಪತಿಗೆ ಗೆಳೆಯರ ಬಳಗದಿಂದ ಸತ್ಕರಿಸಲಾಯಿತು.

ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…

1 day ago

ಸಾವಿರ ಸೀರೆ ವಿತರಿಸಿ ಸಚಿವ ಪ್ರಿಯಾಂಕ್ ಜನ್ಮದಿನ ಆಚರಣೆ

  ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…

2 days ago

ಮೂರೂ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು: ಕಾರ್ಯಕರ್ತರಿಂದ ವಿಜಯೋತ್ಸವ

ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…

2 days ago