ಕಲಬುರಗಿ: ಜಿಲ್ಲೆಯಲ್ಲಿ ಕೊರೊನಾ ಚಿಕಿತ್ಸೆಗೆ ಬೇಕಾಗಿರುವ ಬ್ಯಾಡ್ ಐಸಿಯು ಆಕ್ಸಿಜನ್ ರೆಮ್ಡೆಸಿವಿರ್ ಇಂಜೆಕ್ಷನ್ ಕೊರತೆ ನಿವಾರಿಸಬೇಕೆಂದು ಒತ್ತಾಯಿಸಿ ಇಂದು ಸಂಪತ್ ಜೆ ಹಿರೇಮಠ ನೇತೃತ್ವದ ತಂಡ ಜಿಲ್ಲಾಧಿಕಾರಿ ಮೂಲಕ ರಾಜ್ಯದ ಆರೋಗ್ಯ ಸಚಿವರಿಗೆ ಮನವಿ ಸಲ್ಲಿಸಿ ಒತ್ತಾಯಿಸಿದ್ದಾರೆ.
ರೆಮ್ಡೆಸಿವಿರ್ ಇಂಜೆಕ್ಷನ್ ಸರಕಾರ ನಿಗದಿಪಡಿಸಿದ ದರಕ್ಕಿಂತ ದುಪ್ಪಟ್ಟು ದರದಲ್ಲಿ ಕಾಳಸಂತೆಯಲ್ಲಿ ಮಾರಾಟ ಮಾಡುತ್ತಿದ್ದು ಇದರ ಬಗ್ಗೆ ಜಿಲ್ಲಾ ಆರೋಗ್ಯ ಇಲಾಖೆ ಮತ್ತು ಜಿಲ್ಲೆ ಇಲಾಖೆ ಈ ಸಮಸ್ಯೆ ಬಗೆಹರಿಸುವ ನಿಟ್ಟಿನಲ್ಲಿ ಅಗತ್ಯ ಕ್ರಮ ಕೈಗೊಂಡು, ಇಂಜೆಕ್ಷನ್ ಕಾಳಸಂತೆಯಲ್ಲಿ ಮಾರಾಟ ಮಾಡುತ್ತಿರುವವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದ್ದಾರೆ.
ಕರ್ನಾಟಕ ಗಡಿ ಅಭಿವೃದ್ಧಿ ಪ್ರಾಧಿಕಾರ ಮಹಾರಾಷ್ಟ್ರ ಕನ್ನಡಿಗರ ಬೆಂಬಲಕ್ಕೆ ಸದಾ ನಿಲ್ಲುತ್ತದೆ: ಡಾ. ಸಿ.ಸೋಮಶೇಖರ್
ಸೂಕ್ತ ಸಮಯದಲ್ಲಿ ಚಿಕಿತ್ಸೆ ಸಿಗಬೇಕು ಎಂದು ಆರೋಗ್ಯ ಇಲಾಖೆ ಮತ್ತು ಜಿಲ್ಲಾ ಇಲಾಖೆಯ ಅಧಿಕಾರಿ ಹಾಗೂ ಸಚಿವರು ಆದೇಶಿಸಬೇಕೆಂದು ಒತ್ತಾಯಿಸಿದ್ದಾರೆ.
ಈ ವೇಳೆಯಲ್ಲಿ ಸಂತೋಷ್ ಚೌದರಿ, ಅನಿಲ್ ಗಾಯಕವಾಡ, ಕನಿಷ್ಕ ಧನಿ ಇದ್ದರು.