ಬಿಸಿ ಬಿಸಿ ಸುದ್ದಿ

ಪಿ.ಹೆಚ್.ಡಿ, ಎಂ.ಫಿಲ್ ವ್ಯಾಸಂಗ ಮಾಡುತ್ತಿರುವ ಅಲ್ಪಸಂಖ್ಯಾತರ ವಿದ್ಯಾರ್ಥಿಗೆ ಫೆಲೋಶಿಫ್

ಕಲಬುರಗಿ: ಅಲ್ಪಸಂಖ್ಯಾತರ ವಿಷಯಗಳ ಬಗ್ಗೆ ವಿಶ್ವವಿದ್ಯಾನಿಲಯಗಳಲ್ಲಿ ಪಿ.ಹೆಚ್‌.ಡಿ. ವ್ಯಾಸಂಗ ಮಾಡುವ ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಗೆ 3 ವರ್ಷ ಮತ್ತು ಎಂ.ಫಿಲ್‌ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಜೆ.ಆರ್‌.ಎಫ್‌. ಮಾದರಿಯಲ್ಲಿ 2 ವರ್ಷಗಳ ಅವಧಿಗೆ ಫೆಲೋಶಿಫ್‌ ನೀಡಲು ಸರ್ಕಾರದ ತಿದ್ದುಪಡಿ ಮಾಡಿ ಮಂಜೂರಾತಿ ನೀಡಿದೆ ಎಂದು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾಧಿಕಾರಿ ಮಹಿಮೂದ್ ತಿಳಿಸಿದ್ದಾರೆ.

ಸಂಶೋಧನೆ ಕೈಗೊಳ್ಳಲು ಅಲ್ಪಸಂಖ್ಯಾತರ ಅಭ್ಯರ್ಥಿಗಳಿಗೆ ಪ್ರಥಮ ಆದ್ಯತೆಯನ್ನು ನೀಡಿ ಇನ್ನುಳಿದ ವಿಷಯಗಳಲ್ಲಿ ಅಧ್ಯಯನ ನಡೆಸುತ್ತಿರುವ ಅಲ್ಪಸಂಖ್ಯಾತರ ಅಭ್ಯರ್ಥಿಗಳನ್ನು ಸಹ ಪರಿಗಣಿಸಿ, ಮುಂದುವರೆದು ಈ ಸ೦ಶೋದನೆಗಳಿಗಾಗಿ ಆಯ್ಕೆಯಾದ ಅಭ್ಯರ್ಥಿಗಳು ಬೇರೆ ಯಾವುದೇ ಸಂಘ ಸ೦ಸ್ಥೆಗಳು/ಸರ್ಕಾರದ ವತಿಯಿಂದ ನೀಡಲಾಗುವ ವಿದ್ಯಾರ್ಥಿವೇತನದ ಸೌಲಭ್ಯಗಳನ್ನು ಪಡೆದಿದ್ದಲ್ಲಿ ಈ ಸೌಲಭ್ಯಕ್ಕೆ ಅನರ್ಹ ಎಂದು ಆದೇಶದಲ್ಲಿ ತಿಳಿಸಿದ್ದಾರೆ.

ಕಲಬುರಗಿ: ನಿವೇಶನ ಹಂಚಿಕೆ ಅರ್ಜಿ ವಿತರಣೆಗೆ ಚಾಲನೆ

ಪಿ.ಹೆಚ್‌.ಡಿ. ವ್ಯಾಸಂಗ ಮಾಡುವ ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಗೆ 3 ವರ್ಷ ಮತ್ತು ಎಂ.ಫಿಲ್‌ ವ್ಯಾಸಂಗ ಮಾಡುತ್ತಿರುವ ಅಲ್ಪಸಂಖ್ಯಾತ ಎದ್ಯಾರ್ಥಿಗಳಿಗೆ ಹಿ೦ದಿನ ಆದೇಶವನ್ನು ತಿದ್ದುಪಡಿ ಮಾಡಿ, ಪ್ರತಿ ತಿ೦ಗಳು ರೂ.25,000/-ಗಳನ್ನು ಮತ್ತು ಪ್ರತಿ ವರ್ಷಕ್ಕೆ ಒಂದು ಬಾರಿಗೆ ರೂ.10,000/-(ನಿರ್ವಹಣಾ ವೆಚ್ಚ) ಹೀಗೆ ಒಟ್ಟು ವಾರ್ಷಿಕ ರೂ.3.10ಲಕ್ಷಗಳನ್ನು 2021-22ನೇ ಸಾಲಿನಿಂದ ಜಾರಿಗೆ ಬರುವಂತೆ ನೀಡಲು ಸರ್ಕಾರದ ಆದೇಶ ಹೊರಡಿಸಲು ನಿರ್ದೇಶಕರು, ಅಲ್ಪಸಂಖ್ಯಾತರ ಕಲ್ಯಾಣ ನಿರ್ದೇಶನಾಲಯ ರವರು ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿದ್ದ ಪ್ರಸ್ತಾವನೆ ಪರಿಶೀಲಿಸಿ ಈ ಆದೇಶ ಸರ್ಕಾರದ ಉಪ ಕಾರ್ಯದರ್ಶಿ ಎಂ.ಎನ್ ಬಾನೊಳ್ಳಿ ಆದೇಶ ನೀಡಿದ್ದಾರೆ.

emedialine

Recent Posts

ಮಹಿಳಾ ಸಹಭಾಗಿತ್ವ ಇಲ್ಲದೆ ದೇಶದ ಅಭಿವೃದ್ಧಿ ಅಸಾಧ್ಯ: ಮಾತೋಶ್ರೀ ಡಾ. ಅವ್ವಾಜಿ

ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…

5 hours ago

ತೊಗರಿ ಬೆಳೆ‌ ಹಾನಿ ಪ್ರದೇಶ ವೀಕ್ಷಿಸಿದ ಶಾಸಕ ಅಲ್ಲಮಪ್ರಭು ಪಾಟೀಲ

ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…

15 hours ago

ಕಷ್ಟಗಳಿಗೆ ಕುಗ್ಗದೇ ಸವಾಲಾಗಿ ಸ್ವಿಕರಿಸಿ

ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…

15 hours ago

ಕಲಬುರಗಿ: ಹಾಸ್ಯ ಕಲಾವಿದ ರೇವಣಸಿದ್ಧ ಸ್ವಾಮಿ ದಂಪತಿಗೆ ಗೆಳೆಯರ ಬಳಗದಿಂದ ಸತ್ಕರಿಸಲಾಯಿತು.

ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…

15 hours ago

ಸಾವಿರ ಸೀರೆ ವಿತರಿಸಿ ಸಚಿವ ಪ್ರಿಯಾಂಕ್ ಜನ್ಮದಿನ ಆಚರಣೆ

  ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…

1 day ago

ಮೂರೂ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು: ಕಾರ್ಯಕರ್ತರಿಂದ ವಿಜಯೋತ್ಸವ

ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…

1 day ago