ಶಹಾಪುರ: ಸಾರ್ವಜನಿಕರ ಗಮನ ಬೇರೆಡೆ ಸೆಳೆದು ಹಣ ದೋಚುತ್ತಿದ್ದ ಅಂತರರಾಜ್ಯ ಕಳ್ಳರ ಗುಂಪೊಂದನ್ನು ಇಂದು ಬೆಳಗ್ಗೆ 4 ಗಂಟೆಯ ಸುಮಾರಿಗೆ ಶಹಾಪುರ ನಗರದ ಬಿ.ಗುಡಿ ರಸ್ತೆಯ ಕೆಇಬಿ ಹತ್ತಿರ ಪೊಲೀಸರು ಬಂಧಿಸಿದ್ದಾರೆ.
ಬಂಧಿತರಾದ 4 ಜನ ಕಳ್ಳರಲ್ಲಿ ಆಂಧ್ರ ಪ್ರದೇಶದ ನೆಲ್ಲೂರು ಜಿಲ್ಲೆಯವರಾಗಿದ್ದಾರೆ ಎಂದು ವಿಚಾರಣೆ ವೇಳೆ ತಿಳಿದು ಬಂದಿದೆ ಬಂಧಿತ ನಾಲ್ಕು ಜನರಲ್ಲಿ ಒಬ್ಬ ಕಳ್ಳ ಓಡಿ ಹೋಗಿದ್ದಾನೆ.
ಅಂತಾರಾಜ್ಯ ಕಳ್ಳರಿಂದ ಸುಮಾರು 2.60.000 ಸಾವಿರ ರೂಪಾಯಿ ನಗದು ಹಾಗೂ ೪ ಲಕ್ಷ ರೂಪಾಯಿಗಳ ಅಂದಾಜು ಮೌಲ್ಯದ ವಾಹನಗಳನ್ನು ಜಪ್ತಿ ಮಾಡಲಾಗಿದೆ.
ಯಾದಗಿರಿ ಜಿಲ್ಲಾ ಪೊಲೀಸ್ ವರಿಷ್ಠಾದಿಕಾರಿಗಳಾದ ಹೃಷಿಕೇಶ್ ಭಗವಾನ್, ಹಾಗೂ ಸುರಪುರದ ಉಪ ವಿಭಾಗದ ಉಪಾಧೀಕ್ಷಕರಾದ ಶಿವನಗೌಡ ಪಾಟೀಲ್, ಅವರ ಮಾರ್ಗದರ್ಶನದಲ್ಲಿ ಶಹಾಪುರ ಪೊಲೀಸ್ ಠಾಣೆಯ ಸರ್ಕಲ್ ಇನ್ಸ್ಪೆಕ್ಟರ್ ನಾಗರಾಜ ಜೆ.ಅವರ ನೇತೃತ್ವದಲ್ಲಿ ಕಳ್ಳರನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಕಳ್ಳರನ್ನು ಪತ್ತೆ ಹಚ್ಚಿ ಬಂಧಿಸುವಲ್ಲಿ ಸಿಬ್ಬಂದಿಗಳಾದ ಹೊನ್ನಪ್ಪ ,ಸತೀಶ್ ಕುಮಾರ್, ಬಸವರಾಜ್, ಗಣಪತಿ, ಗಜೇಂದ್ರ , ಬಾಬು, ತಂಡದಲ್ಲಿದ್ದರು.
ಈ ಪ್ರಕರಣ ಕುರಿತು ಶಹಾಪುರ ಪೊಲೀಸ್ ಠಾಣೆಯಲ್ಲಿ ಮೊಕದ್ದಮೆ ದಾಖಲಾಗಿದೆ.
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…