ಕಲಬುರಗಿ: ದೇಶದಲ್ಲಿ ಕರೋನಾ ವೈರಸ್ (ಕೋವಿಡ್-19) ಸಾಂಕ್ರಾಮಿಕವಾಗಿ ಹರಡುತ್ತಿರುವ ಹಿನ್ನಲೆಯಲ್ಲಿ ದಿವ್ಯಾಂಗ ನೌಕರರು ಕಛೇರಿಗೆ ಹಾಜರಾಗಿ ಕರ್ತವ್ಯ ನಿರ್ವಹಿಸುವುದು ಕಷ್ಟ ಸಾಧ್ಯವೆಂದು ಪರಿಗಣಿಸಿ ಹಾಗೂ ಸೋಂಕು ನಿಯಂತ್ರಣಕ್ಕಾಗಿ ಮುಂಜಾಗ್ರತಾ ಕ್ರಮವಾಗಿ ದಿವ್ಯಾಂಗ ನೌಕರರ ಹಿತದೃಷ್ಟಿಯಿಂದ ಭಾರತ ಸರಕಾರದ ಸಿಬ್ಬಂದಿ, ಸಾರ್ವಜನಿಕ ಕುಂದುಕೊರತೆ ಮತ್ತು ಪಿಂಚಣಿ ಸಚಿವಾಲಯ, ಡಿಪಾರ್ಟ್ಮೆಂಟ್ ಆಫ್ ಪರ್ಸ್ನಲ್ ಮತ್ತು ಟ್ರೈನಿಂಗ್ ಮಾರ್ಗಸೂಚಿಗಳನ್ವಯ ಕೇಂದ್ರ ಸರ್ಕಾರದ ಎಲ್ಲಾ ಇಲಾಖೆಗಳಲ್ಲಿ ಸೇವೆ ಸಲ್ಲಿಸುತ್ತಿರುವ ದಿವ್ಯಾಂಗ ಅಧಿಕಾರಿಗಳು/ನೌಕರರು ಮನೆಯಿಂದಲೇ ಕಛೇರಿ ಕಾರ್ಯ ನಿರ್ವಹಿಸಲು ಆದೇಶಿಸಿರುತ್ತದೆ.
ಕೇಂದ್ರ ಸರ್ಕಾರದ ಎಲ್ಲಾ ಇಲಾಖೆಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ ದಿವ್ಯಾಂಗ ನೌಕರರು ಇದರ ಸದುಪಯೋಗ ಪಡೆದುಕೊಳ್ಳಬೇಕು ಹಾಗೂ ಕರೋನಾ ಹರಡದಂತೆ ಸರಕಾರ ನಿರ್ದೇಶಿಸಿದ ಎಲ್ಲಾ ಮುಂಜಾಗ್ರತಾ ಕ್ರಮಗಳನ್ನು ತಪ್ಪದೇ ಪಾಲಿಸಬೇಕೆಂದು ಡಿಸೆಬಲ್ಡ ಹೆಲ್ಪಲೈನ್ ಪೌಂಡೆಷನನ ರಾಜ್ಯ ಸಂಯೋಜಕರಾದ ಬಸವರಾಜ ಹೆಳವರ ಯಾಳಗಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…
ಚಿಂಚೋಳಿ: ಸಿದ್ದಶ್ರೀ ಕಾರ್ಖಾನೆ ಪ್ರಾರಂಭ ಮಾಡಲು ರೈತರು ಹಗಲು ರಾತ್ರಿ ಎನ್ನದೆ ಬಸವೇಶ್ವರ ಉತ್ತರ ಬಳಿ ಧರಣಿಯಲ್ಲಿ ಹೋರಾಟ ಮಾಡುತ್ತಿದ್ದು.…
ಕಲಬುರಗಿ: ನವೆಂಬರ್ 29 ರಿಂದ 2 ಡಿಸೇಂಬರ್ ವರೆಗೆ ತಮಿಳುನಾಡಿನ ಅಲಗಪ್ಪ ವಿಶ್ವವಿದ್ಯಾಲಯ ಕರೈಕುಡಿಯಲ್ಲಿ ನಡೆಯುವ ದಕ್ಷಿಣ ಭಾರತ ಅಂತರ…
ಕಲಬುರಗಿ: ನಗರದ ವಾರ್ಡ ನಂ.51.ರ ಜೇವರ್ಗಿ ಕಾಲೋನಿ ವಾಟರ್ ಟ್ಯಾಂಕ್ ಹತ್ತಿರದ ಉದ್ಯವನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ ಖರ್ಗೆ…