ಪ್ರಜಾಪ್ರಭುತ್ವ ವ್ಯವಸ್ಥೆಯ ಸಫಲತೆಯಲ್ಲಿ ಆಡಳಿತ ವರ್ಗದ ಪಾತ್ರ ಅಮೋಘ

ಕಲಬುರಗಿ: ದೇಶದ ಎಲ್ಲಾ ನಾಗರಿಕರಿಗೂ ಪ್ರಜಾಪ್ರಭುತ್ವದ ಫಲ ದೊರೆತು ಕಲ್ಯಾಣ ರಾಷ್ಟ್ರ ನಿರ್ಮಾಣವಾಗಬೇಕು. ಅದಕ್ಕಾಗಿ ಸರ್ಕಾರ ಅನೇಕ ಯೋಜನೆ, ಕಾರ್ಯಕ್ರಮಗಳನ್ನು ಜಾರಿಗೊಳಿಸುತ್ತದೆ. ಅವುಗಳನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸುವ ಮೂಲಕ, ನೈಜ ಫಲಾನುಭವಿಗೆ ಸೌಕರ್ಯಗಳನ್ನು ದೊರಕಿಸಿಕೊಡುವ ಮೂಲಕ ಪ್ರಜಾಪ್ರಭುತ್ವ ವ್ಯವಸ್ಥೆಯ ಸಫಲತೆಗೆ ಆಡಳಿತ ವರ್ಗದ ಕೊಡುಗೆ ಅಮೋಘವಾಗಿದೆಯೆಂದು ಐಎಎಸ್ ಅಧಿಕಾರಿ, ಮಹಾನಗರ ಪಾಲಿಕೆ ಆಯುಕ್ತ ಲೋಖಂಡೆ ಸ್ನೇಹಲ್ ಸುಧಾರಕ ಅಭಿಮತ ವ್ಯಕ್ತಪಡಿಸಿದರು.

ನಗರದ ಮಹಾನಗರ ಪಾಲಿಕೆಯ ಆಡಳಿತ ಕಚೇರಿಯಲ್ಲಿ ’ಬಸವೇಶ್ವರ ಸಮಾಜ ಸೇವಾ ಬಳಗ’ ಹಾಗೂ ’ಸುಜಯ್ ಶಿಕ್ಷಣ ಮತ್ತು ಕಲ್ಯಾಣ ಸಂಸ್ಥೆ’ ಇವುಗಳ ವತಿಯಿಂದ ಬುಧವಾರ ಸರಳವಾಗಿ ಹಮ್ಮಿಕೊಳ್ಳಲಾಗಿದ್ದ ’ರಾಷ್ಟ್ರೀಯ ನಾಗರಿಕ ಸೇವಾ ದಿನಾಚರಣೆ’ ಕಾರ್ಯಕ್ರಮದಲ್ಲಿ ಸತ್ಕಾರ ಸ್ವೀಕರಿಸಿ ಅವರು ಮಾತನಾಡುತ್ತಿದ್ದರು.

ಶಹಾಬಾದ: ಅಗಲಿದ ಹಿರಿಯ ಸಹಿತಿಗಳಿಗೆ ನುಡಿನಮನ

ಆಡಳಿತ ವರ್ಗದ ಅಧಿಕಾರಿಗಳು ಅತ್ಯಂತ ದಕ್ಷ, ಪಾರದರ್ಶಕವಾಗಿ ಕಾರ್ಯನಿರ್ವಹಿಸುವುದು ಅತ್ಯಂತ ಅವಶ್ಯಕವಾಗಿದೆ. ಸರ್ಕಾರ ಯಶಸ್ಸು ಮತ್ತು ಅಪಯಶಸ್ಸು ಆಡಳಿತ ವರ್ಗದ ಅಧಿಕಾರಿಗಳ ಕಾರ್ಯವೈಖರಿಯ ಮೇಲೆ ನಿಂತಿದೆ. ಅಧಿಕಾರಿಗಳು ಪರಿಣಾಮಕಾರಿ ನಿರ್ವಹಣೆ, ಜವಾಬ್ದಾರಿ, ಮುಂದಾಳತ್ವದಲ್ಲಿ ಎಲ್ಲಾ ನೌಕರರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಕೆಲಸ ಮಾಡಿದರೆ, ಖಂಡಿತವಾಗಿಯೂ ಸಾರ್ವಜನಿಕರಿಗೆ ಸೂಕ್ತ ಕಾಲಕ್ಕೆ ಅವರಿಗೆ ಸೇವೆಯನ್ನು ಒದಗಿಸಲು ಸಾಧ್ಯವಾಗುತ್ತದೆಯೆಂದು ಮಾರ್ಮಿಕವಾಗು ನುಡಿದರು.

ಮಹಾನಗರ ಪಾಲಿಕೆಯ ಸಾರ್ವಜನಿಕ ಸಂಪರ್ಕ ಅಧಿಕಾರಿ ಡಾ.ನಾಗರತ್ನ ದೇಶಮಾನ್ಯೆ ಮಾತನಾಡಿ, ಸುರೇಂದ್ರನಾಥ ಬ್ಯಾನರ್ಜಿಯವರು ನಾಗರಿಕ ಆಡಳಿತ ವರ್ಗದ ಸಂಘವನ್ನು ಸ್ಥಾಪಿಸಿ, ದೇಶದ ಸ್ವಾತಂತ್ರ್ಯಕ್ಕಾಗಿ ಸೇವೆಯನ್ನು ಸಲ್ಲಿಸಿದ್ದಾರೆ. ಆಡಳಿತ ಅಧಿಕಾರಿಗಳು ಜನಸಾಮಾನ್ಯರ ಧ್ವನಿಯಾಗಿ ಸೇವೆ ಸಲ್ಲಿಸಬೇಕೆಂಬ ಮಾತು ಪ್ರಸ್ತುತವಾಗಿದೆ. ಅಂತಹ ಮಹನೀಯರ ಆದರ್ಶ ನಮ್ಮೆಲ್ಲರಿಗೂ ದಾರಿದೀಪವಾಗಿದೆಯೆಂದರು.

