ಆಳಂದ: ತಾಲೂಕಿನಲ್ಲಿ ಕೋರೋನಾ ಪ್ರಕರಣಗಳು ದಿನೇ ದಿನೇ ವ್ಯಾಪಕವಾಗಿ ಪತ್ತೆಯಾಗುತ್ತಿರುವುದರಿಂದ ಮುಂಜಾಗೃತಾ ಕ್ರಮಕ್ಕಾಗಿ ಅಗತ್ಯ ತುರ್ತು ಸೌಲಭ್ಯಗಳನ್ನು ಒದಗಿಸಬೇಕು ಎಂದು ಆಳಂದ ಶಾಸಕ ಸುಭಾಷ್ ಆರ್ ಗುತ್ತೇದಾರ ವೈದ್ಯಕೀಯ ಶಿಕ್ಷಣ ಸಚಿವರಿಗೆ ಮನವಿ ಮಾಡಿದ್ದಾರೆ.
ಈ ಕುರಿತು ವೈದ್ಯಕೀಯ ಶಿಕ್ಷಣ ಸಚಿವ ಡಾ. ಸುಧಾಕರ ಅವರಿಗೆ ಪತ್ರ ಬರೆದಿರುವ ಅವರು, ಆಳಂದ ತಾಲೂಕಿನ ಆಳಂಗಾ ಗ್ರಾಮದಲ್ಲಿ ಒಂದೇ ದಿನ ೬೦ ಪ್ರಕರಣಗಳು ಪತ್ತೆಯಾಗಿವೆ ಇದು ಜನರಲ್ಲಿ ಆತಂಕವನ್ನುಂಟು ಮಾಡಿದೆ ಅಲ್ಲದೇ ಆಳಂದ ತಾಲೂಕು ಪ್ರದೇಶವು ನೆರೆಯ ಮಹಾರಾಷ್ಟ್ರದೊಂದಿಗೆ ೩ ಸ್ಥಳಗಳಲ್ಲಿ ಗಡಿಯನ್ನು ಹಂಚಿಕೊಳ್ಳುತ್ತದೆ ಇದರಿಂದ ಕ್ಷೇತ್ರದ ಸಾರ್ವಜನಿಕರು ತೀವ್ರ ಆತಂಕಕ್ಕೆ ಒಳಗಾಗಿದ್ದಾರೆ ಎಂದು ತಿಳಿಸಿದ್ದಾರೆ.
ಜಿ.ವೆಂಕಟಸುಬ್ಬಯ್ಯ, ಎಲ್.ಬಿ.ಕೆ. ಆಲ್ದಾಳರು ಮರೆಯಲಾಗದ ಮಹಾನುಭವರು: ಡಾ. ಸತ್ಯಂಪೇಟೆ
ಆಳಂದ ತಾಲೂಕಿನಲ್ಲಿ ಕೋವಿಡ್ ರೋಗಿಗಳ ತುರ್ತು ಚಿಕಿತ್ಸೆಗಾಗಿ ವೆಂಟಿಲೆಟರ್, ಆಕ್ಸಿಜನ್ ಒದಗಿಸಿ, ಆಧುನಿಕ ಸೌಲಭ್ಯವುಳ್ಳ ಬೆಡ್‌ಗಳನ್ನು ಹೆಚ್ಚಿಸಿ ಹೆಚ್ಚುವರಿ ವೈದ್ಯಾಧಿಕಾರಿಗಳು ಹಾಗೂ ಸಿಬ್ಬಂದಿಗಳನ್ನು ಕೂಡಲೇ ನೇಮಿಸುವಂತೆ ಮನವಿ ಮಾಡಿದ್ದಾರೆ.
ಕೇರ್ ಸೆಂಟರ್ ಆರಂಭ: ಕೋರೋನಾ ಸೋಂಕಿತರಿಗೆ ಚಿಕಿತ್ಸೆ ನೀಡಲು ಆಳಂದ ಪಟ್ಟಣದ ಡಾ. ಬಿ ಆರ್ ಅಂಬೇಡ್ಕರ್ ವಸತಿ ಶಾಲೆಯಲ್ಲಿ ಕೋವಿಡ್ ಕೇರ್ ಸೆಂಟರ್ ಆರಂಭಿಸಲಾಗಿದೆ ಇಲ್ಲಿ ೭೫ ಜನರಿಗೆ ಚಿಕಿತ್ಸೆ ನೀಡಬಹುದಾಗಿದೆ. ತುರ್ತಾಗಿ ಅಗತ್ಯವಿರುವವರು ಈ ಕೇಂದ್ರದ ಉಪಯೋಗ ಮಾಡಿಕೊಳ್ಳಬೇಕು ಎಂದು ಹೇಳಿದ್ದಾರೆ.
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…
ಚಿಂಚೋಳಿ: ಸಿದ್ದಶ್ರೀ ಕಾರ್ಖಾನೆ ಪ್ರಾರಂಭ ಮಾಡಲು ರೈತರು ಹಗಲು ರಾತ್ರಿ ಎನ್ನದೆ ಬಸವೇಶ್ವರ ಉತ್ತರ ಬಳಿ ಧರಣಿಯಲ್ಲಿ ಹೋರಾಟ ಮಾಡುತ್ತಿದ್ದು.…
ಕಲಬುರಗಿ: ನವೆಂಬರ್ 29 ರಿಂದ 2 ಡಿಸೇಂಬರ್ ವರೆಗೆ ತಮಿಳುನಾಡಿನ ಅಲಗಪ್ಪ ವಿಶ್ವವಿದ್ಯಾಲಯ ಕರೈಕುಡಿಯಲ್ಲಿ ನಡೆಯುವ ದಕ್ಷಿಣ ಭಾರತ ಅಂತರ…
ಕಲಬುರಗಿ: ನಗರದ ವಾರ್ಡ ನಂ.51.ರ ಜೇವರ್ಗಿ ಕಾಲೋನಿ ವಾಟರ್ ಟ್ಯಾಂಕ್ ಹತ್ತಿರದ ಉದ್ಯವನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ ಖರ್ಗೆ…