ಕೋಲಾರ: ಜಿಲ್ಲೆ ಮತ್ತು ತಾಲೂಕಿನ ನರಸಾಪುರ ಗ್ರಾಮದಲ್ಲಿ ಡಾ.ಬಿ. ಆರ್. ಅಂಬೇಡ್ಕರ್ ನಗರದ ವೃತ್ತದಲ್ಲಿ ಸರಳವಾಗಿ ಶ್ರೀರಾಮನವಮಿ ಆಚರಣೆ ಮಾಡಲಾಯಿತು. ಮಹಾಮಾರಿ ಕೊರೊನಾ ಎರಡನೇ ಅಲೆ ಮೊದಲ ಅಲೆಗಿಂತಲೂ ಭೀತಿ ಹುಟ್ಟಿಸಿದ್ದು, ಜನರನ್ನು ಆತಂಕಕ್ಕೆ ದೂಡಿದೆ. ಇದರ ನಡುವೆಯು ಜನರು ಶ್ರೀ ರಾಮನವಮಿ ಹಬ್ಬವನ್ನು ಮನೆಗಳಲ್ಲಿಯೇ ದೇವರಿಗೆ ಪೂಜೆ ಸಲ್ಲಿಸಿ ಸರಳವಾಗಿ ಆಚರಿಸಿದರು.
ಅಖಿಲ ಭಾರತ ಡಾ.ಬಿ.ಆರ್ ಅಂಬೇಡ್ಕರ್ ಯುವ ಬ್ರಿಗೇಡ್ ನರಸಾಪುರ ವತಿಯಿಂದ ಸರಳವಾಗಿ ಶ್ರೀರಾಮನವಮಿ ಆಚರಿಸಿ ಜನರಿಗೆ ಪಾನಕ, ಕೋಸಂಬರಿ, ಮಜ್ಜಿಗೆಯನ್ನು ನೀಡಲಾಯಿತು.
ಈ ಸಂದರ್ಭದಲ್ಲಿ ಮಾತನಾಡಿದ ಅಖಿಲ ಭಾರತ ಡಾ ಬಿ ಆರ್ ಅಂಬೇಡ್ಕರ್ ಯುವ ಬ್ರಿಗೇಡ್ ಯುವ ಮುಖಂಡರಾದ ಹರೀಶ್ ರವರು
ಶ್ರೀ ರಾಮ ನವಮಿ ಬಂತೆಂದರೆ ಎಲ್ಲೆಲ್ಲೂ ಜನರಿಗೆ ನೀರು ಮಜ್ಜಿಗೆ ಪಾನಕ, ಹೆಸರು ಬೇಳೆ ಹಂಚಿ ಸಂಭ್ರಮದಿಂಧ ಆಚರಿಸಲಾಗುತ್ತಿತ್ತು, ಆದರೆ ಈ ಬಾರಿ ಆದ್ಯಾವುದೇ ಇಲ್ಲದೆ ಕೇವಲ ದೇವಾಲಯಗಳಲ್ಲಿ ದೇವರಿಗೆ ಪೂಜೆ ಸಲ್ಲಿಸಿ ಶ್ರೀ ರಾಮ ನವಮಿ ಹಬ್ಬವನ್ನು ಸರಳವಾಗಿ ಆಚರಿಸಿದ್ದು ಕಂಡು ಬಂದಿದೆ ಎಂದರು.
ಈ ಸಂದರ್ಭದಲ್ಲಿ ಚಿನ್ನಯ್ಯ, ಹರೀಶ್, ಸಿದ್ದಾರ್ಥ್(ಲಟ್ಟು), ಗೋಪಿ, ಮಾರುತಿ, ಪ್ರಕಾಶ್(ಗುಬ್ಬಿ), ಕಿರಣ್, ಜೈಭೀಮ್ ಪ್ರಕಾಶ್, ವಿನಾಯಕ, ಪ್ರಸನ್ನ, ಮಂಜುನಾಥ್, ನವೀನ್, ಮುನೇಂದ್ರ, ಕೆ ಆರ್ ಪುರಂ ಶಶಿ ಭಾಗವಹಿಸಿದ್ದರು.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…