ಯಾದಗಿರಿ: ಟಂಟಂ ವಾಹನದಲ್ಲಿ ಜಮೀನಿನಲ್ಲಿ ಕೂಲಿ ಕೆಲಸಕ್ಕೆ ತೆರಳುತ್ತಿದ ಟಂಟಂ ಮತ್ತು ಬೂದಿ ಟ್ಯಾಂಕರ್ ಮದ್ಯ ಮುಖಾಮುಕಿ ಡಿಕ್ಕಿ ಸಂಭವಿಸಿ ಐವರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಶಹಾಪುರ ತಾಲೂಕಿನ ಕೊಳ್ಳೂರು ಬಳಿಯ ರಾಜ್ಯ ಹೆದ್ದಾರಿಯಲ್ಲಿ ನಡೆದಿದೆ.
ಕಲಬುರಗಿ: ಮಾರಕಾಸ್ತ್ರಗಳಿಂದ ಕೊಚ್ಚಿ ವ್ಯಕ್ತಿಯೋರ್ವನ ಕೊಲೆ
ಮೃತರೆಲ್ಲರು ವಡಗೇರ ತಾಲೂಕಿನ ಮುನಮುಟಗಿ ಗ್ರಾಮಸ್ಥರಾದ ಅಯ್ಯಮ್ಮ (60), ಶರಣಮ್ಮ (40), ಕಾಸೀಂಬೀ (40), ಭೀಮಬಾಯಿ (40) ಹಾಗೂ ದೇವಿಂದ್ರಮ್ಮ (70) ಮೃತಪಟ್ಟ ದುರ್ದೈವಿಗಳು. ಇಂದು ಟಂಟಂ ವಾಹನದಲ್ಲಿ ಜಮೀನಿನಲ್ಲಿ ಕೂಲಿ ಕೆಲಸಕ್ಕೆ ತೆರಳುತ್ತಿದರು ಎಂದು ತಿಳಿದುಬಂದಿದೆ.
ಕೆಲವರ ಸ್ಥಿತಿ ಗಂಭೀರವಾಗಿದ್ದು, ಗಾಯಾಳುಗಳನ್ನ ಸ್ಥಳೀಯ ಆಸ್ಪತ್ರೆಗೆ ರವಾನಿಸಿ ಚಿಕಿತ್ಸೆ ನೀಡಲಾಗುತ್ತದಿದೆ. ಸ್ಥಳದಲ್ಲಿ ಸಂಬಂಧಿಕರ ಆಕ್ರಂದನ ಮುಗಿಲು ಮುಟ್ಟಿದೆ.
ರೈತರಿಗೆ ಕೋವಿಡ್ ತರಹ ಕಾಡುತ್ತಿರುವ ಬಿಜೆಪಿ ಸರ್ಕಾರ: ಸಿದ್ದುಗೌಡ ಆರೋಪ
ಶಹಾಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.