ಕಲಬುರಗಿ ಜಿಲ್ಲೆಯಲ್ಲಿ ಕೋರೊನಾ ಸೋಂಕು ವ್ಯಾಪಕವಾಗಿ ಹರಡುತ್ತಿರುವುದರಿಂದ ಸಾರ್ವಜನಿಕರು ಜಾಗೃತಿ ವಹಿಸುವುದು ಅವಶ್ಯಕವಾಗಿದೆ ಎಂದು ಬಿಜೆಪಿ ರಾಜ್ಯ ಎಸ್ ಸಿ ಮೋರ್ಚಾ ಉಪಾಧ್ಯಕ್ಷ ಅಂಬಾರಾಯ ಅಷ್ಠಗಿ ಜನರಲ್ಲಿ ಮನವಿ ಮಾಡಿದ್ದಾರೆ.
ರೂಪಾಂತರಿ ಕೋರೊನಾ ವಿರುದ್ಧ ಜಾಗೃತಿ ಮೂಡಿಸುವ ಕೆಲಸ ಮಾಡಬೇಕಾಗಿದೆ. ಮಾಸ್ಕ ಹಾಕಿ ಕೋಳ್ಳುವುದು, ಸಾಮಾಜಿಕ ಅಂತರ ಕಾಯ್ದುಕೊಳ್ಳುವುದು ಮತ್ತು ಸಾನಿಟೈಸರ ಬಳಸುವುದು ಅತ್ಯಂತ ಅವಶ್ಯಕ.ಸರ್ಕಾರದ ಕೋವಿಡ -19 ನಿಯಮಗಳನ್ನು ಪಾಲಿಸುವುದು ಹಾಗೂ ಕೋರೊನಾ ವಿರುದ್ಧ ಜನ ಜಾಗೃತಿ ಮೂಡಿಸುವ ಮೂಲಕ ಕೋರೊನಾ ತೋಲಗಿಸಲು ಸಂಕಲ್ಪ ಮಾಡೋಣ ಎಂದು ಅಂಬಾರಾಯ ಅಷ್ಠಗಿ ಹೇಳಿದ್ದಾರೆ.