ಬೆಂಗಳೂರು: ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಅಂಗಸಂಸ್ಥೆಯಾದ ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ಟ್ ಮೂಲಕ ಕೋವಿಡ್-19 ರೋಗಿಗಳಿಗೆ ಚಿಕಿತ್ಸೆ ಒದಗಿಸಲಾಗುತ್ತಿದೆ. ಸದರಿ ಚಿಕಿತ್ಸಾ ಸೌಲಭ್ಯಗಳ ಬಗ್ಗೆ ಹಾಗೂ ಕೋವಿಡ್ ರೋಗಿಗಳಿಗೆ ಚಿಕಿತ್ಸೆ ಒದಗಿಸುವ ಸಲುವಾಗಿ ಖಾಸಗಿ ಆಸ್ಪತ್ರೆಗಳು ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ಟ್‍ನೊಂದಿಗೆ ನೋಂದಾವಣೆ ಮಾಡಿಕೊಳ್ಳಬಹುದಾಗಿದೆ.
• ಕೋವಿಡ್ ಸಾಂಕ್ರಾಮಿಕ ರೋಗ ದಿನ ದಿನಕ್ಕೂ ಉಲ್ಬಣಗೊಳ್ಳುತ್ತಿದೆ. ಇಂತಹ ಸಂಕಷ್ಟದ ಸಂದರ್ಭದಲ್ಲಿ ಕೋವಿಡ್ ರೋಗಿಗಳಿಗೆ ಸೂಕ್ತ ಚಿಕಿತ್ಸೆ ಒದಗಿಸುವುದು ಆರೋಗ್ಯ ಸೇವಾಕರ್ತರ ಬಹು ಮುಖ್ಯ ಹೊಣೆಗಾರಿಕೆಯಾಗಿರುತ್ತದೆ.
• ಸಾರ್ವಜನಿಕ ಆಸ್ಪತ್ರೆಗಳು ಹಾಗೂ ಖಾಸಗಿ ಆಸ್ಪತ್ರೆಗಳು ಜೊತೆಗೂಡಿ ಈ ಸಂಕ್ರಾಮಿಕ ರೋಗದ ವಿರುದ್ದ ಹೋರಾಡಬೇಕಾಗಿದೆ ಹಾಗೂ ಕೋವಿಡ್-19 ನಿಂದ ಬಳಲುತ್ತಿರುವ ರೋಗಿಗಳಿಗೆ ಅಗತ್ಯ ಚಿಕಿತ್ಸೆ ಒದಗಿಸುವುದು ಅತ್ಯಂತ ಅವಶ್ಯಕವಾಗಿದೆ.
• ಈ ಹಿನ್ನೆಲೆಯಲ್ಲಿ ರಾಜ್ಯದಲ್ಲಿರುವ ಎಲ್ಲ ಖಾಸಗಿ ಆಸ್ಪತ್ರೆಗಳು ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ಟ್ ನೊಂದಿಗೆ ನೋಂದಾವಣೆ ಮಾಡಿಕೊಳ್ಳಬೇಕೆಂದು ಈ ಮೂಲಕ ಎಲ್ಲ ಖಾಸಗಿ ಆಸ್ಪತ್ರೆಗಳಲ್ಲಿ ವಿನಂತಿಸಲಾಗಿದೆ.
• ಈ ನೋಂದಾವಣೆ ಪ್ರಕ್ರಿಯೆಯು ಅತ್ಯಂತ ಸರಳ ಹಾಗು ಸುಲಭವಾಗಿದ್ದುhttps://sast.karnataka.gov.in ವೆಬ್‍ಸೈಟ್ ಮೂಲಕ ಖಾಸಗಿ ಆಸ್ಪತ್ರೆಗಳು ನೋಂದಾವಣೆ ಮಾಡಿಕೊಳ್ಳಬಹುದಾಗಿದೆ.
• https://sast.karnataka.gov.in ವೆಬ್‍ಸೈಟ್‍ಗೆ ಭೇಟಿ ನೀಡಿ New empanelment request ಅನ್ನು ಕ್ಲಿಕ್ ಮಾಡುವುದು.
• ಇದರ ನಂತರ empanelment request ನಲ್ಲಿ ಕೋರಲಾದ ಆಸ್ಪತ್ರೆಯ ವಿವರಗಳನ್ನು ಭರ್ತಿ ಮಾಡಿ, ಅವಶ್ಯಕ ದಾಖಲೆಗಳೊಂದಿಗೆ ಆನ್‍ಲೈನ್‍ನಲ್ಲಿ ಸಲ್ಲಿಸುವುದು.
• ನಂತರದಲ್ಲಿ ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ಟ್ ಸದರಿ empanelment ಕೋರಿಕೆಯನ್ನು ಪರಿಶೀಲಿಸಿ ಆನ್‍ಲೈನ್ ಮೂಲಕವೇ ಅನುಮೋದನೆ ನೀಡುತ್ತದೆ.
• ಆದ್ದರಿಂದ ದಯಮಾಡಿ ಎಲ್ಲ ಖಾಸಗಿ ಆಸ್ಪತ್ರೆಗಳು ನೋಂದಾವಣೆ ಮಾಡಿಕೊಳ್ಳುವ ಮೂಲಕ ಕೋವಿಡ್ ರೋಗಿಗಳಿಗೆ ಚಿಕಿತ್ಸೆ ನೀಡಲು ನೆರವಾಗುವಂತೆ ಈ ಮೂಲಕ ಕೋರಲಾಗಿದೆ.
• ಹೆಚ್ಚಿನ ವಿವರಗಳಿಗಾಗಿ ವೆಬ್‍ಸೈಟ್ http://arogya.karnataka.gov.in/sast/ ಭೇಟಿ ನೀಡಿ ಮತ್ತು ಟೋಲ್ ಫ್ರೀ ಸಂಖ್ಯೆ: 1800 425 8330 ಅನ್ನು ಸಂಪರ್ಕಿಸಿ:
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…