ರೈತರಿಗೆ ಕೋವಿಡ್ ತರಹ ಕಾಡುತ್ತಿರುವ ಬಿಜೆಪಿ ಸರ್ಕಾರ: ಸಿದ್ದುಗೌಡ ಆರೋಪ

ಕಾರ್ಯಕ್ರಮದಲ್ಲಿ ಪ್ರಮುಖರಾದ ಎಚ್.ಬಿ.ಪಾಟೀಲ, ಸುನೀಲಕುಮಾರ ವಂಟಿ, ನರಸಪ್ಪ ಬಿರಾದಾರ ದೇಗಾಂವ, ಬಸವರಾಜ ಎಸ್.ಪುರಾಣೆ ಸೇರಿದಂತೆ ಪಾಲಿಕೆಯ ಸಿಬ್ಬಂದಿ ಪಾಲ್ಗೊಂಡಿದ್ದರು.

emedialine

Recent Posts

ಗುರುರಾಜ ಕರ್ಜಗಿಯನ್ನು ಶೈಕ್ಷಣಿಕ ಗುಣಮಟ್ಟ ಸುಧಾರಣಾ ಸಮಿತಿಯಿಂದ ಕೈಬಿಡಲು ಎಸ್ಎಫ್ಐ ಆಗ್ರಹ

ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…

8 hours ago

ಕಲಬುರಗಿ; ರಾಜ್ಯ ತಳವಾರ ಮಹಾಸಭಾ ಜಿಲ್ಲಾ ಘಟಕದ ನೂತನ ಪದಾಧಿಕಾರಿಗಳ ಆಯ್ಕೆ

ಕಲಬುರಗಿ; ಕನಾ೯ಟಕ ರಾಜ್ಯ ತಳವಾರ ಮಹಾಸಭಾ ಕಲಬುರಗಿ ಜಿಲ್ಲಾಧ್ಯಕ್ಷರಾದ ಚಂದ್ರಕಾಂತ ದಶರಥ ತಳವಾರ ಅವರ ಅಧ್ಯಕ್ಷತೆಯಲ್ಲಿ ಇಂದು ಆನಂದ ನಿಲಯ…

10 hours ago

ಕೈಗಾರಿಕೆ ಪ್ರದೇಶಗಳಿಗೆ ಭೇಟಿ ನೀಡಿ ಉದ್ಯಮಿಗಳ ಅಹವಾಲು ಆಲಿಸಿದ ಬಿ.ಫೌಜಿಯಾ ತರನ್ನುಮ್

ಕಲಬುರಗಿ; ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಶನಿವಾರ ಶಹಾಬಾದ ರಸ್ತೆಯಲ್ಲಿರುವ ನಂದೂರ-ಕೆಸರಟಗಿ ಮತ್ತು ಹುಮನಾಬಾದ ರಸ್ತೆಯಲ್ಲಿರುವ ಕಪನೂರ ಕೈಗಾರಿಕಾ…

11 hours ago

ಸಿಎಂ ರಾಜೀನಾಮೆ ಕೇಳುತ್ತಿರುವ ಬಿಜೆಪಿ -ಜೆಡಿಎಸ್‍ಗೆ ಯಾವುದೇ ನೈತಿಕತೆಯಿಲ್ಲ

ಶಹಾಬಾದ: ಕರ್ನಾಟಕದ ಬಹುಮತ ಸರಕಾರವನ್ನು ಬೀಳಿಸಲು ಇಲ್ಲಸಲ್ಲದ ಆರೋಪ ಮಾಡುವ ಮೂಲಕ ಸಿಎಂ ರಾಜೀನಾಮೆಗೆ ಒತ್ತಾಯ ಮಡುತ್ತಿರುವ ಬಿಜೆಪಿ ಹಾಗೂ…

11 hours ago

ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಲಿ

ಶಹಾಬಾದ:ಪ್ರತಿ ಮನೆಗೂ ನೀರು ದೊರಿಸಿಕೊಡುವ ಉದ್ದೇಶದಿಂದ ನಡೆಯುವ ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಬೇಕೆಂದು ಕಾಂಗ್ರೆಸ್ ಮುಖಂಡ ಮೃತ್ಯುಂಜಯ್ ಹಿರೇಮಠ ಹೇಳಿದರು.…

11 hours ago

ಅ.13, 14 ರಂದು ಧಮ್ಮ ಕ್ರಾಂತಿ ಉತ್ಸವ : ಪೂರ್ವಭಾವಿ ಸಭೆ

ಶಹಾಬಾದ :ನಗರದ ಬೌದ್ಧ ವಿಹಾರದಲ್ಲಿ ರವಿವಾರ ಹಮ್ಮಿಕೊಂಡ 68ನೇ ಧಮ್ಮಚಕ್ರ ಪ್ರವರ್ತನಾ ದಿನದ ಅಂಗವಾಗಿ ಕಲಬುರ್ಗಿಯಲ್ಲಿ ಅ.13 ಮತ್ತು 14…

11 hours ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420