ಕಲಬುರಗಿ: ರಾಜ್ಯ ವಿದ್ಯಾರ್ಥಿ ವೇತನ ( student scholarship portal) SSP ಮೆಟ್ರಿಕ್ ನಂತರದ ವಿದ್ಯಾರ್ಥಿಗಳಿಗೆ ಹಿಂದುಳಿದ ವರ್ಗಗಳ ಇಲಾಖೆ ವತಿಯಿಂದ ನೀಡುವ ಶಿಷ್ಯವೇತನಕ್ಕೆ ಅರ್ಜಿ ಸಲ್ಲಿಸಲು( ಏಪ್ರಿಲ್ 20) ಇಂದು ಕೊನೆಯ ದಿನವಾಗಿದ್ದು, ಅರ್ಜಿ ಸಲ್ಲಿಕೆ ದಿನಾಂಕ ಮುಂದೂಡಲು ಮತ್ತು ಸರ್ವರ್ ಸಮಸ್ಯೆ ಪರಿಹರಿಸಲು ಎಐಡಿವೈಓ ಜಿಲ್ಲಾ ಸಮಿತಿ ಆಗ್ರಹಿಸಿದೆ.
ಆದರೆ ಬಹುತೇಕ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಲು ಸಾಧ್ಯವಾಗಿಲ್ಲ. ಏಕೆಂದರೆ ಸೈಟ್ ಬ್ಯುಸಿ, ಸರ್ವರ ಸಮಸ್ಯೆಯಾಗಿ ವಿದ್ಯಾರ್ಥಿಗಳು ತೊಂದರೆ ಅನುಭವಿಸುತ್ತಿದ್ದಾರೆ.
ಅದೇ ರೀತಿ ಖಾತೆಯನ್ನು ರಚಿಸುವಾಗ ಸರಿಯಾದ ಸಮಯಕ್ಕೆ ಓಟಿಪಿ ಬರುತ್ತಿಲ್ಲ. ಹಾಗೂ ಸರ್ವರ್ ಸಮಸ್ಯೆ ಎದುರಾಗುತ್ತಿದೆ. ಮತ್ತು ಕೆಲವೊಂದು ವಿದ್ಯಾರ್ಥಿಗಳಿಗೆ ಖಾಸಗಿ ಕೋಟಾದಡಿ ಪ್ರವೇಶ ಪಡೆದ ವಿದ್ಯಾರ್ಥಿಗಳಿಗೆ ಅವರ ವಿಷಯ ಆಯ್ಕೆ ಮಾಡಿಕೊಳ್ಳಲು ಆಪ್ಷನ್ಸ್ ಬರುತ್ತಿಲ್ಲ ಎಂದು ಹಲವಾರು ವಿದ್ಯಾರ್ಥಿಗಳು ಅಳಲು ತೋಡಿಕೊಂಡಿದ್ದಾರೆ.
ಹೀಗಾಗಿ ಸಂಬಂಧಪಟ್ಟಂತ ಹಿಂದುಳಿದ ವರ್ಗಗಳ ಇಲಾಖೆ ಈ ಸಮಸ್ಯೆಯ ನ್ನು ಗಂಭೀರವಾಗಿ ಪರಿಗಣಿಸಿ ಅರ್ಹ ಬಹುತೇಕ ವಿದ್ಯಾರ್ಥಿಗಳಿಗೆ ಮತ್ತೆ ಶಿಷ್ಯವೇತನಕ್ಕೆ ಅರ್ಜಿ ಸಲ್ಲಿಸಲು ಅವಕಾಶ ನೀಡಿ ದಿನಾಂಕ ಮುಂದೂಡಬೇಕು ಮತ್ತು ಸರ್ವರ ಸಮಸ್ಯೆ ಬಗೆಹರಿಸಿ ಅರ್ಜಿ ಸಲ್ಲಿಸಲು ಸಮಯ ಅವಕಾಶ ನೀಡಬೇಕೆಂದು ಆಲ್ ಇಂಡಿಯಾ ಡೆಮಾಕ್ರೆಟಿಕ್ ಯೂತ್ ಆರ್ಗನೈಸೇಶನ್ (ಎಐಡಿವೈಓ) ಜಿಲ್ಲಾ ಉಪಾಧ್ಯಕ್ಷ ಭೀಮಾಶಂಕರ್ ಪಾಣೇಗಾಂವ್ ಅವರು ಈ ಮೂಲಕ ಮನವಿ ಮಾಡಿದ್ದಾರೆ.