ಶಹಾಬಾದನಲ್ಲಿ ಕೋವಿಡ್ ಚಿಕಿತ್ಸಾ ಕೇಂದ್ರ ಪ್ರಾರಂಭಿಸಲು ಒತ್ತಾಯ

0
49

ಶಹಾಬಾದ: ನಗರದಲ್ಲಿ ಕೋವಿಡ್ ಪ್ರಕರಣಗಳು ಕಂಡು ಬರುತ್ತಿರುವುದರಿಂದ ನಗರದ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಕೋವಿಡ್ ಚಿಕಿತ್ಸಾ ಕೇಂದ್ರ ಪ್ರಾರಂಭಿಸಬೇಕೆಂದು ನಗರಸಭೆಯ ಮಾಜಿ ಸ್ಥಾಯಿ ಸಮಿತಿ ಅಧ್ಯಕ್ಷ ಶರಣಬಸಪ್ಪ ಪಗಲಾಪೂರ ಆಗ್ರಹಿಸಿದ್ದಾರೆ.

ದಿನದಿಂದ ದಿನಕ್ಕೆ ಕೋವಿಡ್ ಪ್ರಕರಣಗಳು ಹೆಚ್ಚಾಗುತ್ತಿರುವುದು ಕಂಡು ಬರುತ್ತಿದೆ.ಕೋವಿಡ್ ರೋಗಿಗಳನ್ನು ವಾಹನಗಳ ಮೂಲಕ ಜಿಲ್ಲೆಯ ಅನೇಕ ಆಸ್ಪತ್ರೆಗಳಿಗೆ ಅಲೆದಾಡಿದರೂ, ಪ್ರವೇಶ ಸಿಗುತ್ತಿಲ್ಲ. ಆಕ್ಸಿಜನ್ ಕೊರತೆ, ಬೆಡ್ ಖಾಲಿ ಇಲ್ಲ ಎನ್ನುವ ಘಟನೆಗಳು ನಡೆದಿವೆ.ಅಲ್ಲದೇ ಶಹಾಬಾದಿಂದ ಕಲಬುರಗಿ ನಗರಕ್ಕೆ ಬಡವರು ಹೋಗಿ ಅಲೆದಾಡುವಂತಾಗಿದೆ.

Contact Your\'s Advertisement; 9902492681

ಆದ್ದರಿಂದ ಸ್ಥಳೀಯ ಮಟ್ಟದಲ್ಲಿ ಕೋವಿಡ್ ಚಿಕಿತ್ಸಾ ಕೇಂದ್ರವನ್ನು ತೆಗೆದರೇ, ಬಡವರ ಪಾಲಿಗೆ ಸಂಜೀವಿನಿಯಾದಂತಾಗುತ್ತದೆ. ನಗರಸಭೆಯ ಶುಕ್ರವಾರ ಶಾಸಕ ಬಸವರಾಜ ಮತ್ತಿಮಡು ಅವರ ಸಮ್ಮುಖದಲ್ಲಿ ನಡೆಯುವ ಕೋವಿಡ್ ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಬೇಕೆಂದು ಶಾಸಕರಿಗೆ, ಅಧಿಕಾರಿಗಳಿಗೆ ಒತ್ತಾಯಿಸಿದರು.ಅಲ್ಲದೇ ನಗರದಲ್ಲಿ ಕೋವಿಡ್ ಮಾರ್ಗಸೂಚಿಗಳನ್ನು ಸಾರ್ವಜನಿಕರು ಹಾಗೂ ಮುಖಂಡರು ಪಾಲಿಸುತ್ತಿಲ್ಲ.ಅದಕ್ಕಾಗಿ ಕಠಿಣ ಕ್ರಮಗಳನ್ನು ಕೈಗೊಳ್ಳಬೇಕೆಂದು ಸೂಚಿಸಿದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here