ಕೋವಿಡ್ 19 ರೋಗಿಗಳ ಚಿಕಿತ್ಸೆಗೆ ಖಾಸಗಿ ಆಸ್ಪತ್ರೆಗಳು ನೋಂದಾವಣೆ ಮಾಡಲು ಮನವಿ

0
27

ಬೆಂಗಳೂರು: ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಅಂಗಸಂಸ್ಥೆಯಾದ ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ಟ್ ಮೂಲಕ ಕೋವಿಡ್-19 ರೋಗಿಗಳಿಗೆ ಚಿಕಿತ್ಸೆ ಒದಗಿಸಲಾಗುತ್ತಿದೆ. ಸದರಿ ಚಿಕಿತ್ಸಾ ಸೌಲಭ್ಯಗಳ ಬಗ್ಗೆ ಹಾಗೂ ಕೋವಿಡ್ ರೋಗಿಗಳಿಗೆ ಚಿಕಿತ್ಸೆ ಒದಗಿಸುವ ಸಲುವಾಗಿ ಖಾಸಗಿ ಆಸ್ಪತ್ರೆಗಳು ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ಟ್‍ನೊಂದಿಗೆ ನೋಂದಾವಣೆ ಮಾಡಿಕೊಳ್ಳಬಹುದಾಗಿದೆ.

• ಕೋವಿಡ್ ಸಾಂಕ್ರಾಮಿಕ ರೋಗ ದಿನ ದಿನಕ್ಕೂ ಉಲ್ಬಣಗೊಳ್ಳುತ್ತಿದೆ. ಇಂತಹ ಸಂಕಷ್ಟದ ಸಂದರ್ಭದಲ್ಲಿ ಕೋವಿಡ್ ರೋಗಿಗಳಿಗೆ ಸೂಕ್ತ ಚಿಕಿತ್ಸೆ ಒದಗಿಸುವುದು ಆರೋಗ್ಯ ಸೇವಾಕರ್ತರ ಬಹು ಮುಖ್ಯ ಹೊಣೆಗಾರಿಕೆಯಾಗಿರುತ್ತದೆ.

Contact Your\'s Advertisement; 9902492681

• ಸಾರ್ವಜನಿಕ ಆಸ್ಪತ್ರೆಗಳು ಹಾಗೂ ಖಾಸಗಿ ಆಸ್ಪತ್ರೆಗಳು ಜೊತೆಗೂಡಿ ಈ ಸಂಕ್ರಾಮಿಕ ರೋಗದ ವಿರುದ್ದ ಹೋರಾಡಬೇಕಾಗಿದೆ ಹಾಗೂ ಕೋವಿಡ್-19 ನಿಂದ ಬಳಲುತ್ತಿರುವ ರೋಗಿಗಳಿಗೆ ಅಗತ್ಯ ಚಿಕಿತ್ಸೆ ಒದಗಿಸುವುದು ಅತ್ಯಂತ ಅವಶ್ಯಕವಾಗಿದೆ.

• ಈ ಹಿನ್ನೆಲೆಯಲ್ಲಿ ರಾಜ್ಯದಲ್ಲಿರುವ ಎಲ್ಲ ಖಾಸಗಿ ಆಸ್ಪತ್ರೆಗಳು ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ಟ್ ನೊಂದಿಗೆ ನೋಂದಾವಣೆ ಮಾಡಿಕೊಳ್ಳಬೇಕೆಂದು ಈ ಮೂಲಕ ಎಲ್ಲ ಖಾಸಗಿ ಆಸ್ಪತ್ರೆಗಳಲ್ಲಿ ವಿನಂತಿಸಲಾಗಿದೆ.

• ಈ ನೋಂದಾವಣೆ ಪ್ರಕ್ರಿಯೆಯು ಅತ್ಯಂತ ಸರಳ ಹಾಗು ಸುಲಭವಾಗಿದ್ದುhttps://sast.karnataka.gov.in  ವೆಬ್‍ಸೈಟ್ ಮೂಲಕ ಖಾಸಗಿ ಆಸ್ಪತ್ರೆಗಳು ನೋಂದಾವಣೆ ಮಾಡಿಕೊಳ್ಳಬಹುದಾಗಿದೆ.

https://sast.karnataka.gov.in  ವೆಬ್‍ಸೈಟ್‍ಗೆ ಭೇಟಿ ನೀಡಿ New empanelment request  ಅನ್ನು ಕ್ಲಿಕ್ ಮಾಡುವುದು.

• ಇದರ ನಂತರ empanelment request ನಲ್ಲಿ ಕೋರಲಾದ ಆಸ್ಪತ್ರೆಯ ವಿವರಗಳನ್ನು ಭರ್ತಿ ಮಾಡಿ, ಅವಶ್ಯಕ ದಾಖಲೆಗಳೊಂದಿಗೆ ಆನ್‍ಲೈನ್‍ನಲ್ಲಿ ಸಲ್ಲಿಸುವುದು.

• ನಂತರದಲ್ಲಿ ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ಟ್ ಸದರಿ empanelment  ಕೋರಿಕೆಯನ್ನು ಪರಿಶೀಲಿಸಿ ಆನ್‍ಲೈನ್ ಮೂಲಕವೇ ಅನುಮೋದನೆ ನೀಡುತ್ತದೆ.

• ಆದ್ದರಿಂದ ದಯಮಾಡಿ ಎಲ್ಲ ಖಾಸಗಿ ಆಸ್ಪತ್ರೆಗಳು ನೋಂದಾವಣೆ ಮಾಡಿಕೊಳ್ಳುವ ಮೂಲಕ ಕೋವಿಡ್ ರೋಗಿಗಳಿಗೆ ಚಿಕಿತ್ಸೆ ನೀಡಲು ನೆರವಾಗುವಂತೆ ಈ ಮೂಲಕ ಕೋರಲಾಗಿದೆ.

• ಹೆಚ್ಚಿನ ವಿವರಗಳಿಗಾಗಿ ವೆಬ್‍ಸೈಟ್  http://arogya.karnataka.gov.in/sast/    ಭೇಟಿ ನೀಡಿ ಮತ್ತು ಟೋಲ್ ಫ್ರೀ ಸಂಖ್ಯೆ: 1800 425 8330 ಅನ್ನು ಸಂಪರ್ಕಿಸಿ:

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here