ಶಾಂತ ಕೃಷ್ಣಮೂರ್ತಿ ಫೌಂಡೇಶನ್ ವತಿಯಿಂದ ಉಚಿತ ಕೋವಿಡ್ ಲಸಿಕಾ ಶಿಬಿರ

ಬೆಂಗಳೂರು: ಶಾಂತ ಕೃಷ್ಣಮೂರ್ತಿ ಫೌಂಡೇಶನ್ ವತಿಯಿಂದ ರಾಮಮೂರ್ತಿನಗರ ವಾರ್ಡ್ ಕಲ್ಕೆರೆಯಲ್ಲಿ ಜನತೆಗೆ ಉಚಿತ ಕೋವಿಡ್ ಲಸಿಕಾ ಶಿಬಿರವನ್ನು ಹಮ್ಮಿಕೊಳ್ಳಲಾಗಿತ್ತು.
ಈ ಶಿಬಿರದಲ್ಲಿ ರಾಮಮೂರ್ತಿನಗರ ವಾರ್ಡಿನ ಜನತೆ ಸ್ವಯಂ ಪ್ರೇರಣೆಯಿಂದ ಬಂದು ಯಶಸ್ವಿಯಾಗಿ ಯಾವುದೇ ಆತಂಕವಿಲ್ಲದೆ ಲಸಿಕೆಯನ್ನು ಪಡೆದರು.
ಈ ಸಂದರ್ಭದಲ್ಲಿ ಮಾತನಾಡಿದ ಶಾಂತಕೃಷ್ಣಮೂರ್ತಿರವರು ಕೋವಿಡ್19 ಎಂಬ ಮಾರಕ ರೋಗದಿಂದ ಪಾರಾಗಲು ಸುಮಾರು 40 ವರ್ಷ ಮೇಲ್ಪಟ್ಟವರು ತಪ್ಪದೆ ತಮ್ಮ ಹತ್ತಿರದ ಆಸ್ಪತ್ರೆಗಳಲ್ಲಿ ಕೋವಿಡ್ ಲಸಿಕೆಯನ್ನು ಹಾಕಿಸಿಕೊಳ್ಳಬೇಕು,  ಎಲ್ಲರೂ ತಪ್ಪದೆ ಮಾಸ್ಕ್, ಸ್ಯಾನಿಟೈಸರ್ ಬಳಸಬೇಕು, ಸಾಮಾಜಿಕ ಅಂತರವನ್ನು ನಾವು ಎಂದಿಗೂ ಮರೆಯಬಾರದು ಎಂದರು.
ಮುಖ್ಯವಾಗಿ ಉಚಿತವಾಗಿ ಹಮ್ಮಿಕೊಳ್ಳುವ ಈ ರೀತಿಯ ಶಿಬಿರಗಳನ್ನು ಸದುಪಯೋಗ ಪಡಿಸಿಕೊಳ್ಳಬೇಕು, ಕೊರೊನ ತಡೆಗೆ ಕೊರೊನ ಲಸಿಕೆ ರಾಮಬಾಣ ಇದ್ದಂತೆ ಎಲ್ಲರೂ ಲಸಿಕೆ ಹಾಕಿಸಿಕೊಳ್ಳಿ ಎಂದು ಜನತೆಯಲ್ಲಿ ಮನವಿ ಮಾಡಿದರು.
ಈ ಶಿಬಿರದಲ್ಲಿ ಶಾಂತಕೃಷ್ಣಮೂರ್ತಿ ಫೌಂಡೇಶನ್ ಸಂಸ್ಥಾಪಕರಾದ ಶಾಂತಕೃಷ್ಣಮೂರ್ತಿ, ಹಾಗೂ ಸಂಸ್ಥಾಪಕ ಸದಸ್ಯರಾದ ಕಲ್ಕೆರೆ ಕೃಷ್ಣಮೂರ್ತಿ, ಸಿಬ್ಬಂದಿ ವರ್ಗ, ವೈದ್ಯಕೀಯ ಸಿಬ್ಬಂದಿ ಹಾಗೂ ರಾಮಮೂರ್ತಿ ನಗರ ವಾರ್ಡಿನ ಜನತೆ ಪಾಲ್ಗೊಂಡು ಶಿಬಿರವನ್ನು ಯಶಸ್ವಿಗೊಳಿಸಿದರು.
emedialine

