ಕಲಬುರಗಿ: ಇಲ್ಲಿನ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಲ್ಲಿ ಕಳೆದ 30 ವರ್ಷಗಳಿಂದ ಗ್ರೂಪ್ ‘ಡಿ’ ನೌಕರನಾಗಿ ಸೇವೆ ಸಲ್ಲಿಸುತ್ತಿದ್ದ ನಾಗನಹಳ್ಳಿ ಗ್ರಾಮದ ನಿವಾಸಿ ಶಿವಶರಣಪ್ಪ ನಾರಾಯಪೂರ (50) ಅವರು ಹೃದಯಘಾತದಿಂದ ಗುರುವಾರ ಬೆಳಗಿನ ಜಾವ 5:30 ಗಂಟೆಗೆ ನಿಧನರಾಗಿದ್ದಾರೆ.
ಮೃತರು ಪತ್ನಿ, ಓರ್ವ ಪುತ್ರ, ಇಬ್ಬರು ಪುತ್ರಿಯರು ಸೇರಿದಂತೆ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ. ಅಂತ್ಯಕ್ರಿಯೆ ಗುರುವಾರ ಸ್ವಗ್ರಾಮ ನಾಗನಹಳ್ಳಿಯಲ್ಲಿ ನೆರವೇರಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.
ಇಲಾಖೆಯ ನೌಕರರ ಶಿವಶರಣಪ್ಪ ನಾರಾಯಣಪೂರ ಇವರ ನಿಧನಕ್ಕೆ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಉಪ ನಿರ್ದೇಶಕರು ಹಾಗೂ ಸಿಬ್ಬಂದಿ ವರ್ಗದವರು ಸಂತಾಪ ಸೂಚಿಸಿದ್ದಾರೆ.