ರೆಮ್ ಡಿಸಿವಿರ್ ಕಾಳಸಂತೆಯಲ್ಲಿ ಮಾರಾಟ ತಡೆಗಟ್ಟಲು ಆಗ್ರಹ

0
110

ಕಲಬುರಗಿ: ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಕೊರೊನಾ ಸೋಂಕು ಚಿಕಿತ್ಸೆಗೆ ಸಂಜೀವಿನಿಯಾದ ರೆಮ್ ಡಿಸಿವಿರ್ ಔಷಧ ರಾಜಾರೋಷವಾಗಿ ಕಾಳಸಂತೆಯಲ್ಲಿ ಮಾರಾಟವಾಗುತ್ತಿದೆ.ಹಾಗೂ ಹೊರರಾಜ್ಯಗಳಿಗೆ ರವಾನೆ ಮಾಡುತ್ತಿರುವುದನ್ನು ಕೂಡಲೆ ಸರಕಾರ ಇದನ್ನು ತಡೆಗಟ್ಟಬೇಕು ಎಂದು ರಾಜ್ಯ ಭ್ರಷ್ಟಾಚಾರ ನಿರ್ಮೂಲನಾ ದಳ ರಾಜ್ಯಾಧ್ಯಕ್ಷ ಡಾ.ಎ.ಎಸ್.ಭದ್ರಶೆಟ್ಟಿ ಆಗ್ರಹಿಸಿದ್ದಾರೆ.

ರಾಜ್ಯದಲ್ಲಿ ಎರಡು ಕಂಪನಿಗಳು ಈಗಾಗಲೇ ಉತ್ಪಾದನೆ ಮಾಡುತ್ತಿವೆ.ಆದರೆ ಹೊರ ರಾಜ್ಯಗಳಿಗೆ ಹೆಚ್ಚಿನ ಪ್ರಮಾಣದಲ್ಲಿ ದುಬಾರಿ ಬೆಲೆಗೆ ಮಾರಾಟ ಮಾಡುತ್ತಿರುವುದು ವಿಷಾದನೀಯ.ಇದರಿಂದ ರಾಜ್ಯದಲ್ಲಿ ದಾಸ್ತಾನು ಪ್ರಮಾಣ ಕಡಿಮೆ ಕಡಿಮೆಯಾಗುತ್ತಿರುವುದರಿಂದ ದುಬಾರಿ ಬೆಲೆಗೆ ಕಾಳಸಂತೆಯಲ್ಲಿ ಮಾರಾಟವಾಗುತ್ತಿದೆ. ಇಷ್ಷೆ ಅಲ್ಲದೆ ನಕಲಿ ರೆಮ್ ಡಿಸಿವಿರ್ ಔಷಧವನ್ನು ಮಾರಾಟ ಮಾಡಲಾಗುತ್ತಿದೆ.

Contact Your\'s Advertisement; 9902492681

ಇದರ ಹಿಂದೆ ದೊಡ್ಡ ಜಾಲವೇ ಇದ್ದು ಪೊಲೀಸ್ ಇಲಾಖೆಯ ಕಣ್ಣು ತಪ್ಪಿಸಿ ನಡೆಯುತ್ತಿರುವುದು ದುರಂತ.ಜನರ ಜೀವ ಜೋತೆ ಚಲ್ಲಾಟವಾಡುತ್ತಿರುವ ಜಾಲವನ್ನು ಪತ್ತೆ ಹಚ್ಚಿ ಕಾಳಸಂತೆಕೋರರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು.ಇಲ್ಲದಿದ್ದರೆ ಬೀದಿಗಿಳಿದು ಹೋರಾಟ ಮಾಡಬೇಕಾಗುತ್ತದೆ ಎಂದು ಅವರು ಎಚ್ಚರಿಸಿದ್ದಾರೆ.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here