Recent Posts

ಗುರುರಾಜ ಕರ್ಜಗಿಯನ್ನು ಶೈಕ್ಷಣಿಕ ಗುಣಮಟ್ಟ ಸುಧಾರಣಾ ಸಮಿತಿಯಿಂದ ಕೈಬಿಡಲು ಎಸ್ಎಫ್ಐ ಆಗ್ರಹ

ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…

5 hours ago

ಕಲಬುರಗಿ; ರಾಜ್ಯ ತಳವಾರ ಮಹಾಸಭಾ ಜಿಲ್ಲಾ ಘಟಕದ ನೂತನ ಪದಾಧಿಕಾರಿಗಳ ಆಯ್ಕೆ

ಕಲಬುರಗಿ; ಕನಾ೯ಟಕ ರಾಜ್ಯ ತಳವಾರ ಮಹಾಸಭಾ ಕಲಬುರಗಿ ಜಿಲ್ಲಾಧ್ಯಕ್ಷರಾದ ಚಂದ್ರಕಾಂತ ದಶರಥ ತಳವಾರ ಅವರ ಅಧ್ಯಕ್ಷತೆಯಲ್ಲಿ ಇಂದು ಆನಂದ ನಿಲಯ…

8 hours ago

ಕೈಗಾರಿಕೆ ಪ್ರದೇಶಗಳಿಗೆ ಭೇಟಿ ನೀಡಿ ಉದ್ಯಮಿಗಳ ಅಹವಾಲು ಆಲಿಸಿದ ಬಿ.ಫೌಜಿಯಾ ತರನ್ನುಮ್

ಕಲಬುರಗಿ; ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಶನಿವಾರ ಶಹಾಬಾದ ರಸ್ತೆಯಲ್ಲಿರುವ ನಂದೂರ-ಕೆಸರಟಗಿ ಮತ್ತು ಹುಮನಾಬಾದ ರಸ್ತೆಯಲ್ಲಿರುವ ಕಪನೂರ ಕೈಗಾರಿಕಾ…

8 hours ago

ಸಿಎಂ ರಾಜೀನಾಮೆ ಕೇಳುತ್ತಿರುವ ಬಿಜೆಪಿ -ಜೆಡಿಎಸ್‍ಗೆ ಯಾವುದೇ ನೈತಿಕತೆಯಿಲ್ಲ

ಶಹಾಬಾದ: ಕರ್ನಾಟಕದ ಬಹುಮತ ಸರಕಾರವನ್ನು ಬೀಳಿಸಲು ಇಲ್ಲಸಲ್ಲದ ಆರೋಪ ಮಾಡುವ ಮೂಲಕ ಸಿಎಂ ರಾಜೀನಾಮೆಗೆ ಒತ್ತಾಯ ಮಡುತ್ತಿರುವ ಬಿಜೆಪಿ ಹಾಗೂ…

8 hours ago

ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಲಿ

ಶಹಾಬಾದ:ಪ್ರತಿ ಮನೆಗೂ ನೀರು ದೊರಿಸಿಕೊಡುವ ಉದ್ದೇಶದಿಂದ ನಡೆಯುವ ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಬೇಕೆಂದು ಕಾಂಗ್ರೆಸ್ ಮುಖಂಡ ಮೃತ್ಯುಂಜಯ್ ಹಿರೇಮಠ ಹೇಳಿದರು.…

8 hours ago

ಅ.13, 14 ರಂದು ಧಮ್ಮ ಕ್ರಾಂತಿ ಉತ್ಸವ : ಪೂರ್ವಭಾವಿ ಸಭೆ

ಶಹಾಬಾದ :ನಗರದ ಬೌದ್ಧ ವಿಹಾರದಲ್ಲಿ ರವಿವಾರ ಹಮ್ಮಿಕೊಂಡ 68ನೇ ಧಮ್ಮಚಕ್ರ ಪ್ರವರ್ತನಾ ದಿನದ ಅಂಗವಾಗಿ ಕಲಬುರ್ಗಿಯಲ್ಲಿ ಅ.13 ಮತ್ತು 14…

8 hours ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420